ಬೀದಿ ನಾಯಿಗಳ ಹಾವಳಿ ತಡೆಗೆ ಸಂತಾನಹರಣ ಚಿಕಿತ್ಸೆ!
Team Udayavani, Jan 24, 2019, 7:21 AM IST
ಚಿಕ್ಕಬಳ್ಳಾಪುರ: ಜಿಲ್ಲಾ ಕೇಂದ್ರದ ಹಾದಿ ಬೀದಿಗಳಲ್ಲಿ ಗುಂಪು ಗುಂಪುಗಳಾಗಿ ಕಂಡು ಬಂದು ಸಿಕ್ಕಸಿಕ್ಕ ಸಾರ್ವಜನಿಕರ, ಶಾಲಾ, ಕಾಲೇಜು ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಿ ಗಾಯಗೊಳಿಸುತ್ತಿದ್ದ ಬೀದಿ ನಾಯಿಗಳ ಹಾವಳಿಗೆ ಕೊನೆಗೂ ಮೂಗುದಾರ ಹಾಕಲು ಸ್ಥಳೀಯ ನಗರಸಭೆ ಎಚ್ಚೆತ್ತಿಕೊಂಡಿದ್ದು, ನಾಯಿಗಳ ಸಂತತಿಗೆ ಬ್ರೇಕ್ ಹಾಕಲು ಸಂತಾನಹರಣ ಶಕ್ತಿ ಚಿಕಿತ್ಸೆ ಮಾಡಲಾಗುತ್ತಿದೆ.
ಚಿಕ್ಕಬಳ್ಳಾಪುರ ನಗರಕ್ಕೆ ಕಳಂಕ ತರುವ ನಿಟ್ಟಿನಲ್ಲಿ ಸಹಸ್ರಾರು ಬೀದಿನಾಯಿಗಳು ನಗರದ 31 ವಾರ್ಡ್‌ನಲ್ಲೂ ಮೊಕ್ಕಾಂ ಹೂಡಿ ಒಂಟಿಯಾಗಿ ಮಕ್ಕಳು ಹೋದರೆ ಅಥವಾ ಮನೆಗೆ ಹಾಲು, ಬಿಸ್ಕೇಟ್, ತಿಂಡಿ, ತಿನಿಸು ತರುವ ಸಾರ್ವಜನಿಕರಿಗೆ ಇನ್ನಿಲ್ಲದ ರೀತಿಯಲ್ಲಿ ಕಾಟ ಕೊಡುತ್ತಿದ್ದವು. ಇದರಿಂದ ಸಾರ್ವಜನಿಕರು ಬೆಳಗಿನ ಜಾವ ವಾಯು ವಿಹಾರಕ್ಕೆ ತೆರಳುವ ಮಂದಿ ಕೈಯಲ್ಲಿ ಕೋಲು ಹಿಡಿದು ಹೋಗುವ ಸ್ಥಿತಿ ನಿರ್ಮಾಣವಾಗಿತ್ತು. ಅಷ್ಟರ ಮಟ್ಟಿಗೆ ಚಿಕ್ಕಬಳ್ಳಾಪುರ ನಗರದಲ್ಲಿ ಬೀದಿ ನಾಯಿಗಳ ಅಟ್ಟಹಾಸ ಮೆರೆದಿದ್ದವು.
ದಾಳಿ ಪ್ರಕರಣಗಳಿಗೆ ಲೆಕ್ಕವಿಲ್ಲ: ಜಿಲ್ಲಾ ಕೇಂದ್ರದಲ್ಲಿ ಕಳೆದ ನಾಲ್ಕೈದು ವರ್ಷಗಳಿಂದ ಬೀದಿ ನಾಯಿಗಳ ದಾಳಿ ಪ್ರಕರಣಗಳಿಗೆ ಲೆಕ್ಕವೇ ಇಲ್ಲ. ಪ್ರತಿ ವಾರ್ಡ್‌ನಲ್ಲೂ ನಿರೀಕ್ಷೆಗೂ ಮೀರಿ ಬೀದಿ ನಾಯಿಗಳು ತಮ್ಮ ಸಾಮ್ರಾಜ್ಯವನ್ನು ನಿರ್ಮಿಸಿಕೊಂಡಿದ್ದವು. ದಿನ ಬೆಳೆಗಾದರೆ ಎಲ್ಲೋ ಒಂದು ಕಡೆ ನಾಯಿಗಳ ಹಿಂಡು ದಾಳಿ ನಡೆಸಿದ ಪ್ರಕರಣಗಳು ಕೇಳಿ ಬರುತ್ತಿದ್ದವು.
ಮೊದಲೇ ಅಸ್ವತ್ಛತೆಯಿಂದ ಕೂಡಿರುವ ನಗರದ ಬಹುಭಾಗದಲ್ಲಿ ನಾಯಿಗಳ ಹಿಂಡು ಕಂಡು ಬಂದು ಸಾರ್ವಜನಿಕರನ್ನು ಸಂಕಷ್ಟಕ್ಕೀಡು ಮಾಡುತ್ತಿದ್ದವು. ಹಲವು ಬಾರಿ ಶಾಲಾ ಮಕ್ಕಳು, ಸಾರ್ವಜನಿಕರು, ವಯೋ ವೃದ್ಧರು ನಾಯಿಗಳ ದಾಳಿಗೆ ತುತ್ತಾಗಿ ಆಸ್ಪತ್ರೆ ಸೇರಿದ ಉದಾಹಕರಣೆಗಳಿಗೆ ಕೊರತೆ ಇಲ್ಲ. ನಗರದ ಸಂತೆ ಮಾರುಕಟ್ಟೆ, ಎಂಜಿ ರಸ್ತೆ, ಗಂಗನಮಿದ್ದೆ, ಬಾಪೂಜಿ ನಗರ, ಪ್ರಶಾಂತ ನಗರ, ವಾಪಸಂದ್ರ, ಚಾಮರಾಜಪೇಟೆ, ಮುನ್ಸಿಪಾಲ್ ಲೇಔಟ್, ಸರ್‌ಎಂ.ವಿ ಲೇಔಟ್, ಜಿಲ್ಲಾಸ್ಪತ್ರೆ ರಸ್ತೆ, ಸಾಧು ಮಠದ ರಸ್ತೆ, ನಗರಸಭೆ ಕಚೇರಿ ಸುತ್ತಮುತ್ತಲು ಸಾವಿರಾರು ಬೀದಿ ನಾಯಿಗಳ ಹಿಂಡು ದರ್ಶನವಾಗಿ ಸಾರ್ವಜನಿಕರು ಬೆಚ್ಚಿಬೀಳುತ್ತಿದ್ದರು.
ಬೀದಿನಾಯಿಗಳ ತಡೆಗೆ ಅಸ್ರಾ..!: ಬೀದಿನಾಯಿಗಳ ಹಾವಳಿಗೆ ರೋಸಿ ಹೋಗಿದ್ದ ಸಾರ್ವಜನಿಕರು ಅವುಗಳನ್ನು ಹಿಡಿದು ಸ್ಥಳಾಂತರಿಸುವಂತೆ ಹಲವು ಬಾರಿ ಒತ್ತಾಯಿಸಿದ್ದರು. ಈ ಬಗ್ಗೆ ಸ್ವತಃ ಸದಸ್ಯರೇ ನಗರಸಭೆ ಕೌನ್ಸಿಲ್ ಸಭೆಯಲ್ಲಿ ಬೀದಿ ನಾಯಿಗಳ ಹಾಗೂ ಕೋತಿಗಳಿಂದ ಸಾರ್ವಜನಿಕರಿಗೆ ಆಗುತ್ತಿದ್ದ ತೊಂದರೆ ನಿವಾರಿಸುವಂತೆ ಆಗ್ರಹಿಸಿದ್ದರು.
ಇದರಿಂದ ಎಚ್ಚೆತ್ತುಕೊಂಡಿದ್ದ ನಗರಸಭೆ ಬೀದಿ ನಾಯಿಗಳ ನಿಯಂತ್ರಣಕ್ಕೆ ಸಂತಾನಹರಣ ಶಕ್ತಿ ಚಿಕಿತ್ಸೆ ಮಾಡಲು ಹಲವು ಬಾರಿ ಟೆಂಡರ್ ಕರೆದರೂ ಯಾರು ಮುಂದೆ ಬಂದಿರಲಿಲ್ಲ. ಆದರೆ ಇದೀಗ ಅಸ್ರಾ ಎಂಬ ಪ್ರಾಣಿಗಳ ಕಲ್ಯಾಣ ಸಂಸ್ಥೆ ಮುಂದಾಗಿದ್ದು, ಸ್ಥಳೀಯ ನಗರಸಭೆ ಅಸ್ರಾ ಸಂಸ್ಥೆಗೆ ಗುತ್ತಿಗೆ ನೀಡಿದೆ. ಕಳೆದ ನಾಲ್ಕೈದು ದಿನಗಳಿಂದ ಅಸ್ರಾ ಪ್ರಾಣಿಗಳ ಕಲ್ಯಾಣ ಸಂಸ್ಥೆಯ ನುರಿತ ವೈದ್ಯರು ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಅವುಗಳನ್ನು ಹಿಡಿಯುವ ಕೆಲಸಕ್ಕೆ ಮುಂದಾಗಿದ್ದಾರೆ.
ಗ್ರಂಥಾಲಯ ಪಕ್ಕದಲ್ಲಿ ಅಗತ್ಯ ವ್ಯವಸ್ಥೆ: ಈಗ ಅಸ್ರಾ ಪ್ರಾಣಿಗಳ ಕಲ್ಯಾಣ ಸಂಘ ನಾಯಿಗಳಿಗೆ ಸಂತಾನಹರಣ ಶಕ್ತಿ ಶಸ್ತ್ರ ಚಿಕಿತ್ಸೆ ಮಾಡಿಸಲು ಟೆಂಡರ್‌ನಲ್ಲಿ ತುಂಬ ಕಡಿಮೆ ಮೊತ್ತ ನಮೂದಿಸಿತ್ತು. ಹಾಗಾಗಿ ಪ್ರತಿ ನಾಯಿಗೆ ಸಂತಾನಹರಣ ಶಕ್ತಿ ಶಸ್ತ್ರ ಚಿಕಿತ್ಸೆ, ಆ್ಯಂಟಿ ರೇಬಿಸ್ ಚುಚ್ಚುಮದ್ದು ನಾಯಿಯನ್ನು ಮೂರು ದಿನಗಳ ಕಾಲ ಆರೈಕೆ ಸೇರಿ ಒಟ್ಟು 1,200 ರೂ. ರಂತೆ ಗುತ್ತಿಗೆ ನೀಡಲಾಗಿದೆ. ಶಸ್ತ್ರಚಿಕಿತ್ಸೆಗೆ ನಗರದ ಜಿಲ್ಲಾ ಕೇಂದ್ರ ಗ್ರಂಥಾಲಯ ಪಕ್ಕದಲ್ಲಿ ಅಗತ್ಯ ವ್ಯವಸ್ಥೆ ಮಾಡಲಾಗಿದೆ ಎಂದು ಸ್ಥಳೀಯ ನಗರಸಭೆ ಆಯುಕ್ತ ಉಮಾಕಾಂತ್ ಉದಯವಾಣಿಗೆ ತಿಳಿಸಿದರು.
ಒಟ್ಟಿನಲ್ಲಿ ಬೀದಿ ನಾಯಿಗಳ ಹಾವಳಿ, ಅವುಗಳ ದಿಢೀರ್ ದಾಳಿಯಿಂದ ಹಲವು ವರ್ಷಗಳಿಂದ ತೀವ್ರ ಕಂಗಾಲಾಗಿದ್ದ ಸಾರ್ವಜನಿಕರಿಗೆ ನೆಮ್ಮದಿ ತರುವ ನಿಟ್ಟಿನಲ್ಲಿ ಆಕಸ್ಮಿಕವಾಗಿ ಕಚ್ಚಿದರೂ ಅವುಗಳಿಂದ ಅಪಾಯಕಾರಿ ರೇಬಿಸ್ ಕಾಯಿಲೆ ಹರಡದಂತೆ ನಾಯಿಗಳಿಗೆ ಆ್ಯಂಟಿ ರೇಬಿಸ್ ಚುಚ್ಚುಮದ್ದು ಜತೆಗೆ ನಗರದಲ್ಲಿರುವ ಬೀದಿ ನಾಯಿಗಳಿಗೆ ಸಂತತಿ ಆಗದಂತೆ ಸಂತಾನಹರಣ ಶಕ್ತಿ ಶಸ್ತ್ರ ಚಿಕಿತ್ಸೆ ನೀಡಲು ನಗರಸಭೆ ಮುಂದಾಗಿರುವುದು ಸಾರ್ವಜನಿಕರಲ್ಲಿ ಸಂತಸ ತಂದಿದೆ.
ಒಂದು ಬೀದಿ ನಾಯಿಗೆ 1,200 ರೂ. ಖರ್ಚು: ಜಿಲ್ಲಾ ಕೇಂದ್ರದಲ್ಲಿ ಬೀದಿ ನಾಯಿಗಳ ಹಾವಳಿ ತಡೆಗೆ ಮುಂದಾಗಿರುವ ಸ್ಥಳೀಯ ನಗರಸಭೆ ಒಂದು ನಾಯಿಗೆ ಬರೋಬ್ಬರಿ 1,200 ರೂ. ಖರ್ಚು ಮಾಡುತ್ತಿದೆ. ಬೀದಿ ನಾಯಿಗೆ ಸಂತಾನಹರಣ ಶಕ್ತಿ ಚಿಕಿತ್ಸೆ ನೀಡುವುದರ ಜತೆಗೆ ಅದನ್ನು ಮೂರು ದಿನಗಳ ಕಾಲ ಶಸ್ತ್ರ ಚಿಕಿತ್ಸೆ ಬಳಿಕ ಆರೈಕೆ ಮಾಡುವ ಕೆಲಸವನ್ನು ಅಸ್ರಾ ಪ್ರಾಣಿಗಳ ಕಲ್ಯಾಣ ಸಂಸ್ಥೆಗೆ ನಗರಸಭೆ ಗುತ್ತಿಗೆ ನೀಡಿದೆ. ಅಲ್ಲದೇ ಬೀದಿ ನಾಯಿಗಳಿಗೆ ಆ್ಯಂಟಿ ರೇಬಿಸ್ ಚುಚ್ಚು ಮದ್ದು ಸಹ ನೀಡಲಾಗುತ್ತಿದೆ. ಈಗಾಗಲೇ 150 ಕ್ಕೂ ಹೆಚ್ಚು ಬೀದಿ ನಾಯಿಗಳಿಗೆ ಅಸ್ರಾ ಸಂಸ್ಥೆ ಸಂತಾನ ಹರಣ ಶಕ್ತಿ ಶಸ್ತ್ರ ಚಿಕಿತ್ಸೆ ಪೂರೈಸಿದೆ.
ಚಿಕ್ಕಬಳ್ಳಾಪುರದಲ್ಲಿವೆ 2000 ಬೀದಿ ನಾಯಿಗಳು: 100, 200 ಅಲ್ಲ ಬರೋಬ್ಬರಿ 2000 ಕ್ಕೂ ಅಧಿಕ ಬೀದಿ ನಾಯಿಗಳು ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ ಠಿಕಾಣಿ ಹಾಕಿವೆ. ಇದು ಸ್ಥಳೀಯ ನಗರಸಭೆ ನಡೆಸಿರುವ ಸಮೀಕ್ಷೆಯ ಅಂಕಿ, ಅಂಶ, ಪ್ರತಿ ವಾರ್ಡ್‌ನಲ್ಲೂ ಬೀದಿ ನಾಯಿಗಳ ಹಾವಳಿ ಇದ್ದೇ ಇದೆ. ಹೆಚ್ಚಾಗಿ ಮುಖ್ಯ ರಸ್ತೆಗಳಲ್ಲಿಯೇ ನಾಯಿಗಳ ಹಾವಳಿ ಅಧಿಕವಾಗಿದೆ. ಇದರಿಂದ ವಾಹನ ಸವಾರರು, ಸಾರ್ವಜನಿಕರು, ಪಾದಚಾರಿಗಳು ಪರದಾಡುವುದು ಮಾಮೂಲಿಯಾಗಿದೆ.
ಬೀದಿ ನಾಯಿಗಳ ಹಾವಳಿ ತಡೆಯಲು ನಗರಸಭೆ ಅಧಿಕಾರಿಗಳು ಈ ಹಿಂದೆಯೇ ಎಚ್ಚೆತ್ತುಕೊಳ್ಳಬೇಕಿತ್ತು. ಆದರೂ ತಡವಾಗಿಯಾದರೂ ಎಚ್ಚೆತ್ತಿಕೊಂಡಿರುವವುದು ನೆಮ್ಮದಿ ವಿಚಾರ. ಬೀದಿ ನಾಯಿಗಳ ದಾಳಿಯಿಂದ ನಗರದಲ್ಲಿ ಅನೇಕ ಮಂದಿ ಗಾಯಗೊಂಡಿದ್ದಾರೆ. ಸಾರ್ವಜನಿಕರು ಓಡಾಟಕ್ಕೂ ಕಷ್ಟವಾಗಿತ್ತು. ವಾಹನ ಸವಾರರು ಪರದಾಡಬೇಕಿತ್ತು.
-ಎನ್.ಚಂದ್ರಶೇಖರ್, ಚಿಕ್ಕಬಳ್ಳಾಪುರ ನಿವಾಸಿ
* ಕಾಗತಿ ನಾಗರಾಜಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MP ಡಾ. ಸುಧಾಕರ್ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್
Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!
Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ
MUST WATCH
ಹೊಸ ಸೇರ್ಪಡೆ
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
Manipur: ಸಿಎಂ ಬಿರೇನ್ ಸಿಂಗ್ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.