ಸೋಲು-ಗೆಲುವು ಸಮನಾಗಿ ಸ್ವೀಕರಿಸಿ
Team Udayavani, Jan 23, 2019, 9:58 AM IST
ರಾಯಚೂರು: ಕ್ರೀಡೆಗಳಲ್ಲಿ ಸೋಲು-ಗೆಲುವು ಸಹಜ. ಅದನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವನೆ ಅಳವಡಿಸಿಕೊಳ್ಳಬೇಕು ಎಂದು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಎಂ.ಮಹಾದೇವಯ್ಯ ಹೇಳಿದರು.
ನಗರದ ಎಲ್‌ವಿಡಿ ಕಾಲೇಜ್ ಆವರಣದಲ್ಲಿ ಗಣರಾಜ್ಯೋತ್ಸವ ನಿಮಿತ್ತ ರವಿವಾರ ನ್ಯಾಯಾಂಗ ಇಲಾಖೆ ಹಾಗೂ ವಕೀಲರ ಸಂಘದಿಂದ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ವೃತ್ತಿ ಬದುಕಿನ ಒತ್ತಡದ ಮಧ್ಯೆ ಇಂಥ ಕ್ರೀಡಾಕೂಟಗಳಲ್ಲಿ ಭಾಗಿಯಾಗುವುದು ಉತ್ತಮ. ಇದರಿಂದ ಮಾನಸಿಕ ಒತ್ತಡ ನಿವಾರಣೆ ಆಗಲಿದೆ ಎಂದರು.
ವಕೀಲರ ಸಂಘದ ಜಿಲ್ಲಾಧ್ಯಕ್ಷ ಎನ್.ಭಾನುರಾಜ ಮಾತನಾಡಿ, ಸಂಘದ ಸದಸ್ಯರನ್ನು ಸಕ್ರಿಯವಾಗಿಡಲು ಇಂಥ ಕ್ರೀಡಾಕೂಟ ಆಯೋಜಿಸಲಾಗುತ್ತಿದೆ. ಪ್ರತಿ ಗಣರಾಜ್ಯೋತ್ಸವಕ್ಕೂ ನಾವು ಕ್ರೀಡೆಗಳನ್ನು ಆಯೋಜಿಸಿ ವಕೀಲರಲ್ಲಿ ಉತ್ಸಾಹ ತರುವ ಪ್ರಯತ್ನ ಮಾಡುತ್ತಿರುವುದಾಗಿ ಹೇಳಿದರು.
ನ್ಯಾಯಾಂಗ ಇಲಾಖೆ ತಂಡದ ನಾಯಕರಾಗಿ ಎರಡನೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮುಸ್ತಾಫ ಹುಸೇನ್, ಅದೇ ತಂಡದಲ್ಲಿ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ಈಶ್ವರ ಹಾಗೂ ಕಿರಿಯ ಶ್ರೇಣಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ರಾಜಶೇಖರ ಹಾಗೂ ನ್ಯಾಯಾಂಗ ಇಲಾಖೆ ನೌಕರರು ಮತ್ತು ಎರಡನೇ ತಂಡದ ನಾಯಕರಾದ ಎಚ್.ಮೇಟಿ ವಕೀಲರು ಹಾಗೂ ಸಂಗಡಿಗರು ಮತ್ತು ಮೂರನೇ ತಂಡದ ನಾಯಕರಾದ ರಾಮಣ್ಣ ನಾಯಕ ವಕೀಲರು ಹಾಗೂ ತಂಡದ ಸದಸ್ಯರು ಭಾಗವಹಿಸಿದ್ದರು.
ವಕೀಲರ ಸಂಘದ ಕಾರ್ಯದರ್ಶಿ ಶ್ರೀಧರಯಲಿ, ಜಂಟಿ ಕಾರ್ಯದರ್ಶಿ ನಜೀರ್ ಅಹ್ಮದ್, ಖಜಾಂಚಿ ರಾಮು ವಕೀಲರು ಹಾಗೂ ಹಿರಿಯ ವಕೀಲ ಕೆ.ಮಲ್ಲಿಕಾರ್ಜುನ, ಅಂಬಾಪತಿ ಪಾಟೀಲ, ಎಸ್.ಎಸ್.ಹೊಸಗೌಡರು, ಕೆ.ಸಿ.ವೀರೇಶ, ಅಶೋಕ ಗೋನಾಳ, ಮಲ್ಲಪ್ಪ ಚನ್ನಪ್ಪನವರ, ವಿಶ್ವನಾಥ ಇಟಗಿ, ಬಂಡೇಶ ವಲ್ಕಂದಿನ್ನಿ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.