ಲೋಕಸಭೆ ಚುನಾವಣಾ ಪೂರ್ವ ಸಮೀಕ್ಷೆ; ಈ ಬಾರಿ ರಾಜ್ಯದಲ್ಲಿ ಯಾರು ಮೇಲುಗೈ?
Team Udayavani, Jan 24, 2019, 12:54 PM IST
ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಮೈತ್ರಿಯಾದರೂ ಭಾರತೀಯ ಜನತಾ ಪಕ್ಷಕ್ಕೆ ಸೆಡ್ಡು ಹೊಡೆಯಲು ಕಷ್ಟಸಾಧ್ಯ ಎಂದು ವಿಶ್ಲೇಷಿಸಲಾಗುತ್ತಿದ್ದು, ಏತನ್ಮಧ್ಯೆ “ಸಿ ವೋಟರ್” ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಈ ಬಾರಿ ಕರ್ನಾಟಕದಲ್ಲಿ ಬಿಜೆಪಿಗೆ ಹಿನ್ನಡೆಯಾಗಲಿದೆ ಎಂಬುದಾಗಿ ಭವಿಷ್ಯ ನುಡಿದಿದೆ.
ಸೀ ವೋಟರ್ ನಡೆಸಿರುವ ಚುನಾವಣಾ ಪೂರ್ವ ಸಮೀಕ್ಷೆ ಪ್ರಕಾರ, 2014ರ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಕರ್ನಾಟಕದಲ್ಲಿ 17 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಆದರೆ 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 14 ಸ್ಥಾನಗಳಲ್ಲಿ ಜಯ ಸಾಧಿಸಬಹುದು ಎಂದು ತಿಳಿಸಿದೆ.
2019 ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಮೈತ್ರಿಯಾದರೂ ಕೂಡಾ ಕಾಂಗ್ರೆಸ್ ಪಕ್ಷ 11 ಹಾಗೂ ಜೆಡಿಎಸ್ ಮೂರು ಸ್ಥಾನ ಪಡೆಯಲಿದೆ ಎಂದು ಭವಿಷ್ಯ ನುಡಿದಿದೆ. 2014ರ ಚುನಾವಣೆಗೆ ಹೋಲಿಸಿದರೆ ಬಿಜೆಪಿ ಈ ಬಾರಿ ಮೂರು ಸ್ಥಾನ ಕಳೆದುಕೊಳ್ಳಲಿದೆ ಎಂದು ಸಮೀಕ್ಷೆ ಹೇಳಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.