ಮಂಗನ ಕಾಯಿಲೆ ಮನುಷ್ಯರಿಂದ ಮನುಷ್ಯರಿಗೆ ಹರಡುವುದಿಲ್ಲ : ಅಶ್ವಿನಿ
Team Udayavani, Jan 24, 2019, 12:50 AM IST
ಕಟಪಾಡಿ: ಮಂಗನ ಕಾಯಿಲೆ ಮನುಷ್ಯರಿಂದ ಮನುಷ್ಯರಿಗೆ ಹರಡುವುದಿಲ್ಲ. ಇದುವರೆಗಿನ ಪ್ರಕರಣಗಳಲ್ಲಿ ಹೆಂಗಸರೇ ಈ ರೋಗಕ್ಕೆ ತುತ್ತಾಗಿರುವುದು ಜಾಸ್ತಿ ಕಂಡು ಬಂದಿರುತ್ತದೆ ಎಂದು ಮೂಡಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಅಶ್ವಿನಿ ಹೇಳಿದರು.
ಅವರು ಕುರ್ಕಾಲು ಗ್ರಾಮ ಪಂಚಾಯತ್‌ನಲ್ಲಿ ಮಂಗನ ಕಾಯಿಲೆಯ ಬಗ್ಗೆ ಮಾಹಿತಿಯ ವಿಶೇಷ ಗ್ರಾಮಸಭೆಯನ್ನು ಉದ್ದೇಶಿಸಿ ಮಾಹಿತಿ ನೀಡುತ್ತಾ ಮಾತನಾಡಿದರು.
ವೈರಸ್‌ನಿಂದ ಹರಡುವ ಕಾಯಿಲೆ ಇದಾಗಿದ್ದು, ಲಕ್ಷಣ ಆಧರಿಸಿ ಚಿಕಿತ್ಸೆ ಸಾಧ್ಯತೆ ಇದೆ. ಪಶ್ಚಿಮ ಘಟ್ಟದ ಸಾಲಿನಲ್ಲಿ ಕಂಡು ಬರುವ ಸಾಧ್ಯತೆ ಹೆಚ್ಚಾಗಿದ್ದು, ಈ ವೈರಾಣು ಮಂಗ ಮತ್ತು ಮನುಷ್ಯನ ಮೇಲೆ ಮಾತ್ರ ದಾಳಿ ಮಾಡುತ್ತದೆ. ರೋಗ ನಿರೋಧಕ ಶಕ್ತಿ ಹೆಚ್ಚು ಇದ್ದ ಪಕ್ಷದಲ್ಲಿ ಇದು ಬಾಧಿಸುವುದಿಲ್ಲ ಎಂದರು.
ಲಕ್ಷಣಗಳು
ಸುಮಾರು 2 ವಾರಗಳಿಗೂ ಮಿಕ್ಕಿದ ಕಾಲ ಜ್ವರ ಬರುವುದು, ವಿಪರೀತವಾಗಿ ತಲೆ, ಸೊಂಟ, ಕೈಕಾಲು ನೋವು ಜೊತೆಗೆ ನಿಶ್ಯಕ್ತಿ, ಕಣ್ಣು ಕೆಂಪಗಾಗುವುದು. ಮೂಗು, ಗಂಟಲು ಭಾಗದಲ್ಲಿ ರಕ್ತ ಸ್ರಾವವಾಗಬಹುದು ಎಂಬ ಮಾಹಿತಿ ನೀಡಿದರು.
ಮುಂಜಾಗ್ರತಾ ಕ್ರಮ
ಯಾವುದೇ ಪ್ರದೇಶದಲ್ಲಿ ಮಂಗ ಸತ್ತಿರುವವುದು ಕಂಡೊಡನೆ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರ, ಅರಣ್ಯ ಇಲಾಖೆ, ಗ್ರಾಮ ಪಂಚಾಯತ್ ಗಳಿಗೆ ಮಾಹಿತಿ ನೀಡಿರಿ. ಮಂಗ ಸತ್ತ ಕಾಡಿನಲ್ಲಿ ಸಂಚರಿಸುವಾಗ ಮೈ ತುಂಬಾ ಬಟ್ಟೆ ಧರಿಸಿ ಆರೋಗ್ಯ ಇಲಾಖೆಯಿಂದ ಉಚಿತವಾಗಿ ವಿತರಿಸುವ ಡಿ.ಎಂ.ಪಿ. ತೈಲ ಅಥವಾ ಬೇವಿನ ಎಣ್ಣೆಯನ್ನು ಲೇಪಿಸಿಕೊಂಡು ಹೋಗಬಹುದು. ಕಾಡಿನಿಂದ ಬಂದ ಅನಂತರ ಬಿಸಿ ನೀರಿನಿಂದ ಸ್ನಾನ ಮಾಡಬೇಕು. ಬಟ್ಟೆಗಳನ್ನು ಒಗೆಯಬೇಕು. ರೋಗ ಬಾಧಿಸುವ ಮುನ್ನ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವುದು ಸೂಕ್ತ ಎಂದರು.
ಅಧ್ಯಕ್ಷತೆ ವಹಿಸಿದ್ದ ಕುರ್ಕಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ ಮಾತನಾಡಿ, ಮಾಹಿತಿಗಳ ಸದು ಪಯೋಗಪಡಿಸಿಕೊಳ್ಳಿರಿ. ಕಾಯಿಲೆಗಳಿಗೆ ಬಾಧಿತರಾಗುವ ಮುನ್ನವೇ ಎಚ್ಚೆತ್ತು ಮುಂಜಾಗ್ರತಾ ಕ್ರಮವನ್ನು ಅನುಸರಿಸುವಂತೆ ಕರೆ ನೀಡಿದರು.
ಈ ಸಂದರ್ಭ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಸಂಯೋಜಕ ಸುಧೀಂದ್ರ, ತಾಲೂಕು ಸಂಯೋಜಕ ಮಧುಸೂದನ್, ಹಿರಿಯ ನಾಗರೀಕರ ಸಹಾಯವಾಣಿ ಕೇಂದ್ರದ ಸಂಯೋಜಕ ಗಣೇಶ್, ಜ್ಞಾನಜ್ಯೋತಿ ಆರ್ಥಿಕ ಸಾಕ್ಷರತೆ ವಿಭಾಗದ ಸಂತೋಷ್ ಕುಮಾರ್ ವೇದಿಕೆಯಲ್ಲಿದ್ದರು.
ಅಂಗನವಾಡಿ, ಆಶಾ ಕಾರ್ಯಕರ್ತೆ ಯರು, ಗ್ರಾ.ಪಂ. ಸಿಬಂದಿ, ಗ್ರಾಮ ಲೆಕ್ಕಿಗ, ಗ್ರಾಮಸ್ಥರು ಉಪಸ್ಥಿತರಿದ್ದರು. ಪಿಡಿಒ ಚಂದ್ರಕಲಾ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
MUST WATCH
ಹೊಸ ಸೇರ್ಪಡೆ
Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್
Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.