ರಾಜಪಥ್‌ನಲ್ಲಿ 1924ರ ಬೆಳಗಾವಿ ಅಧಿವೇಶನದ ಸ್ತಬ್ಧಚಿತ್ರ ಪ್ರದರ್ಶನ
Team Udayavani, Jan 23, 2019, 12:55 AM IST
ಬೆಂಗಳೂರು: ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯ ರಾಜಪಥ್‌ನಲ್ಲಿ ನಡೆಯಲಿರುವ ಪರೇಡ್‌ನಲ್ಲಿ ಈ ಬಾರಿ 1924 ರಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನ ವಿಷಯಾಧಾರಿತ ಸ್ತಬ್ಧಚಿತ್ರ ಪ್ರದರ್ಶನಗೊಳ್ಳಲಿದೆ.
1924ರ ಡಿಸೆಂಬರ್ 26 ಮತ್ತು 27 ರಂದು ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನ ಐತಿಹಾಸಿಕ ಮಹತ್ವದ ಘಟನೆಯಾಗಿದೆ. ಇದು ಗಾಂಧೀಜಿಯವರು ಅಧ್ಯಕ್ಷತೆ ವಹಿಸಿದ ಏಕೈಕ ಕಾಂಗ್ರೆಸ್ ಮಹಾ ಅಧಿವೇಶನವಾಗಿದ್ದು, ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಜರುಗಿದ ಅಖೀಲ ಭಾರತ ರಾಷ್ಟ್ರೀಯ ಕಾಂಗ್ರೆಸ್‌ನ 39 ನೇ ಮಹಾಧಿವೇಶನ ಇದಾಗಿತ್ತು,
ಮಹಾತ್ಮ ಗಾಂಧೀಜಿ ಮತ್ತು ಬೆಳಗಾವಿ ಅಧಿವೇಶನದ ಬಗೆಗಿನ ಸ್ತಬ್ಧಚಿತ್ರ ನಿರ್ಮಾಣ ಕಾರ್ಯದಲ್ಲಿ ರಕ್ಷಣಾ ಮಂತ್ರಾಲಯ ನಿರತವಾಗಿದೆ ಎಂದು ಮಂಗಳವಾರ ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪ ನಿರ್ದೇಶಕ ಬಸವರಾಜ್ ಕಂಬಿ ಮಾಹಿತಿ ನೀಡಿದರು.
ರಕ್ಷಣಾ ಮಂತ್ರಾಲಯ ಮಹಾತ್ಮ ಗಾಂಧಿಜೀಯವರ 150ನೇ ಜನ್ಮದಿನಾಚರಣೆ ಅಂಗವಾಗಿ ಈ ಬಾರಿ ಎÇ್ಲಾ ರಾಜ್ಯಗಳಿಗೂ ಗಾಂಧಿಯವರ ಜೀವನಾಧಾರಿತ ಸ್ತಬ್ಧಚಿತ್ರದ ಪರಿಕಲ್ಪನೆ ಕಳುಹಿಸುವಂತೆ ಸೂಚಿಸಿತ್ತು. ಆ ಹಿನ್ನೆಲೆಯಲ್ಲಿ ಇಲಾಖೆಯ ಕಾರ್ಯದರ್ಶಿ ಮತ್ತು ನಿರ್ದೇಶಕರನ್ನೊಳಗೊಂಡ ಸಮಿತಿ, ವಿವಿಧ ನಾಲ್ಕು ವಿಷಯಗಳನ್ನು ಒಳಗೊಂಡ ಸ್ತಬ್ಧಚಿತ್ರದ ಮಾದರಿಗಳನ್ನು ರಕ್ಷಣಾಮಂತ್ರಾಲಯಕ್ಕೆ ಕಳುಹಿಸಿಕೊಟ್ಟಿತ್ತು. ಅಂತಿಮವಾಗಿ ರಕ್ಷಣಾಮಂತ್ರಾಲಯ ನೇಮಿಸಿದ್ದ ತಜ್ಞರ ಸಮಿತಿ, ‘ಮಹಾತ್ಮ ಗಾಂಧೀಜಿ -ಬೆಳಗಾವಿ ಕಾಂಗ್ರೆಸ್ ಅಧಿವೇಶನ’ ವಿಷಯಾಧಾರಿತ ಸ್ತಬ್ಧಚಿತ್ರವನ್ನು ಆಯ್ಕೆ ಮಾಡಿದೆ ಎಂದು ಹೇಳಿದರು.
ಪೂರ್ವಸಿದ್ಧತಾ ತಾಲೀಮು: ಕಲಾವಿದ ಶಶಿಧರ ಅಡಪ ಅವರು ಸ್ತಬ್ಧಚಿತ್ರದ ವಿನ್ಯಾಸ ಮಾಡಿದ್ದು, ಪ್ರವೀಣ್ ಡಿ.ರಾವ್ ಅವರು ‘ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು’ ಎಂಬ ಗೀತೆಯನ್ನು ಸಂಗೀತ ರಚನೆ ಮಾಡಿದ್ದಾರೆ, ಸ್ತಬ್ಧಚಿತ್ರದ ನಿರ್ಮಾಣ ಕಾರ್ಯಕ್ಕೆ ಜ. 5 ರಂದು ಚಾಲನೆ ನೀಡಲಾಗಿದ್ದು, ಬಹುತೇಕ ಕೆಲಸ ಪೂರ್ಣಗೊಂಡಿದೆ.ಜ 23 ರಂದು ರಾಜಪಥ್‌ನಲ್ಲಿ ಪೂರ್ವಸಿದ್ಧತಾ ತಾಲೀಮು ನಡೆಯಲಿದ್ದು ಬಳಿಕ ಕೊನೆಯ ಹಂತದ ಕೆಲಸವನ್ನು ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.
17 ರಾಜ್ಯಗಳು ಭಾಗಿ: ಸ್ತಬ್ಧಚಿತ್ರದ ನಿರ್ಮಾಣದ ಸ್ಥಳೀಯ ಉಸ್ತುವಾರಿ ವಹಿಸಿರುವ ವಾರ್ತಾಧಿಕಾರಿ, ಡಾ.ಮೈಸೂರು ಗಿರೀಶ್ ಮಾತನಾಡಿ, ಗಣರಾಜ್ಯೋತ್ಸವ ಪೆರೇಡ್‌ನಲ್ಲಿ 13 ರಿಂದ 14 ರಾಜ್ಯಗಳ ಸ್ತಬ್ಧಚಿತ್ರಗಳು ಮಾತ್ರ ಭಾಗವಹಿಸಲು ಅವಕಾಶ ಕಲ್ಪಿಸಲಾಗುತ್ತದೆ. ಈ ಬಾರಿ 30 ರಾಜ್ಯಗಳಲ್ಲಿ 14 ರಾಜ್ಯಗಳ ಸ್ತಬ್ಧಚಿತ್ರಗಳು ಮಾತ್ರ ಅಂತಿಮವಾಗಿ ಆಯ್ಕೆಗೊಂಡಿದ್ದು, ವೈಲ್ಡ್ ಕಾರ್ಡ್ ಮೂಲಕ ಈಶಾನ್ಯ ರಾಜ್ಯದ 3 ರಾಜ್ಯಗಳಿಗೆ ಅವಕಾಶ ಕಲ್ಪಿಸಲಾಗಿದೆ. ಒಟ್ಟು 17 ರಾಜ್ಯಗಳ ಸ್ತಬ್ಧಚಿತ್ರಗಳು ಈ ಸಾಲಿನಲ್ಲಿ ಭಾಗವಹಿಸಲಿವೆ ಎಂದರು.
ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಮೆರಗು
ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳು, ಇಲಾಖೆಗಳ 22 ಸ್ತಬ್ಧಚಿತ್ರಗಳು, ದೇಶದ ವಿವಿಧ ಭಾಗಗಳ 58 ಮಂದಿ ಆದಿವಾಸಿ ಅತಿಥಿಗಳು ಹಾಗೂ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ಈ ಬಾರಿಯ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಮೆರಗು ನೀಡಲಿವೆ. ಶನಿವಾರ ನಡೆಯಲಿರುವ ಕಾರ್ಯಕ್ರಮದಲ್ಲಿ ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್ ರಾಮಫೋಸಾ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂಡಿಯಾ ಗೇಟ್‌ನಲ್ಲಿರುವ ಅಮರ ಜವಾನ್ ಜ್ಯೋತಿಯಲ್ಲಿ ಪುಷ್ಪನಮನ ಸಲ್ಲಿಸುವ ಮೂಲಕ ಗಣರಾಜ್ಯ ದಿನಾಚರಣೆಗೆ ಚಾಲನೆ ನೀಡಲಿದ್ದಾರೆ. ಒಟ್ಟು 90 ನಿಮಿಷಗಳ ಕಾಲ ಕಾರ್ಯಕ್ರಮ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?
Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ
CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ
MUST WATCH
ಹೊಸ ಸೇರ್ಪಡೆ
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.