‘ಜ್ಞಾನ, ಕೌಶಲ ಸಂಪಾದನೆಯಷ್ಟೇ ಶಿಕ್ಷಣವಲ್ಲ’
Team Udayavani, Jan 24, 2019, 6:06 AM IST
ಪುತ್ತೂರು: ಶಿಕ್ಷಣದ ಉದ್ದೇಶ ಕೇವಲ ಜ್ಞಾನ ಮತ್ತು ಕೌಶಲಗಳ ಸಂಪಾದನೆ ಅಲ್ಲ. ಬದಲಾಗಿ ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ವಿಕಸನದೊಂದಿಗೆ ಸಮಾಜದಲ್ಲಿ ಒಬ್ಬ ಉತ್ತಮ ಪ್ರಜೆಯನ್ನಾಗಿ ರೂಪಿಸುವಂತಿರಬೇಕು ಎಂದು ಉಚ್ಚ ನ್ಯಾಯಾಲಯದ ನ್ಯಾಯಾಧೀಶ ಮಹಮ್ಮದ್ ನವಾಜ್ ಹೇಳಿದರು.
ಸಂತ ಫಿಲೋಮಿನಾ ಕಾಲೇಜಿನ ಪ್ರಾಂಗಣದಲ್ಲಿ ಜ. 22ರಂದು ನಡೆದ ಹಿರಿಯ ವಿದ್ಯಾರ್ಥಿ ಮತ್ತು ರಕ್ಷಕ-ಶಿಕ್ಷಕ ಸಂಘದ ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ವಿದ್ಯಾರ್ಥಿಗಳ ಮಹತ್ವಪೂರ್ಣ ಸಾಧನೆಗೆ ಶಿಸ್ತು ಮತ್ತು ಸತತ ಪರಿಶ್ರಮ ಅತಿ ಮುಖ್ಯ. ಹಿರಿಯ ವಿದ್ಯಾರ್ಥಿಗಳು, ವಿದ್ಯಾರ್ಜನೆಗೈದ ಶಿಕ್ಷಣ ಸಂಸ್ಥೆಗೆ ಆಗಾಗ ಭೇಟಿ ಕೊಟ್ಟು ಸಂಸ್ಥೆಯ ಸಾಧನೆಯ ಬಗ್ಗೆ ಹೆಮ್ಮೆ ಪಡುವ ಮನೋಭಾವ ಹೊಂದಿರಬೇಕು ಎಂದರು.
ಕೊಡುಗೆ ಮಹತ್ವಪೂರ್ಣದ್ದು
ಅಧ್ಯಕ್ಷತೆ ವಹಿಸಿದ್ದ ಮಂಗಳೂರು ಧರ್ಮಪ್ರಾಂತದ ಮಾಜಿ ವಿಕಾರ್ ಜನರಲ್ ಮೊ| ಡೆನ್ನಿಸ್ ಮೊರಾಸ್ ಪ್ರಭು, ಗೌರವ ಅತಿಥಿಯಾಗಿದ್ದ ಮಂಗಳೂರಿನ ಚಾರ್ಟರ್ಡ್ ಅಕೌಂಟೆಂಟ್ ಎಂ. ಜಗನ್ನಾಥ ಕಾಮತ್, ವಿಜಯ ಬ್ಯಾಂಕಿನ ಹುಬ್ಬಳ್ಳಿ ಪ್ರಾದೇಶಿಕ ಕಚೇರಿಯ ಉಪ ಮಹಾಪ್ರಬಂಧಕ ಬ್ಯಾಪ್ಟಿಸ್ಟ್ ಲೋಬೋ ಶುಭ ಹಾರೈಸಿದರು.
ಸಮ್ಮಾನ
ವಿಜಿಎಸ್‌ಟಿ ಪ್ರಶಸ್ತಿ ವಿಜೇತ ವಂ|ಡಾ| ಆ್ಯಂಟನಿ ಪ್ರಕಾಶ್ ಮೊಂತೆರೊ, ಪಿಎಚ್‌ಡಿ ಪದವಿ ಗಳಿಸಿದ ಕಾಲೇಜಿನ ಭೌತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ| ಕೆ. ಚಂದ್ರಶೇಖರ, ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ| ಮಾಲಿನಿ ಕೆ. ಮತ್ತು ಮಂಗಳೂರು ವಿವಿ ಸಿಂಡಿಕೇಟ್‌ಗೆ ನಾಮನಿರ್ದೇಶನಗೊಂಡ ಕಾಲೇಜಿನ ಪ್ರಾಚಾರ್ಯ ಪ್ರೊ| ಲಿಯೋ ನೊರೊನ್ಹಾ ಅವರನ್ನು ಸಮ್ಮಾನಿಸಲಾಯಿತು. ಮಂಗಳೂರು ವಿವಿ 2018ರ ಎಪ್ರಿಲ್‌ನಲ್ಲಿ ನಡೆಸಿದ ಪರೀಕ್ಷೆಗಳ ರ್‍ಯಾಂಕ್ ವಿಜೇತರಿಗೆ ಮತ್ತು ಕಾಲೇಜಿನ ಕ್ರೀಡಾ ಸಾಧಕರನ್ನು ಸಮ್ಮಾನಿಸಲಾಯಿತು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.