ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಾರ್ಯ ಶ್ಲಾಘನೀಯ
Team Udayavani, Jan 19, 2019, 11:58 AM IST
ತಾವರಗೇರಾ: ಸ್ವಾಸ್ಥ ಸಮಾಜ ನಿರ್ಮಾಣಕ್ಕಾಗಿ ಮಹಿಳೆಯರೊಂದಿಗೆ ನಮ್ಮ ಸಂಸ್ಥೆಯು ಪ್ರಮಾಣಿಕವಾಗಿ ರಾಜ್ಯಾದ್ಯಂತ ಉತ್ತಮ ಕೆಲಸ ಮಾಡುತ್ತಿದ್ದು, ಈಗಾಗಲೇ 4.65 ಲಕ್ಷ ಸಂಘಗಳು ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿವೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹೈಕ ಪ್ರಾದೇಶಿಕ ವಿಭಾಗದ ನಿರ್ದೇಶಕ ಪಿ. ಗಂಗಾಧರ ರೈ ಹೇಳಿದರು.
ಅವರು ಪಟ್ಟಣದ ಶ್ರೀವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಶುಕ್ರವಾರ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕುಷ್ಟಗಿ, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಹಿಳೆಯರ ಸ್ವಾವಲಂಬಿ ಜೀವನಕ್ಕಾಗಿ ಅನುಕೂಲವಾಗುವ ಉದ್ದೇಶದಿಂದ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ| ವೀರೇಂದ್ರ ಹೆಗ್ಗಡೆಯವರು 10 ರಾಷ್ಟ್ರೀಕೃತ ಬ್ಯಾಂಕುಗಳ ಮೂಲಕ ಹಣವನ್ನು ಪಡೆದು ಸಾಲದ ರೂಪದಲ್ಲಿ ಮಹಿಳಾ ಸಂಘಗಳಿಗೆ ನೀಡುತ್ತಿರುವುದು ಶ್ಲಾಘನೀಯ ಕಾರ್ಯ ಮತ್ತು ಇದರ ಜೊತೆಗೆ ರೈತರಿಗೆ ಅನುಕೂಲವಾಗುವ ಉದ್ದೇಶದಿಂದ ರಾಜ್ಯದಲ್ಲಿ ನೂರಾರು ಕೆರೆಗಳ ಹೂಳೆತ್ತುವ ಕೆಲಸ ಮಾಡಿದ್ದಾರೆ. ಅಷ್ಟಲ್ಲದೆ 1400 ಮದ್ಯವರ್ಜನೆ ಶಿಬಿರಗಳನ್ನು ಹಮ್ಮಿಕೊಂಡು ಸಾವಿರಾರು ಜನರನ್ನು ಮದ್ಯ ವ್ಯಸನಮುಕ್ತರಾಗಿ ಮಾಡಿದ್ದಾರೆ ಎಂದು ಹೇಳಿದರು.
ನಂತರ ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಮುದೇನೂರ ಶ್ರೀವಿಜಯ ಚಂದ್ರಶೇಖರಮಠದ ಶ್ರೀಸಿದ್ದಲಿಂಗದೇವರು ಆಶೀರ್ವಚನ ನೀಡಿ, ತಾಯಿಗಿಂತ ಮಿಗಿಲಾದ ದೇವರಿಲ್ಲ. ಹತ್ತು ದೇವರನ್ನು ಪೂಜಿಸುವುದಕ್ಕಿಂತ ಹೆತ್ತವರನ್ನು ಪೂಜಿಸಿ, ದೇವರ ಸ್ವರೂಪದಲ್ಲಿ ಕಾಣಬೇಕು. ನಮ್ಮ ದೇಶದ ಸಂಸ್ಕೃತಿಯನ್ನು ಮರೆತು ಮಹಿಳೆಯರು ಪಾಶ್ಚಿಮಾತ್ಯ ಸಂಸ್ಕೃತಿಯನ್ನು ಅಳವಡಿಸಿಕೊಳ್ಳುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ನಮ್ಮ ದೇಶದ ಸಂಸ್ಕೃತಿಯನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು. ಶ್ರೀಕ್ಷೇತ್ರ ಧರ್ಮಸ್ಥಳ ಸಂಸ್ಥೆಯವರು ಸಂಘಗಳ ಮೂಲಕ ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದರ ಜೊತೆಗೆ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಧರ್ಮದ ಜ್ಯೋತಿಯನ್ನು ಬೆಳಗಿಸುತ್ತಿದ್ದಾರೆ ಎಂದು ಹೇಳಿದರು. ನಂತರ ಧಾರ್ಮಿಕ ವಿಶೇಷ ಉಪನ್ಯಾಸವನ್ನು ಸರಕಾರಿ ಬಾಲಕಿಯರ ಪಪೂ ಕಾಲೇಜಿನ ಪ್ರಾಚಾರ್ಯ ಡಾ| ಎಸ್.ಎಸ್. ಪೋರೆ ನೀಡಿದರು.
ಇದಕ್ಕೂ ಮುನ್ನ ಸಾಮೂಹಿಕ ಶ್ರೀಸತ್ಯನಾರಾಯಣ ಪೂಜೆ ನೆರವೇರಿಸಲಾಯಿತು. ವೇದಿಕೆಯಲ್ಲಿ ಶೇಖರಗೌಡ ಪೊಲೀಸಪಾಟೀಲ, ಗುರುಮೂರ್ತಿ ಹಿರೇಮಠ, ಮಲ್ಲಪ್ಪ ಜುಮಲಾಪುರ, ರುದ್ರಪ್ಪ ಅಕ್ಕಿ, ಈರಣ್ಣ ರೋಣದ, ಅಂಬುಜಾಕ್ಷಿ, ವೆಂಕಟೇಶ ಮಡಿವಾಳರ ಸೇರಿದಂತೆ ತಾವರಗೇರಾ ವಲಯದ ನೂರಾರು ಸ್ವಸಹಾಯ ಸಂಘಗಳ ಪ್ರತಿನಿಧಿಗಳು, ಸದಸ್ಯರಿದ್ದರು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕು ಮೇಲ್ವಿಚಾರಕ ವಿನಾಯಕ ಸ್ವಾಗತಿಸಿದರು. ಪ್ರಕಾಶ ನಿರೂಪಿಸಿದರು. ವಲಯ ಮೇಲ್ವಿಚಾರಕ ಹುಸೇನ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope; ಇಷ್ಟಾರ್ಥ ಸಿದ್ಧಿಯ ದಿನ..ಉದ್ಯೋಗ ಸ್ಥಾನದಲ್ಲಿ ಸದ್ಯಕ್ಕೆ ನಿಶ್ಚಿಂತೆ
Milk: ಕರ್ನಾಟಕ ಗಡಿಯ ಹಾಲು ಕೇರಳ ಪಾಲು! ಖರೀದಿ ದರ ಇಲ್ಲಿಗಿಂತ ಕೇರಳದಲ್ಲೇ ಅಧಿಕ
Congress: ಜಮೀರ್ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ ದೂರು
Olympics; 2036ರ ಒಲಿಂಪಿಕ್ಸ್‌ಗೆ ಬಿಡ್: ಭಾರತದಿಂದ ಐಒಸಿಗೆ ಅಧಿಕೃತ ಅರ್ಜಿ
Belagavi: ಎಸ್‌ಡಿಎ ಆತ್ಮಹ*ತ್ಯೆ: ಸಚಿವೆ ಹೆಬ್ಬಾಳ್ಕರ್ ರಾಜೀನಾಮೆಗೆ ಬಿಜೆಪಿ ಪಟ್ಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.