ಏಟು ತಿಂದು ಆಸ್ಪತ್ರೆಗೆ ದಾಖಲಾದ ಶಾಸಕ ಆನಂದ್ ಸಿಂಗ್
Team Udayavani, Jan 20, 2019, 5:31 AM IST
ಬೆಂಗಳೂರು: ಈಗಲ್ಟನ್ ರೆಸಾರ್ಟ್ ನಲ್ಲಿ ಬೀಡುಬಿಟ್ಟಿರುವ ಕಾಂಗ್ರೆಸ್ ನಾಯಕರ ನಡುವೆ ಭಿನ್ನಾಪ್ರಾಯ ಮೂಡಿದೆ. ಬಳ್ಳಾರಿ ಜಿಲ್ಲೆಯ ಚರ್ಚೆಯ ವೇಳೆ ಬಳ್ಳಾರಿ ಶಾಸಕರಾದ ಆನಂದ ಸಿಂಗ್ ಮತ್ತು ಜೆ.ಎನ್.ಗಣೇಶ್ ಜಗಳವಾಡಿದ್ದಾರೆಂದು ಮಾಧ್ಯಮಗಳು ವರದಿ ಮಾಡಿವೆ. ಇದರಿಂದಾಗಿ ಶಾಸಕ ಆನಂದ್ ಸಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆನಂದ ಸಿಂಗ್ ರನ್ನು ರವಿವಾರ ಬೆಳಗ್ಗೆ 7 ಗಂಟೆಗೆ ಆಸ್ಪತ್ರಗೆ ದಾಖಲೆ ಮಾಡಲಾಗಿದೆ. ಬೆಂಗಳೂರಿನ ಅಪೋಲೋ ಆಸ್ಪತ್ರಗೆ ಬಿಗು ಪೊಲೀಸ್ ಬಂದೋ ಬಸ್ತ್ ಮಾಡಲಾಗಿದೆ. ಸಂಸದ ಡಿ.ಕೆ.ಸುರೇಶ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ಇದೀಗ ಲಭ್ಯವಾಗಿರುವ ಮಾಹಿತಿ ಪ್ರಕಾರ ಅಪರೇಷನ್ ಕಮಲ ವಿಚಾರಕ್ಕೆ ಸಂಬಂಧಿಸಿದಂತೆ ಆನಂದ ಸಿಂಗ್ ಹಾಗೂ ಜೆ.ಎನ್. ಗಣೇಶ್ ನಡುವೆ ಮಾತಿನಚಕಮಕಿ ನಡೆದಿದೆ. ಮತ್ತು ಒಂದು ಹಂತದಲ್ಲಿ ಇದು ವಿಕೋಪಕ್ಕೆ ತಿರುಗಿ ಹೊಯ್-ಕೈ ಮಟ್ಟಕ್ಕೆ ಹೋಗಿದೆ ಎಂದು ತಿಳಿದುಬಂದಿದೆ. ಈ ಸಂದರ್ಭದಲ್ಲಿ ಗಣೇಶ್ ಅವರು ಆನಂದ್ ಸಿಂಗ್ ಅವರ ತಲೆಗೆ ಬಾಟ್ಲಿಯಲ್ಲಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಇವರಿಬ್ಬರ ಜಗಳವನ್ನು ಬಿಡಿಸಲು ಅಲ್ಲಿದ್ದ ಇತರೇ ಕಾಂಗ್ರೆಸ್ ಶಾಸಕರು ಬಹಳಷ್ಟು ಶ್ರಮವಹಿಸಿದರು ಎಂಬ ಅಂಶವೂ ತಿಳಿದುಬಂದಿದೆ.
ಮನಸ್ತಾಪ ಇಲ್ಲ : ಡಿ.ಕೆ.ಶಿ
ರೆಸಾರ್ಟ್ ನಲ್ಲಿ ಬಳ್ಳಾರಿ ಶಾಸಕರ ನಡುವೆ ಯಾವುದೇ ಜಗಳವಾಗಿಲ್ಲ. ನಮ್ಮ ಶಾಸಕರಲ್ಲಿ ಯಾವುದೇ ಮನಸ್ತಾಪ ಇಲ್ಲ. ಆನಂದ್ ಸಿಂಗ್ ಕುಟುಂಬದವರ ಜೊತೆ ಮದುವೆಗೆ ಹೋಗಿದ್ದಾರೆ ಎಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಆದರೆ ಈಗ ಆನಂದ್ ಸಿಂಗ್ ಆಸ್ಪತ್ರೆ ಗೆ ದಾಖಲಾಗಿದ್ದು ಈಗ ಹಲವು ಅನುಮಾನಗಳಿಗೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Award: ಪ್ರೊ.ತಾಳ್ತಜೆ ವಸಂತ ಕುಮಾರ್ಗೆ ಕನಕ ಗೌರವ ಪ್ರಶಸ್ತಿ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Police FIR: ಎಫ್ಐಆರ್ ದಾಖಲಿಸಿ ನನ್ನ ವಿರುದ್ಧ ಸರ್ಕಾರದಿಂದ ದ್ವೇಷ ಸಾಧನೆ: ಎಚ್ಡಿಕೆ
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
MUST WATCH
ಹೊಸ ಸೇರ್ಪಡೆ
Award: ಪ್ರೊ.ತಾಳ್ತಜೆ ವಸಂತ ಕುಮಾರ್ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.