ಗಾಜಿನ ಮನೆಯಲ್ಲಿ ಫಲ-ಪುಷ್ಪ ಪ್ರದರ್ಶನ


Team Udayavani, Jan 25, 2019, 5:37 AM IST

dvg-4.jpg

ದಾವಣಗೆರೆ: ಗಣರಾಜ್ಯೋತ್ಸವ ಅಂಗವಾಗಿ ಪ್ರತಿ ವರ್ಷದಂತೆ ಈ ಬಾರಿಯೂ ತೋಟಗಾರಿಕೆ ಇಲಾಖೆಯಿಂದ ನಾಳೆಯಿಂದ ಫೆ. 4ರವರೆಗೆ ಮಹಾ ಫಲ-ಪುಷ್ಪ ಪ್ರದರ್ಶನ ಏರ್ಪಡಿಸಲಾಗಿದ್ದು, 10 ದಿನಗಳ ಕಾಲದ ಈ ಫಲಪುಷ್ಪ ಪ್ರದರ್ಶನ ಹೊಸದಾಗಿ ನಿರ್ಮಿಸಲಾಗಿರುವ ಗಾಜಿನ ಮನೆಯಲ್ಲಿ ಆಯೋಜಿಸಿರುವುದು ಈ ಸಲದ ವಿಶೇಷ.

ಗುರುವಾರ, ಫಲ-ಪುಷ್ಪ ಪ್ರದರ್ಶನ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾ ತೋಟಗಾರಿಕಾ ಇಲಾಖೆ ಉಪ ನಿರ್ದೇಶಕ ಟಿ.ಆರ್‌.ವೇದಮೂರ್ತಿ, ಜನರಲ್ಲಿ ತೋಟಗಾರಿಕೆ ಅಭಿರುಚಿ ಹೆಚ್ಚಿಸಲು, ಅಲಂಕಾರಿಕ ಹಾಗೂ ಹೂ ಗಿಡಗಳ ಬೆಳೆಸಲು ಪ್ರೋತ್ಸಾಹ ಮತ್ತು ಮಕ್ಕಳಲ್ಲಿ ತೋಟಗಾರಿಕೆ ಬಗ್ಗೆ ಜ್ಞಾನ ಮೂಡಿಸುವ ಜತೆಗೆ ಜನರ ದಿನನಿತ್ಯದ ಒತ್ತಡ ನಿವಾರಣೆಗೆ ಈ ಪ್ರರ್ದಶನ ಒಂದಿಷ್ಟು ಸಹಕಾರಿಯಾಗಲಿದೆ ಎಂದರು.

ಆಕರ್ಷಕ ಸಾಂಚಿ ಸ್ತೂಪ: ಫಲ-ಪುಷ್ಪ ಪ್ರದರ್ಶನದಲ್ಲಿ 25 ಅಡಿ ಎತ್ತರ, 20 ಅಡಿ ಅಗಲದ ಸಾಂಚಿ ಸ್ತೂಪದ ಹೂವಿನ ಅಲಂಕಾರಿತ ಕಲಾಕೃತಿ ಪ್ರಮುಖ ಆಕರ್ಷಣೆಯಾಗಲಿದೆ. 5 ಲಕ್ಷ ವಿವಿಧ ಹೂಗಳಿಂದ ಆ ಕಲಾಕೃತಿ ಸಿದ್ಧವಾಗಲಿದೆ. ಈ ಸ್ತೂಪ ತಯಾರಿಸಲು ಕೆಂಪು-ಹಳದಿ ಗುಲಾಬಿ, ಸೇವಂತಿಗೆ, ಕಾರ್ನೇಷನ್‌, ಆರ್ಕಿಡ್ಸ್‌, ಹೆಲಿಯೋನಿಯ, ಹೀಲಿಯಮ್‌ ಮತ್ತು ಅಪರೂಪದ ಹೂವು ಹಾಗೂ ಎಲೆಗಳನ್ನು ಬಳಸಲಾಗುವುದು. ಈ ಸಾಂಚಿ ಸ್ತೂಪವು ಮಧ್ಯಪ್ರದೇಶದ ಭೋಪಾಲ್‌ ನಗರದಿಂದ 46 ಕಿ.ಮೀ ದೂರದಲ್ಲಿದ್ದು, 200 ರೂ. ಮುಖಬೆಲೆಯ ನೋಟ್‌ನಲ್ಲಿ ಈ ಸ್ತೂಪ ಕಾಣಬಹುದು.

ಸಂವಿಧಾನ ಶಿಲ್ಪಿ, ಸಾಮಾಜಿಕ ಸಮಾನತೆಗೆ ಹೋರಾಡಿದ ಭಾರತ ರತ್ನ ಡಾ| ಭೀಮರಾವ್‌ ರಾಮ್‌ಜೀ ಅಂಬೇಡ್ಕರ್‌ ಅವರನ್ನು ಸಿರಿಧಾನ್ಯದಲ್ಲಿ ಅರಳಿಸಲಾಗುವುದು.

ಗಿಟಾರ್‌, ಶಿವಲಿಂಗ, ಹೃದಯ ಆಕಾರದ ವಿವಿಧ ಕಲಾಕೃತಿಗಳನ್ನು ಪ್ರದರ್ಶನದಲ್ಲಿ ಇಡಲಾಗುವುದು. 10 ಬಗೆಯ ವಿವಿಧ ತಳಿಯ 15,000 ಗಿಡಗಳನ್ನು ಪ್ಲಾಸ್ಟಿಕ್‌ ಕುಂಡದಲ್ಲಿ ಬೆಳೆಸಲಾಗಿದ್ದು, ಅವುಗಳನ್ನು ಪ್ರದರ್ಶದಲ್ಲಿ ವೀಕ್ಷಿಸಲು ಅನುವು ಮಾಡಿಕೊಡಲಾಗುವುದು ಎಂದು ತಿಳಿಸಿದರು.

ಗಿಡಗಳಿಗೆ ದೀಪಾಲಂಕಾರ: ಗಾಜಿನ ಮನೆಯ ಒಳ ಆವರಣದಲ್ಲಿರುವ ಎಲ್ಲಾ ಗಿಡ-ಮರಗಳಿಗೂ ಬಗೆ ಬಗೆಯಾದ ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗುವುದು. ಈ ಬಾರಿ ವಿಶೇಷವಾಗಿ ಮಕ್ಕಳಿಗೆ ಅಮ್ಯೂಸ್‌ಮೆಂಟ್ ಪಾರ್ಕ್‌ ನಿರ್ಮಿಸಲಾಗಿದೆ.

ಪ್ರದರ್ಶನದಲ್ಲಿ ವಿವಿಧ ಇಲಾಖೆಗಳಿಗೆ 15 ಹಾಗೂ ತಿಂಡಿ ತಿನಿಸುಗಳ ಮಾರಾಟಕ್ಕೆ 30 ಮಳಿಗೆ ತೆರೆಯಲು ಅವಕಾಶ ನೀಡಲಾಗುವುದು. ನಡೆದಾಡುವ ದೇವರೆಂದೇ ಪ್ರಸಿದ್ಧಿಯಾಗಿದ್ದ ಸಿದ್ಧಗಂಗಾ ಶ್ರೀಗಳು, ಪುಟ್ಟರಾಜ ಗವಾಯಿಗಳು, ಕುವೆಂಪು, ತೋಟಗಾರಿಕೆ ಪಿತಾಮಹ ಡಾ| ಎಂ.ಎಚ್. ಮರೀಗೌಡ ಇವರ ಭಾವಚಿತ್ರಗಳನ್ನು ರಂಗೋಲಿಯಲ್ಲಿ ಬಿಡಿಸಲಾಗುವುದು ಎಂದು ಮಾಹಿತಿ ನೀಡಿದರು.

ಫಲ-ಪುಷ್ಪ ಪ್ರದರ್ಶನ ನಡೆಯುವ 10 ದಿನಗಳಲ್ಲೂ ಪ್ರತಿ ಎರಡು ಗಂಟೆಗಳಿಗೊಮ್ಮೆ ನಗರ ಸಾರಿಗೆ ಬಸ್‌ ಸೌಲಭ್ಯ ಕಲ್ಪಿಸಲು ಮನವಿ ಮಾಡಲಾಗುವುದು. ಮಹಾನಗರ ಪಾಲಿಕೆಯವರು ಗಾಜಿನ ಮನೆ ಮಾರ್ಗದ ರಸ್ತೆಗಳಲ್ಲಿ ದೀಪಗಳ ವ್ಯವಸ್ಥೆ ಮಾಡಲಿದ್ದಾರೆ. ರಸ್ತೆಗಳ ದುರಸ್ತಿಯೂ ನಡೆಯಲಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಪೊಲೀಸರನ್ನು ನಿಯೋಜಿಸುವಂತೆ ಎಸ್ಪಿಯವರನ್ನು ಕೋರಲಾಗಿದೆ ಎಂದು ಅವರು ತಿಳಿಸಿದರು.

ದೇಶದಲ್ಲೇ ನಂ.1 : ಪ್ರಸ್ತುತ ನಮ್ಮ ದೇಶದಲ್ಲಿಯೇ ಮೊದಲನೇ ಮತ್ತು ಏಷ್ಯಾದಲ್ಲಿಯೇ 2ನೇ ಅತಿ ದೊಡ್ಡದು ಎಂಬ ಹೆಗ್ಗಳಿಕೆ ದಾವಣಗೆರೆಯಲ್ಲಿ ನಿರ್ಮಿಸಲಾಗಿರುವ ನಮ್ಮ ಗಾಜಿನ ಮನೆಯದ್ದಾಗಿದೆ. ನಮ್ಮ ರಾಜ್ಯದಲ್ಲಿ ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ, ತುಮಕೂರು ಹಾಗೂ ಮೈಸೂರಲ್ಲಿ ಗಾಜಿನ ಮನೆ ಇವೆ. ದಾವಣಗೆರೆ ಗಾಜಿನ ಮನೆ 73 ಸಾವಿರ ಚದುರ ಅಡಿಯಲ್ಲಿದೆ. ದಾವಣಗೆರೆ ಗಾಜಿನ ಮನೆ ಆಕರ್ಷಕ ವಿನ್ಯಾಸಕ್ಕೆ ಝಾಕ್‌ ಗ್ರೂಪ್‌ ಪ್ರಶಸ್ತಿ ನೀಡಿ, ಗೌರವಿಸಲಾಗಿದೆ. ಆಧುನಿಕ ತಂತ್ರಜ್ಞಾನ ಮತ್ತು ವಿನ್ಯಾಸಕ್ಕೆ ದೊರೆತಿರುವ ಈ ಪ್ರಶಸ್ತಿಯಿಂದ ಈ ಗಾಜಿನ ಮನೆಗೆ ಅಂತಾರಾಷ್ಟೀಯ ಮನ್ನಣೆ ಸಿಕ್ಕಂತಾಗಿದೆ ಎಂದು ಅವರು ಹೇಳಿದರು.

5 ಕೋಟಿ ರೂ. ಅಂದಾಜಲ್ಲಿ ಆರಂಭಿಸಿದ ಗಾಜಿನ ಮನೆ ನಿರ್ಮಾಣ, ಉಪ ನಿರ್ದೇಶಕರ ಕಚೇರಿ, ಮತ್ತಿತರ ಕಾರ್ಯಕ್ಕಾಗಿ ಈ ವರೆಗೆ 25 ಕೋಟಿ ವೆಚ್ಚವಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಅಭಿವೃದ್ಧಿ ಸಲುವಾಗಿ ಮತ್ತೆ 5 ಕೋಟಿ ರೂ. ಅನುದಾನದ ಪ್ರಸ್ತಾವನೆ ಸಲ್ಲಿಸಲಾಗಿದೆ. ಬಣ್ಣ ಬಣ್ಣದ ಲೈಟಿಂಗ್‌, ಶೌಚಾಲಯ, ಕ್ಯಾಂಟೀನ್‌, ಸಂಗೀತ ಕಾರಂಜಿ, ಸೇರಿದಂತೆ ಸಾರ್ವಜನಿಕರ ಆಕರ್ಷಿಸುವ ಜತೆಗೆ ಸೌಲಭ್ಯ ಕಲ್ಪಿಸಲು ಕ್ರಮ ವಹಿಸಲಾಗುವುದು ಎಂದು ಅವರು ಹೇಳಿದರು.

ಗಾಜಿನ ಮನೆ ವೀಕ್ಷಣೆಗೆ ಸಾರ್ವಜನಿಕರಿಗೆ ಪ್ರತಿನಿತ್ಯ ಸಂಜೆ 6 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಸಮಯ ನಿಗದಿಪಡಿಸಲಾಗಿದೆ. 5-10 ವರ್ಷದೊಳಗಿನ ಮಕ್ಕಳಿಗೆ 10 ರೂ., 10 ವರ್ಷ ಮೇಲ್ಪಟ್ಟ ಎಲ್ಲರಿಗೂ 20 ರೂ.ಲ ಪ್ರವೇಶ ಶುಲ್ಕ ವಿಧಿಸಲಾಗಿದೆ ಎಂದು ಹೇಳಿದರು.

ವಿವಿಧ ಸ್ಪರ್ಧೆ: ಫಲ-ಪುಷ್ಪ ಪ್ರದರ್ಶನದ ಜತೆಗೆ ಈ ಬಾರಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಮಹಿಳೆಯರಿಗೆ ರಂಗೋಲಿ, ಉದ್ಯಾನ ವನ ನಿರ್ವಹಣೆ ಕುರಿತು ಸ್ಪರ್ಧೆ ಜತೆಗೆ ವಿವಿಧ ಇಲಾಖೆ ಹಾಗೂ ಸಂಘ ಸಂಸ್ಥೆಗಳಿಗೂ ಅವಕಾಶ ಕಲ್ಪಿಸಲಾಗಿದೆ. ಉತ್ತಮ ಪ್ರದರ್ಶನಕ್ಕೆ ಈ ಬಾರಿ ತಾಲೂಕು ಮಟ್ಟದಲ್ಲೂ ಬಹುಮಾನ ನೀಡಲಾಗುವುದು. ತೋಟಗಾರಿಕಾ ಬೆಳೆಗಾರರು ಬೆಳೆದ ವಿವಿಧ ಹಣ್ಣು, ತರಕಾರಿ ಸೇರಿದಂತೆ ವಿವಿಧ ಉತ್ಪನ್ನಗಳನ್ನು ಪ್ರದರ್ಶಿಸಬಹುದು.

ಶನಿವಾರ ಬೆಳಿಗ್ಗೆ 11 ಗಂಟೆಗೆ ಫಲ-ಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಲಾಗುವುದು. ಜ. 26ರಿಂದ ಫೆ. 4ರವರೆಗೆ ಪ್ರತಿದಿನ ಸಂಜೆ 6ರಿಂದ 9 ಗಂಟೆತನಕ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿವೆ. ಮುಂದೆ ವಾರಾಂತ್ಯದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುವ ಚಿಂತನೆ ಇದೆ. ಒಟ್ಟಾರೆ ಈ ಗಾಜಿನ ಮನೆಯನ್ನು ಅತ್ಯುತ್ತಮ ಪ್ರವಾಸಿ ತಾಣವನ್ನಾಗಿಸಲಾಗುವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

Team India; A spinner from the Karnataka coast who joined Team India as a replacement for Ashwin

Team India; ಅಶ್ವಿನ್‌ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.