ಪಿಎಲ್‌ಸಿ ಯೋಜನಾ ಕೈಪಿಡಿ ಬಿಡುಗಡೆ


Team Udayavani, Jan 21, 2019, 10:18 AM IST

chikk-1.jpg

ಚಿಕ್ಕಮಗಳೂರು: 2019-20ನೇ ಸಾಲಿಗಾಗಿ ನಬಾರ್ಡ್‌ ಸಿದ್ಧಪಡಿಸಿರುವ 5,54,194 ಲಕ್ಷ ರೂ.ಗಳ ಸಂಭವನೀಯ ಸಾಲ ವಿತರಣೆಯ ಅಂಕಿ ಅಂಶಗಳನ್ನೊಳಗೊಂಡ ಪಿಎಲ್‌ಸಿ ಯೋಜನಾ ಕೈಪಿಡಿಯನ್ನು ಜಿ.ಪಂ. ಉಪಕಾರ್ಯದರ್ಶಿ ರಾಜಗೋಪಾಲ್‌ ಬಿಡುಗಡೆ ಮಾಡಿದರು.

ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್‌ ಕಚೇರಿ ಸಭಾಂಗಣದಲ್ಲಿ ಶನಿವಾರ ಸಂಜೆ ಆಯೋಜಿಸಿದ್ದ ಜಿಲ್ಲೆಯ ಬ್ಯಾಂಕ್‌ ಪ್ರತಿನಿಧಿಗಳು ಹಾಗೂ ಅಭಿವೃದ್ಧಿ ಇಲಾಖಾ ಮುಖ್ಯಸ್ಥರ ಸಭೆಯಲ್ಲಿ ಕೈಪಿಡಿ ಬಿಡುಗಡೆ ಮಾಡಿ ಮಾತನಾಡಿದ ಅವರು, 2019ರ ಏಪ್ರಿಲ್‌ 1ರಿಂದ 2020ರ ಮಾರ್ಚ್‌ 31ರವರೆಗೆ ಜಿಲ್ಲಾದ್ಯಂತ ಬ್ಯಾಂಕ್‌ಗಳು ನೀಡಬಹುದಾದ ಸಾಲ ಬಿಡುಗಡೆಗೆ ಸಂಬಂಧಪಟ್ಟ ಯೋಜನೆ ರೂಪಿಸಲು ಇದು ಸಹಕಾರಿ ಎಂದರು.

ಸರ್ಕಾರದ ಕಾರ್ಯಕ್ರಮಗಳನ್ನು ಜಾರಿಗೊಳಿಸಲು ಜಿಲ್ಲೆಯ ಎಲ್ಲ ಬ್ಯಾಂಕ್‌ಗಳ ಸಹಕಾರ ಅಗತ್ಯವೆಂದ ರಾಜಗೋಪಾಲ್‌, ಆಧುನಿಕ ತಂತ್ರಜ್ಞಾನ ಬಳಕೆಮಾಡಿಕೊಂಡು ವಿದ್ಯಾರ್ಥಿಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಮತ್ತಿತರ ಫಲಾನುಭವಿಗಳಿಗೆ ತೊಂದರೆಯಾಗದಂತೆ ಕ್ಷಿಪ್ರಗತಿಯಲ್ಲಿ ಕಾರ್ಯನಿರ್ವಹಿಸುವಂತೆ ಮನವಿ ಮಾಡಿದರು.

ನಬಾರ್ಡ್‌ ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕ ಇ.ಪ್ರತಾಪ್‌ ಅಧ್ಯಕ್ಷತೆ ವಹಿಸಿ ಮಾತನಾಡಿ, ಪಿಎಲ್‌ಪಿ(ಪೊಟೆನ್ಷಿಯಲ್‌ ಲಿಂಕ್ಡ್ ಕ್ರೆಡಿಟ್ ಪ್ಲಾನ್‌) ಜಿಲ್ಲೆಯ ಸಾಮರ್ಥ್ಯಕ್ಕನುಗುಣವಾದ ಸಮತೋಲನದ ಆರ್ಥಿಕ ಬೆಳವಣಿಗೆಗೆ ಪೂರಕವಾಗಿ ಸಿದ್ಧಪಡಿಸಲಾಗಿದೆ. ಜಿಲ್ಲಾದ್ಯಂತ ಎಲ್ಲ ಪ್ರದೇಶಗಳ ಬೇಡಿಕೆ ಮತ್ತು ಸಾಮರ್ಥ್ಯ ಅರಿತು ಮುಂಬರುವ ದಿನಗಳಲ್ಲಿ ವಿವಿಧ ವಲಯಗಳಿಗೆ ವಿತರಿಸಬಹುದಾದ ಸಾಲದ ಪ್ರಮಾಣದ ಬಗ್ಗೆ ಬೆಳಕು ಚೆಲ್ಲಲಾಗಿದೆ ಎಂದರು.

ಕೃಷಿ ವಲಯ ಪ್ರಥಮ ಆದ್ಯತೆಯಾಗಿದ್ದು, ಬೆಳೆಸಾಲ 2,88,891 ಲಕ್ಷ ರೂ.ಗಳನ್ನು ಜೊತೆಗೆ ಅವಧಿಸಾಲವಾಗಿ 96,276 ಲಕ್ಷ ರೂ. ಸೇರಿದಂತೆ 3,85,167ಲಕ್ಷ ರೂ.ಗಳನ್ನು ವಿತರಿಸುವ ಅವಕಾಶವಿದೆ. ಕೃಷಿ ಚಟುವಟಿಕೆಗಳಿಗೆ ಮೂಲ ಸೌಕರ್ಯ ನಿರ್ಮಾಣಕ್ಕಾಗಿ 32,810ಲಕ್ಷ ರೂ., ಕೃಷಿಗೆ ಪೂರಕವಾಗಿ ಹಸು, ಎಮ್ಮೆ, ಕುರಿ, ಕೋಳಿ, ಹಂದಿ ಮತ್ತಿತರ ಪ್ರಾಣಿಗಳ ಸಾಕಣೆಗಾಗಿ 52,688ಲಕ್ಷ ರೂ. ಸೇರಿದಂತೆ ಒಟ್ಟಾರೆ ಕೃಷಿ ವಲಯಕ್ಕೆ 4,70,666 ಲಕ್ಷ ರೂ.ಗಳ ಸಾಲ ಪಡೆಯುವ ಸಾಮರ್ಥ್ಯ ಜಿಲ್ಲೆಗಿದೆ ಎಂದರು.

ಅತಿಸಣ್ಣ ಮತ್ತು ಮಧ್ಯಮ ಉದ್ಯಮಕ್ಕೆ 17,100ಲಕ್ಷ ರೂ. ರಫ್ತುಸಾಲ 24,192ಲಕ್ಷ ರೂ., ಶಿಕ್ಷಣವಲಯಕ್ಕೆ 9,170 ಲಕ್ಷ ರೂ., ವಸತಿಗಾಗಿ 27,200 ಲಕ್ಷ ರೂ., ಸೋಲಾರ್‌-ಗಾಳಿಯಂತ್ರ ಸೇರಿದಂತೆ ಅಸಂಪ್ರದಾಯಕ ಶಕ್ತಿ ಉತ್ಪಾದನಾ ವಲಯದಲ್ಲಿ 4,078 ಲಕ್ಷ ರೂ., ಶಾಲೆ-ಆಸ್ಪತ್ರೆ ನಿರ್ಮಾಣ ಸೇರಿದಂತೆ ಸಾಮಾಜಿಕ ಸೌಕರ್ಯ ನಿರ್ಮಾಣಕ್ಕೆ 1,787ಲಕ್ಷ ರೂ. ಹೀಗೆ ಒಟ್ಟಾರೆ 5,55,194.04ಲಕ್ಷ ರೂ.ಗಳ ವಿವರವಾದ ವರದಿ ಮುಂದಿಟ್ಟ ಪ್ರತಾಪ್‌, ಜಿಲ್ಲೆಯ ಗ್ರಾಮೀಣ ಚಟುವಟಿಕೆಗಳಿಗೆ ಬ್ಯಾಂಕ್‌ಗಳು ಹಾಗೂ ಇಲಾಖೆಗಳು ಈ ಸಾಮರ್ಥ್ಯ ಅರಿತು ಮುಂದಿನ ದಿನಗಳಲ್ಲಿ ಯೋಜನೆಗಳನ್ನು ಸಿದ್ಧಪಡಿಸಿಕೊಳ್ಳಬಹುದು ಎಂದು ಹೇಳಿದರು.

ಕಾರ್ಪೋರೇಷನ್‌ ಬ್ಯಾಂಕ್‌ ಉಡುಪಿ ವಲಯ ಪ್ರಬಂಧಕ ಡೆಲಿಯಾಡಯಾಸ್‌ ಸ್ವಾಗತಿಸಿ ಪ್ರಾಸ್ತಾವಿಸಿದರು. ರಿಜರ್ವ್‌ ಬ್ಯಾಂಕ್‌ ಇಂಡಿಯಾ ಬೆಂಗಳೂರು ವಲಯ ಕಚೇರಿಯ ಲೀಡ್‌ ಡಿಸ್ಟ್ರಿಕ್ಟ್ ಆಫೀಸರ್‌ ಎನ್‌.ನಾಗರಾಜ್‌ ಜಿಲ್ಲೆಯಲ್ಲಿ ಬ್ಯಾಂಕರ್‌ಗಳ ಕಾರ್ಯವಿಧಾನ ವಿಮರ್ಶಿಸಿದರು. ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್‌ ಪ್ರಬಂಧಕ ಪ್ರಶಾಂತ ದೇಸಾಯಿ ನಿರೂಪಿಸಿ, ವಂದಿಸಿದರು. ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 285 ಬ್ಯಾಂಕ್‌ ಶಾಖಾ ಪ್ರತಿನಿಧಿಗಳು, ಡಿ.ಡಿ.ಪಿ.ಐ. ಪ್ರಸನ್ನಕುಮಾರ್‌ ಸೇರಿದಂತೆ ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಜಿಲ್ಲಾ ಸಮಾಜಕಲ್ಯಾಣ ಅಧಿಕಾರಿ ಹಾಗೂ ಪಶುಸಂಗೋಪನಾ ಇಲಾಖಾ ಪ್ರತಿನಿಧಿಗಳು ಸೇರಿದಂತೆ ಹಲವು ಅಭಿವೃದ್ಧಿ ಇಲಾಖಾ ಅಧಿಕಾರಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

G.parameshwar

C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್‌

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

1-allu

Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ

8

Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

G.parameshwar

C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್‌

death

Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

12

Kasaragod crime News: ಶಾಲಾ ತರಗತಿಯಲ್ಲಿ ವಿದ್ಯಾರ್ಥಿನಿಗೆ ಹಾವು ಕಡಿತ

Weightlifting: ಏಷ್ಯನ್‌ ವೇಟ್‌ ಲಿಫ್ಟಿಂಗ್‌; ಭಾರತಕ್ಕೆ ಎರಡು ಬೆಳ್ಳಿ

Weightlifting: ಏಷ್ಯನ್‌ ವೇಟ್‌ ಲಿಫ್ಟಿಂಗ್‌; ಭಾರತಕ್ಕೆ ಎರಡು ಬೆಳ್ಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.