ನಗರದೊಳಗೊಂದು ಕತ್ತಲ ಹಾದಿ: ಇಲ್ಲಿ ಟಾರ್ಚ್ ಹಾಕಿಕೊಂಡೇ ಹೋಗಬೇಕು!
Team Udayavani, Jan 25, 2019, 5:41 AM IST
ಮಹಾನಗರ: ಕತ್ತಲಾದೊಡನೆ ಈ ರಸ್ತೆಯಲ್ಲಿ ಬಂದರೆ ನಿಮಗೆ ಗ್ರಾಮೀಣ ಭಾಗದಲ್ಲಿ ಸಂಚರಿಸಿದ ಅನುಭವವಾಗದೇ ಇರದು. ಹೌದು.. ಸುತ್ತಲೂ ಕಗ್ಗತ್ತಲು, ಪಾದಚಾರಿಗಳ ಕೈಯಲ್ಲಿ ಟಾರ್ಚ್…
ಇದು ಬೇರೆ ಊರಿನ ಕಥೆಯಲ್ಲ . ಅಭಿ ವೃದ್ಧಿ ಹೊಂದುತ್ತಿರುವ ನಗರಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಮಂಗಳೂರಿನ ಹೃದಯ ಭಾಗದಲ್ಲಿರುವ ಕೋರ್ಟ್ ರಸ್ತೆಯ ಅವಸ್ಥೆ. ರಸ್ತೆ ಕಾಮಗಾರಿ ಭಾಗಶಃ ಮುಗಿದು ತಿಂಗಳುಗಳು ಕಳೆದರೂ ಈ ರಸ್ತೆಗೆ ದಾರಿದೀಪದ ವ್ಯವಸ್ಥೆ ಕಲ್ಪಿಸಲಾಗಿಲ್ಲ. ಆ ಕಾರಣಕ್ಕೆ ಈ ಭಾಗದಲ್ಲಿ ನಡೆಯುವ ಪಾದಚಾರಿಗಳು ಕೈಯಲ್ಲಿ ಮೊಬೈಲ್ ಟಾರ್ಚ್ ಹಿಡಿದು ಸಂಚರಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ.
ಕರಂಗಲ್ಪಾಡಿಯಿಂದ ಕೆ.ಎಸ್. ರಾವ್ ರಸ್ತೆಗೆ ಸಂಪರ್ಕ ಕಲ್ಪಿಸುವ 280 ಮೀ. ಉದ್ದದ ಕೋರ್ಟ್ ರಸ್ತೆ ಕಾಂಕ್ರೀಟ್ ಕಾಮಗಾರಿಗೆ 2015ರ ಜೂನ್ 6ರಂದು ಶಿಲಾನ್ಯಾಸ ನಡೆದಿತ್ತು. ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಮತ್ತು ಆಗಿನ ಲೋಕೋಪಯೋಗಿ ಸಚಿವ ಮಹಾದೇವಪ್ಪ ಶಿಲಾನ್ಯಾಸ ನೆರವೇರಿಸಿದ್ದರು. ಲೋಕೋಪಯೋಗಿ ಇಲಾಖೆಯಿಂದ 11 ಕೋಟಿ ರೂ. ವೆಚ್ಚದಲ್ಲಿ ಆರಂಭಿಸಲಾದ ರಸ್ತೆ ಕಾಮಗಾರಿ 18 ತಿಂಗಳಲ್ಲಿ ಪೂರ್ಣಗೊಳಿಸುವ ಭರವಸೆ ನೀಡಲಾಗಿತ್ತು. ಆದರೆ ವಿವಿಧ ತಾಂತ್ರಿಕ ಸಮಸ್ಯೆಗಳ ಪರಿಣಾಮ ಮೂರು ವರ್ಷಗಳ ವರೆಗೆ ರಸ್ತೆ ಕಾಮಗಾರಿ ಪೂರ್ಣಗೊಂಡಿರಲಿಲ್ಲ. ಇದೀಗ ರಸ್ತೆ ಕಾಮಗಾರಿ ಭಾಗಶಃ ಪೂರ್ಣಗೊಂಡರೂ ಪಾದಚಾರಿಗಳು ಈ ರಸ್ತೆಯಲ್ಲಿ ಸಂಚರಿಸಲು ಹಿಂದೇಟು ಹಾಕುವಂತಾಗಿದೆ.
ವಾಹನ ಸವಾರರಿಗೆ ಭಯ
ಕರಂಗಲ್ಪಾಡಿಯಿಂದ ಕೆ.ಎಸ್. ರಾವ್ ರಸ್ತೆಗೆ ತೆರಳಲು ಕೋರ್ಟ್ ರಸ್ತೆ ಸಮೀಪದ ಮಾರ್ಗ. ಆ ಹಿನ್ನೆಲೆಯಲ್ಲಿ ಬಹುತೇಕ ವಾಹನಗಳು ಆ ಮಾರ್ಗದಲ್ಲೇ ಸಂಚರಿಸುತ್ತವೆ. ಅಲ್ಲದೆ ಪಿವಿಎಸ್ ರಸ್ತೆಯಲ್ಲಿ ವಾಹನ ದಟ್ಟಣೆಯು ಹೆಚ್ಚುವುದರಿಂದ ಈ ರಸ್ತೆ ಮೂಲಕವೇ ವಾಹನ ಸವಾರರು, ಪಾದಚಾರಿಗಳು ಸಂಚರಿಸುತ್ತಾರೆ. ಹಗಲು ಹೊತ್ತಿನಲ್ಲಿ ವಾಹನ ಸಂಚಾರ ಹಾಗೂ ಜನನಿಬೀಡವಾಗಿರುವ ಪ್ರದೇಶ ರಾತ್ರಿಯಾಗುತ್ತಿದ್ದಂತೆ ಖಾಲಿ ಇರುತ್ತದೆ. ರಸ್ತೆಯ ಎರಡು ಭಾಗಗಳಲ್ಲೂ ಮರಗಿಡಗಳು ದಟ್ಟವಾಗಿ ಬೆಳೆದಿರುವುದರಿಂದ ಸಂಜೆಯಾಗುತ್ತಿದ್ದಂತೆ ರಸ್ತೆ ಸುತ್ತಮುತ್ತ ಕಗ್ಗತ್ತಲು ಆವರಿಸಿಕೊಳ್ಳುತ್ತದೆ. ಪಾದಚಾರಿಗಳು ಮಾತ್ರವಲ್ಲದೆ ವಾಹನ ಸವಾರರು ಈ ಮಾರ್ಗವಾಗಿ ಸಂಚರಿಸಲು ಹಿಂದೇಟು ಹಾಕುವಂತಾಗಿದೆ.
ರಸ್ತೆ ಕಾಮಗಾರಿ ಪೂರ್ಣಗೊಳ್ಳಲು ಮೂರು ವರ್ಷಗಳೇ ಬೇಕಾಯಿತು. ಇನ್ನೂ ಬೀದಿ ದೀಪಗಳನ್ನು ಅಳವಡಿಸುವ ಕಾರ್ಯ ಪೂರ್ಣಗೊಳ್ಳಲು ಇನ್ನೆಷ್ಟು ಸಮಯಬೇಕಾದಿತು ಎಂಬ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.
ಗುತ್ತಿಗೆದಾರರ ಜವಾಬ್ದಾರಿ
ಕರಂಗಲ್ಪಾಡಿಯಿಂದ ಕೆ.ಎಸ್. ರಾವ್ ರಸ್ತೆಗೆ ಸಂಪರ್ಕ ಕಲ್ಪಿಸುವ 280 ಮೀ. ಉದ್ದದ ಕೋರ್ಟ್ ರಸ್ತೆ ಕಾಂಕ್ರೀಟ್ ಕಾಮಗಾರಿಯನ್ನು 11 ಕೋಟಿ ರೂ. ವೆಚ್ಚದಲ್ಲಿ ಮಾಡಲಾಗುತ್ತಿದೆ. ನೀಡಿದ ಗುತ್ತಿಗೆ ಆಧಾರದ ಮೇಲೆ ಕಾಂಕ್ರೀಟ್ ರಸ್ತೆ, ಚರಂಡಿ, ಫುಟ್ಪಾತ್, ಬೀದಿ ದೀಪಗಳ ವ್ಯವಸ್ಥೆ ನೀಡುವುದು ಗುತ್ತಿಗೆದಾರನ ಜವಾಬ್ದಾರಿ. ಸಣ್ಣಪುಟ್ಟ ಕೆಲಸ ಇನ್ನೂ ಬಾಕಿ ಇರುವುದರಿಂದ ಬೀದಿದೀಪ ಅಳವಡಿಸಿಲ್ಲ.
– ಎ.ಸಿ. ವಿನಯರಾಜ್,
ಸ್ಥಳೀಯ ಕಾರ್ಪೊರೇಟರ್
ಶೀಘ್ರ ಬೀದಿ ದೀಪ ಅಳವಡಿಕೆ
ರಸ್ತೆಯ ಬಹುತೇಕ ಕಾಮಗಾರಿ ಮುಗಿದಿದೆ. ರಸ್ತೆಯ ಬದಿಗಳಲ್ಲಿ ಸುರಕ್ಷತಾ ಕೆಲಸ ಬಾಕಿ ಇದೆ.ಅದನ್ನು ಪೂರ್ಣ ಗೊಳಿಸಿದ ಬಳಿಕ ಬೀದಿ ದೀಪ ಅಳವಡಿಸುವ ಕೆಲಸ ಅಗಲಿದೆ.
– ಕಾಂತರಾಜು,
ಅಧೀಕ್ಷಕ ಅಭಿಯಂತರ, ಲೋಕೋಪಯೋಗಿ ಇಲಾಖೆ
ವಿಶೇಷ ವರದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
ಪ್ರಯಾಣಿಕರಿಗೆ ಟಿಕೆಟ್ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.