ಕಟ್ಟುಮಸ್ತಾದ ದೇಹಕ್ಕೆ ವ್ಯಾಯಮ
Team Udayavani, Jan 22, 2019, 8:35 AM IST
ಕಟ್ಟುಮಸ್ತಾದ ದೇಹವಿರಬೇಕು ಎಂಬುದು ಬಹುತೇಕ ಎಲ್ಲ ಯುವಕರ ಬಯಕೆ. ಕಟ್ಟುಮಸ್ತಾದ ದೇಹವನ್ನು ಪಡೆಯುವುದರ ಮೂಲಕ ಆರೋಗ್ಯವಾಗಿರುವುದು ಕೂಡ ಬಹಳ ಮುಖ್ಯ. ಆದರೆ ಇದು ಅಷ್ಟು ಸುಲಭವಲ್ಲ. ಸತತ ವ್ಯಾಯಾಮ, ಸೂಕ್ತ ಆಹಾರ, ನಿದ್ರೆ ಕೂಡ ಇಲ್ಲಿ ಬಹುಮುಖ್ಯ. ಎದೆ, ಕೈಕಾಲುಗಳು ಮತ್ತು ಭುಜದ ಸ್ನಾಯುಗಳನ್ನು ಹುರಿಗಟ್ಟಿಸುವ ಮೂಲಕ ಸುಂದರ ಶರೀರವನ್ನು ಪಡೆಯಬಹುದು.
ಇದಕ್ಕಾಗಿ ಅತ್ಯುತ್ತಮ ವ್ಯಾಯಾಮಗಳು
•ಬಸ್ಕಿ
ತೊಡೆ ಮತ್ತು ಮೀನಖಂಡಗಳ ಸ್ನಾಯುಗಳನ್ನು ಹುರಿಗಟ್ಟಿಸಲು ಬಸ್ಕಿ, ತೂಕದೊಂದಿಗೆ ಬಸ್ಕಿ ನೆರವಾಗುತ್ತದೆ. ಬಸ್ಕಿಯಲ್ಲಿ ಯಾವುದೇ ತೂಕವಿಲ್ಲದೇ ಕೇವಲ ಕೈಗಳನ್ನು ಭೂಮಿಗೆ ಸಮಾನಾಂತರವಾಗಿ ಚಾಚುವ ಮೂಲಕ, ಸರಳ ತೂಕವನ್ನು ಹಿಡಿಯುವ ಮೂಲಕ ಉತ್ತಮ ವ್ಯಾಯಾಮ ದೊರಕುತ್ತದೆ. ತೂಕದೊಂದಿಗಿನ ಬಸ್ಕಿಯಲ್ಲಿ ಮಾತ್ರ ಹೆಚ್ಚಿನ ತೂಕದೊಂದಿಗೆ ನಿಲ್ಲುವ ಮೂಲಕ ತೊಡೆ ಮತ್ತು ಮೀನಖಂಡಗಳ ಸ್ನಾಯುಗಳು ಕೊಂಚ ಹೆಚ್ಚಿನ ಸೆಳೆತ ಪಡೆಯುತ್ತವೆ.
• ಅಲ್ಪದೂರವನ್ನು ಅತಿವೇಗವಾಗಿ ಕ್ರಮಿಸುವುದು
ದೇಹದ ಎಲ್ಲ ಸ್ನಾಯುಗಳಿಗೂ ಪೂರ್ಣ ಪ್ರಮಾಣದ ಸೆಳೆತ ನೀಡಲು ಸ್ಪ್ರಿಂಟ್ ಓಟ ಅತ್ಯುತ್ತಮವಾಗಿದೆ. ಆದರೆ ಈ ಓಟಕ್ಕೂ ಮೊದಲು ಶರೀರ ಸಂಪೂರ್ಣವಾಗಿ ಬೆಚ್ಚಗಾಗಿರುವುದು, ಎಲ್ಲ ಸೆಳೆತದ ವ್ಯಾಯಾಮಗಳನ್ನು ಪೂರ್ಣಗೊಳಿಸಿರುವುದು ಮುಖ್ಯ. ದಿನದ ವ್ಯಾಯಾಮದ ಕೊನೆಯ ಹಂತದಲ್ಲಿ ಈ ಓಟವನ್ನು ಓಡಿ ಶರೀರವನ್ನು ಪೂರ್ಣವಾಗಿ ದಣಿಸಿ ಬಳಿಕ ವಿಶ್ರಾಂತಿ ಪಡೆಯುವುದು ಆರೋಗ್ಯಕರ.
• ಕಡಿಮೆ ತೂಕವನ್ನು ಬಳಸುವ ವ್ಯಾಯಾಮಗಳು
ಹೆಚ್ಚು ತೂಕವನ್ನು ಬಳಸಿ ಹತ್ತು ಬಾರಿ ಮಾಡುವ ವ್ಯಾಯಾಮಕ್ಕಿಂತ ಕಡಿಮೆ ತೂಕ ಬಳಸಿ ಪ್ರತಿಸಲ ಹತ್ತರಂತೆ ಐದು ಅಥವಾ ಹತ್ತು ಬಾರಿ ಪುನರಾವರ್ತಿಸುವುದರಿಂದ ಸ್ನಾಯುಗಳು ಹೆಚ್ಚು ಹುರಿಗಟ್ಟುತ್ತವೆ.
• ಸರಿಯಾಗಿ ನೀರು ಸೇವಿಸಿ
ದ್ರವ ಆಹಾರ ಮತ್ತು ನೀರನ್ನು ಹೆಚ್ಚು ಸೇವಿಸುವುದರಿಂದ ದೇಹದಾಡ್ಯರ್ ಮತ್ತು ಸ್ನಾಯುಗಳ ಬೆಳವಣಿಗೆ ಸದೃಢವಾಗಿ ಆಗುತ್ತದೆ. ದಿನವಿಡೀ ತುಂಬಾ ನೀರು ಕುಡಿಯಿರಿ. ಇದರಿಂದ ವ್ಯಾಯಾಮದ ವೇಳೆ ನಿರ್ಜಲೀಕರಣವಾಗುವುದು ತಪ್ಪುತ್ತದೆ. ವ್ಯಾಯಾಮದ ವೇಳೆ ಪ್ರತೀ 10- 20 ನಿಮಿಷಕ್ಕೊಮ್ಮೆ ನೀರು ಕುಡಿಯಿರಿ. ನಿರ್ಜಲೀಕರಣವಾದರೆ ಅದು ನಿಮ್ಮ ದೇಹದ ಮೇಲೆ ಪರಿಣಾಮ ಬೀರುತ್ತದೆ.
ಸ್ನಾಯುಗಳ ಬೆಳವಣಿಗೆಗೆ ಸೇವಿಸಬೇಕಾದ ಆಹಾರಗಳು
ಕೆಂಪು ಮಾಂಸದಲ್ಲಿ ಕಬ್ಬಿಣಾಂಶ ಸಮೃದ್ಧವಾಗಿದೆ. ಇದು ಮಾಂಸಖಂಡಗಳ ಬೆಳವಣಿಗೆಗೆ ಮುಖ್ಯ. ದೇಹವನ್ನು ಕಟ್ಟು ಮಸ್ತಾಗಿಸಲು ಮೊಟ್ಟೆ ಕೂಡ ಮುಖ್ಯ. ವ್ಯಾಯಾಮದೊಂದಿಗೆ ಆಹಾರದಲ್ಲಿ ಪ್ರೋಟೀನ್‌ಗೆ ಹೆಚ್ಚಿನ ಆದ್ಯತೆ ಕೊಟ್ಟಾಗ ಕಟ್ಟುಮಸ್ತಾದ ದೇಹವನ್ನು ಪಡೆಯಲು ಸಾಧ್ಯವಿದೆ.
••ಕಾರ್ತಿಕ್ ಚಿತ್ರಾಪುರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.