ವೀರಭದ್ರೇಶ್ವರ ರಥೋತ್ಸವ
Team Udayavani, Jan 23, 2019, 7:45 AM IST
ಹೂವಿನಹಡಗಲಿ: ತಾಲೂಕಿನ ಸೋಗಿ ಗ್ರಾಮದಲ್ಲಿ ವೀರಭದ್ರೇಶ್ವರ ಸ್ವಾಮಿ ರಥೋತ್ಸವ ಮಂಗಳವಾರ ವಿಜೃಂಭಣೆಯಿಂದ ಜರುಗಿತು. ಜಾತ್ರೆ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಗಳು ನಡೆದವು. ಬೆಳಗ್ಗೆಯಿಂದಲೇ ದೇವಸ್ಥಾನಕ್ಕೆ ಭಕ್ತಾದಿಗಳು ಅಗಮಿಸಿ ಸ್ವಾಮಿ ದರ್ಶನ ಪಡೆದರು.
ಹೂವು ಹಾಗೂ ವಿವಿಧ ರೀತಿಯಿಂದ ಸರ್ವಾಲಂಕೃತವಾಗಿರುವ ರಥೋತ್ಸವಕ್ಕೆ ಸೋಗಿ ಗ್ರಾಮದ ಸುತ್ತ ಮುತ್ತಲ ಗ್ರಾಮದವರು ಅಲ್ಲದೆ ತಾಲೂಕಿನ ವಿವಿಧ ಭಾಗದಿಂದಲೂ ಭಕ್ತರು ಅಗಮಿಸಿದ್ದರು. ಭಕ್ತರು ವಿವಿಧ ಹರಕೆ ತೀರಿಸಿದರು. ರಥೋತ್ಸವಕ್ಕೂ ಮುನ್ನ ವೀರಭದ್ರೇಶ್ವರ ಸ್ವಾಮಿಯನ್ನು ಪಲ್ಲಕ್ಕಿಯಲ್ಲಿ ಕರೆ ತಂದು ರಥೋತ್ಸವದಲ್ಲಿರಿಸಿದರು. ನಂತರದಲ್ಲಿ ರಥೋತ್ಸವ ಸಾಗುತ್ತಿದ್ದಂತೆ ಭಕ್ತರು ಹರ್ಷೋದ್ಘಾರದಿಂದ ಸ್ವಾಮಿ ರಥೋತ್ಸವಕ್ಕೆ ಬಾಳೆ ಹಣ್ಣು-ಉತ್ತತ್ತಿ ಎಸೆದು ಹರಕೆ ಹರಿಸಿದರು.
ಜಾತ್ರೆ ಪ್ರಯುಕ್ತ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅಯೋಜಿಸಲಾಗಿತ್ತು. ರಥೋತ್ಸವಕ್ಕೆ ರಾಜ್ಯ ಮುಜರಾಯಿ ಇಲಾಖೆಯ ಸಚಿವರಾದ ಪಿ.ಟಿ. ಪರಮೇಶ್ವರನಾಯ್ಕ, ಸೋಗಿ ಗ್ರಾಮದ ಮುಖಂಡರಾದ ಗಡ್ಡಿ ಬಸಣ್ಣ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ವೀರಭದ್ರಪ್ಪ, ಎಂ.ಬಿ. ಬಸಣ್ಣ ಇತರೆ ಮುಖಂಡರು, ಅಧಿಕಾರಿಗಳು ಇತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ
Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.