ಆಧುನಿಕ ಕೃಷಿಯಲ್ಲಿ ನೂತನ ತಳಿ-ತಂತ್ರಜ್ಞಾನ ಬಳಸಿ

Team Udayavani, Jan 21, 2019, 10:05 AM IST

21-january-14.jpg

ಗದಗ: ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೃಷಿ ಇಲಾಖೆ ಹಾಗೂ ದುಂದೂರಿನ ಕರ್ನಾಟಕ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಆಶ್ರಯದಲ್ಲಿ ತಾಲೂಕಿನ ದುಂದೂರು ಗ್ರಾಮದ ಎಫ್‌.ಎಸ್‌. ನೀಲಗುಂದ ಅವರ ಹೊಲದಲ್ಲಿ ಹಿಂಗಾರು ಜೋಳ ಹಾಗೂ ಕಡಲೆ ಬೆಳೆಗಳ ಕ್ಷೇತ್ರೋತ್ಸವ ಜರುಗಿತು.

ಸಾನ್ನಿಧ್ಯ ವಹಿಸಿದ್ದ ದುಂದೂರು ಫಕ್ಕೀರ ಸ್ವಾಮೀಜಿ ಮಾತನಾಡಿ, ವಿಜ್ಞಾನಿಗಳು ಅಭಿವೃದ್ಧಿ ಪಡಿಸಿ, ರೈತರ ಕ್ಷೇತ್ರಗಳಲ್ಲಿ ಮಾಡಿ ತೋರಿಸಿದ ನೂತನ ತಳಿ, ತಂತ್ರಜ್ಞಾನ ಬಳಸಬೇಕು. ಇದರಿಂದ ಕಡಿಮೆ ಖರ್ಚು ಮತ್ತು ನೀರಿನ ಮಿತ ಬಳಕೆಯಿಂದ ಹೆಚ್ಚಿನ ಹಿಳುವರಿ ಮತ್ತು ವೈಜ್ಞಾನಿಕ ಕೃಷಿ ಮಾಡಬೇಕು ಎಂದು ಸಲಹೆ ನೀಡಿದರು.

ಡಾ| ಸಿ.ಎಂ. ರಫಿ ಮಾತನಾಡಿ, ಅಧಿಕ ಇಳುವರಿ ಕೊಡುವ ಹಿಂಗಾರಿ ಜೊಳ, ಕಡಲೆ, ಶೇಂಗಾ ಮತ್ತಿತರೆ ಬೆಳೆಗಳ ವಿವಿಧ ತಳಿಗಳ ಬಗ್ಗೆ ಜಿಲ್ಲೆಯಾದ್ಯಂತ ಕ್ಷೇತ್ರೋತ್ಸವ ಹಮ್ಮಿಕೊಳ್ಳಲಾಗುತ್ತಿದೆ. ಕ್ಷೇತ್ರೋತ್ಸವದಲ್ಲಿ ಭಾಗವಹಿಸಿದ ರೈತರು ಹಾಗೂ ಕೃಷಿ ಪರಿಕರ ಡೀಲರ್‌ಗಳು ಇಲ್ಲಿನ ಪ್ರಗತಿ ಬಗ್ಗೆ ಇನ್ನಿತರೆ ರೈತರಿಗೆ ಮಾಹಿತಿ ನೀಡಿ ಜಾಗೃತರನ್ನಾಗಿಸಬೇಕು. ಅದರೊಂದಿಗೆ ಇಡೀ ರೈತ ಸಮುದಾಯ ಅಭಿವೃದ್ಧಿ ಪಥದಲ್ಲಿ ಸಾಗಬೇಕು ಎಂದು ತಿಳಿಸಿದರು.

ಕೃಷಿ ವಿಶ್ವವಿದ್ಯಾಲಯದ ನಿವೃತ್ತ ಸಹ ವಿಸ್ತರಣಾ ನಿರ್ದೇಶಕ ಡಾ| ಆರ್‌.ಎ. ಬೂದಿಹಾಳ ಮಾತನಾಡಿ, ಹೊಸ ಜೋಳದ ತಳಿಯ ಈ ಬೀಜಗಳನ್ನು ರೈತರು ಸಂಗ್ರಹಿಸಿ ಮುಂದಿನ ವರ್ಷ ಬಳಸಬೇಕು. ಇಂತಹ ಕ್ಷೇತ್ರೋತ್ಸವಗಳಲ್ಲಿ ರೈತರು, ವಿಜ್ಞಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳ ಬೇಕು. ಕೃಷಿ ಇಲಾಖೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಏನೇ ಸಮಸ್ಯೆ, ಸಂದೇಹಗಳಿದ್ದರೂ ಪರಿಹಾರ ಕಂಡುಕೊಳ್ಳಬೇಕು ಎಂದು ಸಲಹೆ ನೀಡಿದರು.

ಸಹಾಯಕ ಕೃಷಿ ಅಧಿಕಾರಿ ಜನಗಾರ ಅವರು ಕೃಷಿ ಇಲಾಖೆ ಸೌಲಭ್ಯಗಳ ಬಗ್ಗೆ ರೈತರಿಗೆ ಮಾಹಿತಿ ನೀಡಿದರು. ಡಾ| ಎಸ್‌.ಡಿ. ಕೊಳ್ಳೋಳಗಿ, ಡಾ| ಎಂ. ಗೋಪಾಲ, ಡಾ| ಅಮರೇಶ ನಾಶಿ, ಡಾ| ಎಸ್‌.ವಿ. ಹಳಕಟ್ಟಿ, ಶ್ರೀನಿವಾಸ ನೀಲಗುಂದ, ಶಿವಾನಂದ ಜಲರಡ್ಡಿ, ನಾರಾಯಣಗೌಡ ಮೇಟಿ, ವೆಂಕಪ್ಪ ಭಂಡಿ, ಈಶ್ವರಗೌಡ ಹಂಚಿನಾಳ, ಮುತ್ತು ಹಡಪದ, ಫಕ್ಕೀರಗೌಡ ನೀಲಗುಂದ ಹಾಗೂ ಸುಮಾರು 150ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-lokk

Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

ಗದಗ: ಸರ್ಕಾರಿ ಶಾಲೆ ಗೋಡೆಗೆ ಚಂದದ ಚಿತ್ತಾರ – ಬಂದಿದೆ ಜಿಲ್ಲಾಮಟ್ಟದ ಪ್ರಶಸ್ತಿ…

ಗದಗ: ಸರ್ಕಾರಿ ಶಾಲೆ ಗೋಡೆಗೆ ಚಂದದ ಚಿತ್ತಾರ – ಬಂದಿದೆ ಜಿಲ್ಲಾಮಟ್ಟದ ಪ್ರಶಸ್ತಿ…

ಗದಗ: ರುದ್ರಭೂಮಿಗೆ ತೆರಳಲು ರಸ್ತೆಗಳದ್ದೇ ಸಮಸ್ಯೆ!

ಗದಗ: ರುದ್ರಭೂಮಿಗೆ ತೆರಳಲು ರಸ್ತೆಗಳದ್ದೇ ಸಮಸ್ಯೆ!

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

4-dandeli

Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.