ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ಶಿಫಾರಸಿಗೆ ನಿರ್ಣಯ
Team Udayavani, Jan 21, 2019, 6:44 AM IST
ಬೆಂಗಳೂರು: ನಡೆದಾಡುವ ದೇವರು, ತುಮಕೂರು ಸಿದ್ಧಗಂಗಾ ಮಠದ ಶತಾಯುಷಿ ಶ್ರೀ ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ಅಖೀಲ ಭಾರತ ವೀರಶೈವ ಮಹಾಸಭೆಯ ವಾರ್ಷಿಕ ಸರ್ವ ಸದಸ್ಯರ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ಶನಿವಾರ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆಯಲ್ಲಿ ತರಳಬಾಳು ಕೇಂದ್ರದಲ್ಲಿ ನಡೆದ ವಾರ್ಷಿಕ ಸರ್ವ ಸದಸ್ಯರ ಸಭೆಯಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ ನೀಡುವಂತೆ ಶಿಫಾರಸು ಮಾಡಲು ನಿರ್ಣಯ ಮಂಡಿಸಲಾಗಿದ್ದು,
ಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿದೆ ಎಂದು ಮಹಾಸಭೆ ಕಾರ್ಯದರ್ಶಿ ಎಚ್.ಎಂ.ರೇಣುಕಾ ಪ್ರಸನ್ನ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದೇ ವೇಳೆ, ಅನಾರೋಗ್ಯದಿಂದ ಬಳಲುತ್ತಿರುವ ಸ್ವಾಮೀಜಿಯವರು ಶೀಘ್ರ ಗುಣಮುಖರಾಗಲಿ ಎಂದು ಸಭೆಯಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.