ಪ್ರತಿ ಜಿಲ್ಲಾಕೇಂದ್ರದಲ್ಲೂ ಮೈದಾನ ವ್ಯವಸ್ಥೆ
Team Udayavani, Jan 21, 2019, 11:52 AM IST
ಹುಬ್ಬಳ್ಳಿ: ಪ್ರತಿ ಜಿಲ್ಲಾ ಕೇಂದ್ರಗಳಲ್ಲೂ ಮೈದಾನದ ವ್ಯವಸ್ಥೆ ಮಾಡುವ ಮೂಲಕ ಕ್ರಿಕೆಟ್ ಆಟಗಾರರಿಗೆ ವಿಶೇಷ ವ್ಯವಸ್ಥೆ ಕಲ್ಪಿಸಲು ಎಲ್ಲ ರೀತಿಯ ಯೋಜನೆ ರೂಪಿಸಲಾಗುವುದು ಎಂದು ಕೆಎಸ್‌ಸಿಎ ಮಾಜಿ ಕಾರ್ಯದರ್ಶಿ ಬ್ರಿಜೇಶ ಪಟೇಲ್ ಹೇಳಿದರು.
ಗೋಪನಕೊಪ್ಪ-ಉಣಕಲ್ಲ ರಸ್ತೆ ಜೆ.ಕೆ. ಸ್ಕೂಲ್ ಬಳಿಯ ಶಿರೂರ್ ಲೇಔಟ್‌ನಲ್ಲಿ ಬಿಡಿಕೆ ಸ್ಪೋರ್ಟ್ಸ್ ಫೌಂಡೇಶನ್ ಕ್ಲಬ್‌ನ ಬೆಳ್ಳಿ ಮಹೋತ್ಸವ ಹಾಗೂ ಭಾಂಜಿ ಡಿ. ಖೀಮಜಿ ಮೈದಾನದ ನಾಮಕರಣ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಈ ಹಿಂದೆ ಕ್ರಿಕೆಟ್ ಕಲಿಯಲು ಬೆಂಗಳೂರಿಗೆ ಬರಬೇಕಾಗಿತ್ತು. ಆದರೆ ಇಂದು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಮೈದಾನ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಆದ್ದರಿಂದ ರಾಜ್ಯ ತಂಡದಲ್ಲಿ ಶೇ.50 ಪ್ರತಿಭೆಗಳು ಬೆಂಗಳೂರು ಹೊರತು ಪಡಿಸಿ ಬೇರೆ ಭಾಗದವರು ಪಾಲ್ಗೊಳ್ಳುತ್ತಿದ್ದಾರೆ. ಬೆಂಗಳೂರು ಆಟಗಾರರಿಗೆ ಹೋಲಿಸಿದರೆ, ಜಿಲ್ಲಾ ಕೇಂದ್ರದ ಆಟಗಾರರು ಉತ್ತಮ ಪ್ರದರ್ಶನ ತೋರುತ್ತಾರೆ ಎಂದರು.
ಕೆಎಸ್‌ಸಿಎ ಸಹ ಕಾರ್ಯದರ್ಶಿ ಸಂತೋಷ ಮೆನನ್ ಮಾತನಾಡಿ, ಭರತ ಖೀಮಜಿ ಅಂತಹವರ ಉದಾರ ಗುಣಗಳಿಂದ ಈ ಭಾಗದಲ್ಲಿ ಕ್ರೀಡೆಗೆ ಹೆಚ್ಚಿನ ಒತ್ತು ಸಿಗುತ್ತಿದ್ದು, ಈ ಭಾಗದ ಜನರು ಅದರ ಸದುಪಯೋಗ ಪಡಿಸಿಕೊಳ್ಳಬೇಕೆಂದರು.
ಧಾರವಾಡ ವಲಯದ ಕೆಎಸ್‌ಸಿಎ ಚೇರ್ಮನ್ ವೀರಣ್ಣ ಸವಡಿ ಮಾತನಾಡಿ, ರಾಜ್ಯದಲ್ಲಿ ಧಾರವಾಡ ವಲಯದಲ್ಲಿ ಹುಬ್ಬಳ್ಳಿ ಮತ್ತು ಬೆಳಗಾವಿಯಲ್ಲಿ ಮೈದಾನಗಳಿವೆ. ಒಂದೇ ವಲಯದಲ್ಲಿ 2 ಮೈದಾನಗಳಿರುವುದು ಇಲ್ಲಿ ಮಾತ್ರ ಎಂದರು.
ಬಿಡಿಕೆ ಸ್ಪೋರ್ಟ್ಸ್ ಫೌಂಡೇಶನ್ ಮುಖ್ಯ ಟ್ರಸ್ಟಿ ಭರತ ಖೀಮಜಿ 51 ಲಕ್ಷ ರೂ. ದೇಣಿಗೆ ಚೆಕ್ ವಿತರಿಸಿದರು. ಕೆಎಸ್‌ಸಿಎ ಧಾರವಾಡ ವಲಯ ಸಂಯೋಜಕ ಬಾಬಾ ಭೂಸದ ಮಾತನಾಡಿದರು. ಶಿವಾನಂದ ಗುಂಜಾಳ, ಮನಿಷ ಠಕ್ಕರ, ದಾವಣಗೆರೆ, ಮೈಸೂರು ಸಂಯೋಜಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.