ಮುಂಬಯಿ ಶೇರು 250ಕ್ಕೂ ಹೆಚ್ಚು ಅಂಕಗಳ ಜಿಗಿತ, ನಿಫ್ಟಿ ಮತ್ತೆ 10,900
Team Udayavani, Jan 25, 2019, 5:55 AM IST
ಮುಂಬಯಿ : ಮುಂಚೂಣಿ ಕಂಪೆನಿಗಳ ಡಿಸೆಂಬರ್ ತ್ತೈಮಾಸಿಕ ಫಲಿತಾಂಶ ಉತ್ತೇಜನಕಾರಿಯಾಗಿರುವ ಹಿನ್ನೆಲೆಯಲ್ಲಿ ದೇಶೀಯ ಹೂಡಿಕೆದಾರ ಸಂಸ್ಥೆಗಳು ಮತ್ತು ಚಿಲ್ಲರೆ ಹೂಡಿಕೆದಾರರು ಬ್ಲೂ ಚಿಪ್ ಶೇರುಗಳ ವ್ಯಾಪಕ ಖರೀದಿಯಲ್ಲಿ ತೊಡಗಿಕೊಂಡ ಕಾರಣ ಇಂದು ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 250ಕ್ಕೂ ಅಧಿಕ ಅಂಕಗಳ ಜಿಗಿತವನ್ನು ದಾಖಲಿಸಿತು. ಅಂತೆಯೇ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 10,900 ಅಂಕಗಳ ಮಟ್ಟವನ್ನು ಪುನರ್ ಸಂಪಾದಿಸಿತು.
ನಿನ್ನೆ ಗುರುವಾರದ ವಹಿವಾಟಿನಲ್ಲಿ ಸೆನ್ಸೆಕ್ಸ್ 87 ಅಂಕಗಳನ್ನು ಸಂಪಾದಿಸಿತ್ತು. ಇಂದು ಬೆಳಗ್ಗೆ 11.30ರ ಸುಮಾರಿಗೆ ಸೆನ್ಸೆಕ್ಸ್ 220.54 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 36,415.64 ಅಂಕಗಳ ಮಟ್ಟದಲ್ಲೂ, ನಿಫ್ಟಿ 55.60 ಅಂಕಗಳ ಮುನ್ನಡೆಯೊಂದಿಗೆ 10,905.40 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಎಸ್ ಬ್ಯಾಂಕ್, ರಿಲಯನ್ಸ್, ಐಸಿಐಸಿಐ ಬ್ಯಾಂಕ್, ಎಚ್ ಡಿ ಎಫ್ ಸಿ ಬ್ಯಾಂಕ್, ಎಚ್ ಡಿ ಎಫ್ ಸಿ ಶೇರುಗಳು ಇಂದು ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ ಅತ್ಯಂತ ಕ್ರಿಯಾಶೀಲವಾಗಿದ್ದವು.
ಡಾಲರ್ ಎದುರಿನ ಇಂದಿನ ಆರಂಭಿಕ ವಹಿವಾಟಿನಲ್ಲಿ ರೂಪಾಯಿ 10 ಪೈಸೆಗಳ ಏರಿಕೆಯನ್ನು ದಾಖಲಿಸಿ 70.97 ರೂ ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ
Amparu: ಬೈಕ್ ಸ್ಕಿಡ್; ಸವಾರ ಚಿಕಿತ್ಸೆಗೆ ಸ್ಪಂದಿಸದೆ ಸಾವು
KAUP: ಧರ್ಮಗ್ರಂಥಗಳಷ್ಟೇ ಸಂವಿಧಾನವೂ ಪವಿತ್ರ: ನಿಕೇತ್ ರಾಜ್ ಮೌರ್ಯ
Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.