ವಿಶ್ವಾದ್ಯಂತ ‘ಫಾರ್ವರ್ಡ್’ಗೆ ಮಿತಿ
Team Udayavani, Jan 22, 2019, 2:04 AM IST
ಹೊಸದಿಲ್ಲಿ: ಸುಳ್ಳು ಸುದ್ದಿಗಳು ಹಾಗೂ ವದಂತಿಗಳು ಹಬ್ಬುವುದನ್ನು ತಡೆಯಲು ವಾಟ್ಸ್‌ಆ್ಯಪ್ ಸಂಸ್ಥೆಯು ಭಾರತದಲ್ಲಿ ಜಾರಿಗೆ ತಂದಿದ್ದ ‘ಫಾರ್ವರ್ಡ್ ಸಂದೇಶಗಳ ಮಿತಿ’ಯನ್ನು ಈಗ ವಿಶ್ವಾದ್ಯಂತ ಜಾರಿಗೊಳಿಸಿದೆ. ಹೀಗಾಗಿ, ಜಗತ್ತಿನೆಲ್ಲೆಡೆಯೂ ಇನ್ನು ವಾಟ್ಸ್‌ಆ್ಯಪ್ ಮೂಲಕ ಫಾರ್ವರ್ಡ್ ಸಂದೇಶಗಳನ್ನು ಗರಿಷ್ಠ 5 ಚಾಟ್‌ಗಳಿಗಷ್ಟೇ ಸೀಮಿತ ಗೊಳಿಸಿದಂತಾಗಿದೆ. ಕಳೆದ ವರ್ಷದ ಜುಲೈನಲ್ಲೇ ಭಾರತದಲ್ಲಿ ಇದನ್ನು ಪರಿಚಯಿಸಲಾಗಿತ್ತು.
ಇದನ್ನು ಅತ್ಯಂತ ಸೂಕ್ಷ್ಮವಾಗಿ ಪರಿಶೀಲಿಸಿ, 6 ತಿಂಗಳುಗಳ ಕಾಲ ಬಳಕೆದಾರರ ಪ್ರತಿಕ್ರಿಯೆ ಪಡೆದು ಈ ತೀರ್ಮಾನ ಕೈಗೊಳ್ಳಲಾಗಿದೆ. ಅಲ್ಲದೆ, ಈ ಮಿತಿ ಹೇರಿದ ಬಳಿಕ ಫಾರ್ವರ್ಡ್ ಸಂದೇಶಗಳ ಸಂಖ್ಯೆಯೂ ಗಣನೀಯವಾಗಿ ಇಳಿಕೆಯಾಗಿದೆ ಎಂದು ವಾಟ್ಸ್‌ಆ್ಯಪ್ ತಿಳಿಸಿದೆ.
ಸೋಮವಾರದಿಂದಲೇ ಹೊಸ ನಿಯಮ ಜಾರಿಯಾಗಿದ್ದು, ವಾಟ್ಸ್‌ಆ್ಯಪ್‌ನ ಲೇಟೆಸ್ಟ್ ವರ್ಷನ್ ಬಳಕೆದಾರರು ಒಮ್ಮೆಗೆ ಕೇವಲ ಐವರಿಗೆ ಮಾತ್ರ ಫಾರ್ವರ್ಡ್ ಸಂದೇಶಗಳನ್ನು ಕಳುಹಿಸಲು ಸಾಧ್ಯ ಎಂದೂ ಕಂಪೆನಿ ಹೇಳಿದೆ. ಈ ಹಿಂದೆ ಒಮ್ಮೆಗೆ 20 ಮಂದಿಗೆ ಫಾರ್ವರ್ಡ್ ಸಂದೇಶಗಳನ್ನು ಕಳುಹಿಸಲು ಅವಕಾಶವಿತ್ತು.
ಶೇ.25 ಇಳಿಕೆ: ಪ್ರಾಯೋಗಿಕ ಅವಧಿ ಯಲ್ಲಿ ಫಾರ್ವರ್ಡ್ ಸಂದೇಶಗಳ ಪ್ರಮಾಣದಲ್ಲಿ ಶೇ.25ರಷ್ಟು ಇಳಿಕೆ ಕಂಡುಬಂದಿತ್ತು ಎಂದು ವಾಟ್ಸ್ ಆ್ಯಪ್ ಹೇಳಿದೆ. ಜಗತ್ತಿನಾದ್ಯಂತ ವಾಟ್ಸ್‌ಆ್ಯಪ್‌ಗೆ 1.5 ಶತಕೋಟಿ ಬಳಕೆದಾರರು ಇದ್ದು, ಆ ಪೈಕಿ ಭಾರತ, ಬ್ರೆಜಿಲ್, ಇಂಡೋನೇಷ್ಯಾದಂಥ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಬಳಕೆದಾರರಿದ್ದಾರೆ. ಕಳೆದ ವರ್ಷ ಮಕ್ಕಳ ಕಳ್ಳರಿದ್ದಾರೆ ಎಂಬ ಸುಳ್ಳು ಸುದ್ದಿಯು ಭಾರತದ ವಾಟ್ಸ್‌ಆ್ಯಪ್‌ನಲ್ಲಿ ಹರಿದಾಡಿದ ಪರಿಣಾಮ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಅನುಮಾನಾಸ್ಪದ ವ್ಯಕ್ತಿಗಳನ್ನು ಥಳಿಸಿ ಹತ್ಯೆಗೈದಂಥ ಅಮಾನವೀಯ ಘಟನೆಗಳು ನಡೆದಿದ್ದವು. ಈ ಹಿನ್ನೆಲೆಯಲ್ಲಿ ಸರಕಾರವು ಸುಳ್ಳು ಸುದ್ದಿಗಳನ್ನು ತಡೆಯಲು ಕಠಿಣ ಕ್ರಮಕ್ಕೆ ಸಾಮಾಜಿಕ ಜಾಲತಾಣಗಳಿಗೆ ನಿರ್ದೇಶನ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
MUST WATCH
ಹೊಸ ಸೇರ್ಪಡೆ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.