ಕಾರಾಗೃಹದಲ್ಲಿ ಐಷಾರಾಮಿ ಸೌಲಭ್ಯ: ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ
Team Udayavani, Jan 25, 2019, 12:48 AM IST
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಶಶಿಕಲಾ ನಟರಾಜನ್ಗೆ ಐಷಾರಾಮಿ ಸೌಲಭ್ಯ ಕಲ್ಪಿಸಲು ಎರಡು ಕೋಟಿ ರೂ. ಲಂಚ ಪಡೆದ ಆರೋಪ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ನಿವೃತ್ತ ಡಿಜಿಪಿ ಸತ್ಯನಾರಾಯಣ ರಾವ್ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಸರ್ಕಾರ ಹಾಗೂ ಎಸಿಬಿಗೆ ಹೈಕೋರ್ಟ್ ಎರಡು ವಾರ ಕಾಲಾವಕಾಶ ನೀಡಿದೆ.
ಪ್ರಕರಣದ ಸಂಬಂಧ ಎಸಿಬಿ ದಾಖಲಿಸಿರುವ ಎಫ್ಐಆರ್ ರದ್ದುಕೋರಿ ರಾಜ್ಯ ಬಂಧೀಖಾನೆ ಇಲಾಖೆ ನಿವೃತ್ತ ಡಿಜಿಪಿ ಸತ್ಯನಾರಾಯಣರಾವ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಅಲೋಕ್ ಆರಾಧೆ ನೇತೃತ್ವದ ಏಕಸದಸ್ಯ ನ್ಯಾಯಪೀಠಕ್ಕೆ ‘ಅರ್ಜಿ ಸಂಬಂಧ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡುವಂತೆ ಸರ್ಕಾರಿ ವಕೀಲರು ಹಾಗೂ ಎಸಿಬಿ ಪರ ವಕೀಲರು ಮನವಿ ಮಾಡಿದರು.
ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ಆಕ್ಷೇಪಣೆ ಸಲ್ಲಿಸಲು ಎರಡು ವಾರಗಳ ಕಾಲಾವಕಾಶ ನೀಡಿ ವಿಚಾರಣೆಯನ್ನು ಫೆ.13ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.