ಹಿರಿಯ ನಾಗರಿಕರ ರಕ್ಷಕರಿಗೆ ಅಭದ್ರತೆ 


Team Udayavani, Jan 22, 2019, 12:50 AM IST

senior.jpg

ಉಡುಪಿ: ಹಿರಿಯ ನಾಗರಿಕರು ಮತ್ತು ವಿಕಲಚೇತನರ ಸಶಕ್ತೀಕರಣ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ “ಹಿರಿಯ ನಾಗರಿಕರ ಸಹಾಯವಾಣಿ’ಗೆ ಆರು ತಿಂಗಳುಗಳಿಂದ ಅನುದಾನ ಬಿಡುಗಡೆಯಾಗಿಲ್ಲ. ಹಾಗಾಗಿ ಅದರ ಅಧಿಕಾರಿ, ಸಿಬಂದಿಗೆ ವೇತನವೂ (ಗೌರವಧನ) ಸಿಗುತ್ತಿಲ್ಲ.

ಉಡುಪಿಯ ಹಿರಿಯ ನಾಗರಿಕರ ಸಹಾಯವಾಣಿ ಜಿಲ್ಲಾ ವ್ಯಾಪ್ತಿಯನ್ನು ಹೊಂದಿದೆ. ಇದನ್ನು ಉಡುಪಿ ಜಿಲ್ಲಾ ಮಹಿಳಾ ಮಂಡಳಿಗಳ ಒಕ್ಕೂಟ ನಿರ್ವಹಿಸುತ್ತಿದೆ. ಮೂವರು ಅಪ್ತಸಮಾಲೋಚಕರು, ಸೂಪರ್‌ವೈಸರ್‌ ಮತ್ತು ಕೋ-ಆರ್ಡಿನೇಟರ್‌ ಇಲ್ಲಿದ್ದಾರೆ. ದಿನನಿತ್ಯ ಹತ್ತಾರು ಪ್ರಕರಣಗಳನ್ನು ನಿಭಾಯಿಸಲಾಗುತ್ತದೆ.

ನಿರಂತರ ಕೆಲಸ 
ಅಸಹಾಯಕ, ಅನಾಥ ಹಿರಿಯ ನಾಗರಿಕರನ್ನು ಪತ್ತೆಹಚ್ಚಿ ಆಪ್ತಸಮಾಲೋಚನೆ ನಡೆಸುವ, ಚಿಕಿತ್ಸೆ ಕೊಡಿಸುವ, ಮನೆಯವರ ಪತ್ತೆಯಾದರೆ ಕರೆಯಿಸಿ ಕೌನ್ಸೆಲಿಂಗ್‌ ನಡೆಸುವ, ಅಗತ್ಯ ಬಿದ್ದರೆ ವೃದ್ಧಾಶ್ರಮಕ್ಕೆ ಸೇರ್ಪಡೆಗೊಳಿಸುವ ಕೆಲಸವನ್ನು ಕೂಡ ಸಹಾಯವಾಣಿ ಸಿಬಂದಿ ಮಾಡುತ್ತಾರೆ. ಸಾರ್ವಜನಿಕರಿಗೆ ಮಾಹಿತಿ, ಜಾಗೃತಿ ಶಿಬಿರಗಳ ಮೂಲಕ ಕಾಳಜಿ ಮೂಡಿಸುವ ಕೆಲಸಗಳು ಕೂಡ ನಡೆಯುತ್ತಿವೆ. ನಾನಾ ಕಾರಣಗಳಿಂದ ಬೀದಿಗೆ ಬೀಳುವ ಹಿರಿಯ ನಾಗರಿಕರ ಪಾಲಿಗೆ ಆಪದ್ಭಾಂಧವನಂತೆ ಇದು ಕಾರ್ಯನಿರ್ವಹಿಸುತ್ತ ಬಂದಿದೆ. ಆದರೆ ಈಗ ಗೌರವಧನ ಸಿಗದೆ ಸಹಾಯವಾಣಿ ಸಿಬಂದಿಯೇ ಅತಂತ್ರರಾಗಿದ್ದಾರೆ. 

ಎಸ್‌ಪಿ ಕಚೇರಿಯಲ್ಲಿ ಜಾಗವಿಲ್ಲ 
ಹಿರಿಯ ನಾಗರಿಕರ ಸಹಾಯವಾಣಿ ಎಸ್‌ಪಿ ಕಚೇರಿ ಅಥವಾ ಯಾವುದಾದರೊಂದು ಪೊಲೀಸ್‌ ಠಾಣೆ ಕಚೇರಿಯ ಜತೆಜತೆಗೆ ಕಾರ್ಯನಿರ್ವಹಿಸಬೇಕೆಂಬ ನಿಯಮವಿದೆ. ಆದರೆ ಉಡುಪಿಯಲ್ಲಿ ಇದು ಪ್ರಸ್ತುತ ರೆಡ್‌ಕ್ರಾಸ್‌ ಭವನದಲ್ಲಿ ಕಾರ್ಯನಿರ್ವಹಿಸುತ್ತಿದೆ.

ಸಹಾಯವಾಣಿಯನ್ನು ಸರಕಾರ, ಅಧಿಕಾರಿಗಳು ನಿರ್ಲಕ್ಷಿಸುತ್ತಿದ್ದಾರೆ. ಎಸ್‌ಪಿ ಕಚೇರಿಯಲ್ಲಿಯೇ ಅವಕಾಶ ನೀಡುವಂತೆ ಕೋರಲಾಗಿತ್ತಾದರೂ ನೀಡಿಲ್ಲ. ಓಡಾಟಕ್ಕೆ ವಾಹನ ಕೇಳಲಾಗಿತ್ತು, ಅದೂ ಸಿಕ್ಕಿಲ್ಲ. ಈಗ ಅನುದಾನ ಕೂಡ ಬಿಡುಗಡೆ ಮಾಡಿಲ್ಲ ಎಂಬ ಅಸಹಾಯಕತೆ ಸಹಾಯವಾಣಿ ನಿರ್ವಹಿಸುತ್ತಿರುವ ಮಹಿಳಾ ಮಂಡಳಿಗಳ ಒಕ್ಕೂಟದ ಪದಾಧಿಕಾರಿಗಳದ್ದು. 

ಬೇರೆ ಜಿಲ್ಲೆಗಳಲ್ಲಿ ಇಂತಹ ಸಮಸ್ಯೆಗಳಿಲ್ಲ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರಿಕರು ಮತ್ತು ವಿಕಲಚೇತನರ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಯತ್ನಪಟ್ಟರೆ ಅನುದಾನ ದೊರೆಯಬಹುದು. ಉಡುಪಿಯ ಹಿರಿಯ ನಾಗರಿಕರ ಸಹಾಯವಾಣಿಗೆ ರಾಜ್ಯದಲ್ಲಿಯೇ ಉತ್ತಮ ಹೆಸರಿದೆ. ಆದರೆ ಈಗ ಇದನ್ನು ಮುಂದುವರಿಸುವುದು ಹೇಗೆಂಬ ಚಿಂತೆ ಕಾಡುತ್ತಿದೆ ಎಂದು ಸಿಬಂದಿ ಅಸಮಾಧಾನ ತೋಡಿಕೊಂಡಿದ್ದಾರೆ.

ಹಿರಿಯ ನಾಗರಿಕರ ರಕ್ಷಣೆಯ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿಕೊಂಡು ಬರುತ್ತಿರುವ ಸಹಾಯವಾಣಿಯವರಿಗೆ ಗೌರವಧನ ದೊರೆಯದಿರುವುದನ್ನು ಜಿಲ್ಲಾಧಿಕಾರಿ ಗಮನಕ್ಕೆ ತಂದಿದ್ದೇವೆ. ಸದ್ಯ ಅನುದಾನ ಬಾರದಿದ್ದರೂ ಇತರ ಅಗತ್ಯ ಖರ್ಚನ್ನು ಹೊಂದಿಸಿಕೊಂಡು ಹೋಗುತ್ತಿದ್ದೇವೆ. ಆದರೆ ಗೌರವಧನ ಪಾವತಿ ಸಾಧ್ಯವಾಗುತ್ತಿಲ್ಲ. 
– ವಸಂತಿ ರಾವ್‌ ಕೊರಡ್ಕಲ್‌
ಮಹಿಳಾ ಮಂಡಳಿಗಳ ಒಕ್ಕೂಟದ ಅಧ್ಯಕ್ಷೆ 

ಸರಕಾರಿ ಮಟ್ಟದಲ್ಲೇ ಆಗಬೇಕು
 ಇದು ಇಡೀ ರಾಜ್ಯದಲ್ಲಿರುವ ಸಮಸ್ಯೆ. ಇಲಾಖೆಯ ನಿರ್ದೇಶಕರಿಗೆ ಈಗಾಗಲೇ ಮಾಹಿತಿ ನೀಡಿದ್ದೇವೆ. ಅನುದಾನ ಬರುವ ವರೆಗೆ ಒಕ್ಕೂಟದವರೇ ನಿರ್ವಹಿಸಬೇಕಾಗುತ್ತದೆ. ಕೆಲವೇ ದಿನಗಳಲ್ಲಿ ಅನುದಾನ ಬಿಡುಗಡೆಯಾಗುವ ಭರವಸೆ ದೊರೆತಿದೆ.
– ನಿರಂಜನ್‌,  ಹಿರಿಯ ನಾಗರಿಕರು ಮತ್ತು ವಿಕಲಚೇತನರ ಕಲ್ಯಾಣಾಧಿಕಾರಿ

– ಸಂತೋಷ್‌ ಬೊಳ್ಳೆಟ್ಟು 

ಟಾಪ್ ನ್ಯೂಸ್

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

death

Puttur: ಅಪಘಾತದಲ್ಲಿ ಗಾಯಾಳಾಗಿದ್ದ ಬೈಕ್‌ ಸಹ ಸವಾರ ಸಾವು

arrested

BC Road; ಎರಡು ತಂಡಗಳ ಮಧ್ಯೆ ಮಾರಾಮಾರಿ: ಇಬ್ಬರ ಬಂಧನ

1-bhatru

Subrahmanya: ಅರ್ಚಕರ ಮನೆಯಿಂದ ನಗ-ನಗದು ಕಳವು

police crime

Gangolli, Ajekaru; ಮಹಿಳೆಯರಿಗೆ ಜೀವ ಬೆದರಿಕೆ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.