ಪ್ರವಾಸಿಗರನ್ನು ಆಕರ್ಷಿಸಲು ಹೌಸ್‌ ಬೋಟ್‌ ಟರ್ಮಿನಲ್‌

Team Udayavani, Jan 25, 2019, 12:50 AM IST

boat-terminal.jpg

ಕಾಸರಗೋಡು: ಪ್ರವಾಸೋದ್ಯಮ ಅಭಿವೃದ್ಧಿ ಸಾಧ್ಯತೆಯ ಅವಕಾಶಗಳನ್ನು ಬಳಸಿ ಜಿಲ್ಲೆಯನ್ನು ಪ್ರಮುಖ ಪ್ರವಾಸಿ ಕೇಂದ್ರ ವನ್ನಾಗಿ ಪರಿವರ್ತಿಸುವ ಉದ್ದೇಶದೊಂದಿಗೆ ಹೌಸ್‌ ಬೋಟ್‌ ಟರ್ಮಿನಲ್‌ ನಿರ್ಮಿಸಲು ಯೋಜಿಸಲಾಗಿದ್ದು, 1.35 ಕೋ. ರೂ.ಯೋಜನೆಗೆ ಪ್ರವಾಸೋದ್ಯಮ ಇಲಾಖೆ ಆಡಳಿತಾ ನುಮತಿ ನೀಡಿದೆ. ಈ ಮೂಲಕ ದೇಶಿ ಹಾಗೂ ವಿದೇಶಿ ಪ್ರವಾಸಿಗರನ್ನು ಕೈಬೀಸಿ ಕರೆಯಲು ಸಾಧ್ಯವಾಗುವ ಮೂಲಕ ಆರ್ಥಿಕತೆ ಉತ್ತಮಗೊಳಿಸಲು ಸಾಧ್ಯವಾಗಬಹುದೆಂಬ ನಿರೀಕ್ಷೆಯಿರಿಸಿಕೊಳ್ಳಲಾಗಿದೆ.

ಅಚ್ಚಾಂತುರ್ತಿ-ಕೋಟ್ಟಪ್ಪುರಂ ಸೇತುವೆಯನ್ನು ಲೋಕಾರ್ಪಣೆಗೊಳಿಸುವ ಮೂಲಕ ಸಮಗ್ರ ಅಭಿವೃದ್ಧಿಗೆ ಎದುರಾಗಿದ್ದ ಅಡ್ಡಿಗಳೆಲ್ಲ ನಿವಾರಣೆ ಯಾಗಿವೆೆ. ಕೋಟ್ಟಪ್ಪುರಂ ಹೌಸ್‌ ಬೋಟ್‌ ಟರ್ಮಿನಲ್‌ ರಸ್ತೆಗೆ ಬದಲಿಯಾಗಿ ಕೋಟ್ಟಪ್ಪುರಂ ಕ್ಷೇತ್ರದ ಹಿಂಭಾಗದಿಂದ ಆರಂಭಿಸಿ ತೇಜಸ್ವಿನಿ ನದಿ ದಡದಲ್ಲಿ ಈ ಹಿಂದೆ ತೀರ್ಮಾನಿಸಿದಂತೆ ಹೌಸ್‌ ಬೋಟ್‌ ಟರ್ಮಿನಲ್‌ ತನಕ ಹಾದು ಹೋಗುವ ಒಂದು ಕಿಲೋ ಮೀಟರ್‌ ರಸ್ತೆಗೆ ಹಾಗೂ ಇಂಟರ್‌ಲಾಕ್‌ ಕಾಲ್ನಡಿಗೆ ದಾರಿ ನಿರ್ಮಾಣಕ್ಕೆ ಪ್ರವಾಸೋದ್ಯಮ ಇಲಾಖೆಯಿಂದ ಆಡಳಿತಾನುಮತಿ ಲಭಿಸಿದೆ. ಈ ಮೂಲಕ ಶೀಘ್ರವೇ ಹೌಸ್‌ ಬೋಟ್‌ ಟರ್ಮಿನಲ್‌ ನಿರ್ಮಾಣಕಾರ್ಯ ಕೈಗತ್ತಿಕೊಳ್ಳಲಿದೆ.

ಯೋಜನೆಗೆ ಮಾನ್ಯತೆ
ತಿರುವನಂತಪುರದ ಪ್ರವಾಸೋದ್ಯಮ ಕಾರ್ಯದರ್ಶಿ ರಾಣಿ ಜಾರ್ಜ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರವಾಸೋದ್ಯಮ ಇಲಾಖೆ ಆರ್ಕಿಟೆಕ್ಟ್ ಟಿ.ವಿ. ಮಧು ಕುಮಾರ್‌ ಸಿದ್ಧಪಡಿಸಿದ 1.35 ಕೋಟಿ ರೂ. ವೆಚ್ಚದ ಈ ಯೋಜನೆಗೆ ಮಾನ್ಯತೆ ನೀಡಲಾಯಿತು.

ಹೌಸ್‌ ಬೋಟ್‌ ಟರ್ಮಿನಲ್‌ಗೆ ರಸ್ತೆ  ನಿರ್ಮಾಣಕ್ಕೆ ಅಗತ್ಯದ ಸ್ಥಳವನ್ನು 27 ಮಂದಿ ಖಾಸಗಿ ವ್ಯಕ್ತಿಗಳು ನೀಡಿದ್ದಾರೆ. ಶಾಸಕ ಎಂ.ರಾಜಗೋಪಾಲ್‌ ಅವರ ನೇತೃತ್ವದಲ್ಲಿ  ನಗರಸಭಾ ಅಧ್ಯಕ್ಷ ಕೆ.ಪಿ. ಜಯರಾಜನ್‌, ಸ್ಥಾಯೀ ಸಮಿತಿ ಅಧ್ಯಕ್ಷ ಮುಹಮ್ಮದ್‌ ರಾಫಿ ಮೊದಲಾದವರು ಭೂಮಾಲಕರೊಂದಿಗೆ ನಡೆಸಿದ ಚರ್ಚೆಯ ಮೂಲಕ ಸ್ಥಳವನ್ನು ಉಚಿತವಾಗಿ ಪಡೆದುಕೊಳ್ಳಲು ಸಾಧ್ಯವಾಯಿತು. ಈ ಸಂಬಂಧ ಜಿಲ್ಲಾಧಿಕಾರಿ ಡಾ| ಡಿ. ಸಜಿತ್‌ಬಾಬು ಸ್ಥಳ ಸ್ವಾಧೀನಕ್ಕೆ ಸಂಬಂಧಪಟ್ಟಂತೆ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ತಿಗೊಳಿಸಿದ್ದಾರೆ. 

ಸ್ವಾಧೀನಪಡಿಸಿಕೊಂಡ ಭೂಪ್ರದೇಶವನ್ನು ಸರಕಾರಕ್ಕೆ ಹಸ್ತಾಂತರಿಸುವ ಮೂಲಕ ಈ ಮಹತ್ವಾಕಾಂಕ್ಷಿ ಯೋಜನೆಗೆ ಪ್ರವಾಸೋದ್ಯಮ ಇಲಾಖೆ ಅಂಗೀಕಾರ ನೀಡಿತು. ಈ ಹಿಂದೆ ಕಾಸರಗೋಡು ಜಿಲ್ಲಾ ಹೌಸ್‌ ಬೋಟ್‌ ಆನರ್ಸ್‌ ಅಸೋಸಿಯೇಶನ್‌ ಕಾಲ್ದಾರಿ ನಿರ್ಮಾಣಕ್ಕೆ ಅಗತ್ಯವಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿತ್ತು.

ಪ್ರವಾಸಿ ಕೇಂದ್ರವಾಗಿ ಜಿಲ್ಲೆ
  ಹೌಸ್‌ ಬೋಟ್‌ ಟರ್ಮಿನಲ್‌ ನಿರ್ಮಾಣದ ಮೂಲಕ ಪ್ರವಾಸಿಗರನ್ನು ಆಕರ್ಷಿಸುವ ಜತೆಗೆ ಆರ್ಥಿಕವಾಗಿ ಬಲಗೊಳ್ಳುವ ಸಾಧ್ಯತೆ ಅಧಿಕವಾಗಿದೆ. ಕಾಸರಗೋಡು ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು ಸಾಕಷ್ಟು ಅವಕಾಶಗಳಿದ್ದು, ಅವುಗಳನ್ನು ಸೂಕ್ತವಾಗಿ ಬಳಸಿಕೊಳ್ಳುವ ಪ್ರಯತ್ನ ನಡೆಯುತ್ತಿದೆ. ಜಿಲ್ಲೆಯನ್ನು ರಾಜ್ಯದ ಪ್ರಮುಖ ಪ್ರವಾಸಿ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲಾಗುವುದು.
– ಪಿ.ಸುನಿಲ್‌ ಕುಮಾರ್‌, ಡಿ.ಟಿ.ಪಿ.ಸಿ. ಮ್ಯಾನೇಜರ್‌

ಅಡ್ಡಿ ನಿವಾರಣೆ
  ಕಲ್ವರ್ಟ್‌, ಕಾಲ್ದಾರಿ, ಗೋಡೆ ಸಹಿತ ರಸ್ತೆ ಸಾಕಾರಗೊಂಡಲ್ಲಿ ಎಂಟು ಕೋಟಿ ರೂಪಾಯಿ ವೆಚ್ಚದಲ್ಲಿ ನಿಗದಿತ ಕೋಟ್ಟಪ್ಪುರಂ ಹೌಸ್‌ ಬೋಟ್‌ ಟರ್ಮಿನಲ್‌ ನಿರ್ಮಾಣಕ್ಕೆ ಎದುರಾಗಿದ್ದ ಎಲ್ಲ ಅಡ್ಡಿ ಆತಂಕ ನಿವಾರಣೆಯಾಗಲಿದೆ.
– ಬಿಜು ರಾಘವನ್‌, ಡಿ.ಟಿ.ಪಿ.ಸಿ. ಕಾರ್ಯದರ್ಶಿ

ಟಾಪ್ ನ್ಯೂಸ್

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

High-Court

High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

MB-Patil-Minister

Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್‌

1-horoscope

Daily Horoscope: ವಧೂವರಾನ್ವೇಷಿಗಳಿಗೆ ಯಶಸ್ಸಿನ ಭರವಸೆ, ಸ್ವರ್ಣೋದ್ಯಮಿಗಳಿಗೆ ಹೇರಳ ಲಾಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POlice

Kasaragod: ರೈಲುಗಾಡಿಗೆ ಕಲ್ಲು ತೂರಾಟ; ಪ್ರಯಾಣಿಕನಿಗೆ ಗಾಯ

10-kodagu

Promotion: ಕೊಡಗಿನ ಮಧು ಮೊಣ್ಣಪ್ಪ ಸುಬೇದಾರ್‌ ಮೇಜರ್‌

Untitled-2

Kasaragod: ಸ್ತನ್ಯಪಾನ ಗಂಟಲಲ್ಲಿ ಸಿಲುಕಿ ಮಗುವಿನ ಸಾವು

12

Madikeri: ಅರೆಸುಟ್ಟ ಮೃತದೇಹದ ಪ್ರಕರಣ; ಪೊಲೀಸರಿಂದ ತಪ್ಪಿಸಿಕೊಂಡಿದ್ದ ಅಂಕೂರ್‌ ರಾಣ ಬಂಧನ

ಕೋರಿಕಂಡ ಅಂಗನವಾಡಿಗೆ ಮಲಯಾಳ ಶಿಕ್ಷಕಿ ನೇಮಕ ವಿರುದ್ಧ ಹೈಕೋರ್ಟ್‌ಗೆ

ಕೋರಿಕಂಡ ಅಂಗನವಾಡಿಗೆ ಮಲಯಾಳ ಶಿಕ್ಷಕಿ ನೇಮಕ ವಿರುದ್ಧ ಹೈಕೋರ್ಟ್‌ಗೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

High-Court

High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.