ಬೇಟಿ ಬಚಾವೋ-ಪಡಾವೋ ಪರಿಣಾಮಕಾರಿ ಅನುಷ್ಠಾನಕ್ಕೆ ಸೂಚನೆ
Team Udayavani, Jan 22, 2019, 11:59 AM IST
ಗದಗ: ‘ಬೇಟಿ ಬಚಾವೋ ಬೇಟಿ ಪಡಾವೋ’ ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನ ಗೊಳಿಸಿದ್ದು, ಯೋಜನೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಇಲಾಖೆ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜ. 24ರಂದು ಆಚರಿಸಲಾಗುವ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಬೇಕು. ಜನ ಜಾಗೃತಿಗಾಗಿ ವಿವಿಧ ಸ್ಪರ್ಧೆಗಳು, ಬೀದಿ ನಾಟಕ ಹಾಗೂ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ‘ಬೇಟಿ ಬಚಾವೋ, ಬೇಟಿ ಪಡಾವೋ’ ಕಾರ್ಯಕ್ರಮದಡಿ ಜಿಲ್ಲೆಯು ಉತ್ತಮ ಕಾರ್ಯ ನಿರ್ವಹಿಸಿ, ರಾಷ್ಟ್ರೀಯ ಪ್ರಶಸ್ತಿಗೆ ಭಾಜನವಾಗಿದೆ. ಅದಕ್ಕೆ ಕಾರಣರಾದ ಇಲಾಖೆಯ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅಭಿನಂದಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರೂಪಣಾಧಿಕಾರಿ ಅಕ್ಕಮಹಾದೇವಿ ಮಾತನಾಡಿ, ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಜ. 21ರಿಂದ 26ರ ವರೆಗೆ ಜಿಲ್ಲೆಯಾದ್ಯಂತ ವಿವಿಧ ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ. ಅಂಗನವವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಪ್ರತಿ ಮನೆಗೆ ತೆರಳಿ, ಹೆಣ್ಣು ಮಕ್ಕಳ ಆರೋಗ್ಯ ಶಿಕ್ಷಣ, ಶುಚಿತ್ವ ಕುರಿತು ಜಾಗೃತಿ ಮೂಡಿಸಲಿದ್ದಾರೆ. ‘ಬೇಟಿ ಬಚಾವೋ, ಬೇಟಿ ಪಡಾವೋ’ ಯೋಜನೆ ಬಗ್ಗೆ ಶಾಲಾ ಮಕ್ಕಳಿಗೆ ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಪ್ರಬಂಧ, ಚಿತ್ರ ಬಿಡಿಸುವ ಸ್ಪರ್ಧೆಗಳನ್ನು ಏರ್ಪಡಿಸುವುದು, ಸಮುದಾಯಗಳ ಸಭೆ, ಬಾಲ್ಯ ವಿವಾಹ ನಿಷೇಧ, ಪೋಸ್ಕೋ ಹಾಗೂ ಎಂಟಿಪಿ ಕಾಯ್ದೆಗಳ ಬಗ್ಗೆ ಭಾಷಣ, ಸಂವಾದ, ಜನ ಜಾಗೃತಿಗಾಗಿ ಬೀದಿ ನಾಟಕಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಮಕೃಷ್ಣ ಪಡಗಣ್ಣವರ, ಡಿಡಿಪಿಐ ಜಿ.ಎಲ್. ಬಾರಾಟಕ್ಕೆ, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಸಭೆಯಲ್ಲಿ ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ಶಿರಹಟ್ಟಿ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ
Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ
Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.