ಮೊ| ಪತ್ರಾವೊ ಕಾರ್ಯ ಶ್ರೇಷ್ಠ: ಸಂಸದ ನಳಿನ್‌


Team Udayavani, Jan 25, 2019, 5:56 AM IST

25-january-5.jpg

ಪುತ್ತೂರು: ಸಮಾಜದ ಬೆಳಕಿನ ಬಿಂದುವಾಗಿ ಶ್ರೇಷ್ಠ ಕಾರ್ಯ ಮಾಡಿ ದವರು ಮೊ| ಪತ್ರಾವೊ. ಈಗ ಶಿಕ್ಷಣ ಕಾಶಿಯಾಗಿ ಬೆಳೆದಿರುವ ದ.ಕ. ಜಿಲ್ಲೆಯಲ್ಲಿ ಮಡಿಕೇರಿಯಿಂದ ಮಂಗಳೂರು ತನಕದ ಸಾವಿರಾರು ಮಂದಿಗೆ ಕಾಲೇಜು ಶಿಕ್ಷಣದ ಅವಕಾಶ ಒದಗಿಸಿದ ಮೊ| ಪತ್ರಾವೊ ಅವರು ಶೈಕ್ಷಣಿಕ ಹರಿಕಾರ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದರು.

ಸಂತ ಫಿಲೋಮಿನಾ ಕಾಲೇಜಿನಲ್ಲಿ ಗುರುವಾರ ನಡೆದ ವಜ್ರಮಹೋತ್ಸವ ಆಚರಣೆಯ ಸಮಾರೋಪ ಸಮಾರಂಭದಲ್ಲಿ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ವಿಶ್ವವಿದ್ಯಾಲಯವಾಗಲಿ
ಸಂತ ಫಿಲೋಮಿನಾ ಕಾಲೇಜು ಡೊನೇಶನ್‌ ಮತ್ತು ಟ್ಯೂಶನ್‌ಗಳ ಮಧ್ಯೆ ಸಿಲುಕಿಕೊಳ್ಳದೆ ಮೌಲ್ಯಾಧಾರಿತ ಶಿಕ್ಷಣದೊಂದಿಗೆ ಗ್ರಾಮೀಣ ಭಾಗ ದವರೂ ಸುಶಿಕ್ಷಿತರಾಗುವಂತೆ ಮಾಡಿರುವುದು ಹೆಮ್ಮೆಯ ಸಂಗತಿ. ಹತ್ತಾರು ಕ್ರೀಡಾಳುಗಳು, ವೈದ್ಯರು, ಕಲಾವಿದರು, ರಾಜಕೀಯ ವ್ಯಕ್ತಿ ಗಳನ್ನು ನಾಡಿಗೆ ಪರಿಚಯಿಸಿ, ಮೌಲ್ಯ ಯುತವಾಗಿ ಮುನ್ನುಗುತ್ತಿದೆ. 60 ಸಂವತ್ಸರಗಳನ್ನು ಪೂರೈಸಿರುವ ಈ ಸಂಸ್ಥೆ ವಿಶ್ವವಿದ್ಯಾನಿಲಯವಾಗಿ ಪರಿ ವರ್ತನೆ ಗೊಂಡು ಶತಮಾನಗಳಾಚೆಗೂ ಪಸರಿಸಲಿ ಎಂದರು.

ಶ್ರೇಷ್ಠ ಮನ್ನಣೆ
ರಾಜ್ಯದ ಉನ್ನತ ಶಿಕ್ಷಣ ಸಚಿವರ ಪ್ರತಿನಿಧಿಯಾಗಿ ಭಾಗವಹಿಸಿದ್ದ ಉದ್ಯಮಿ ಎಂ.ಬಿ. ಸದಾಶಿವ ಮಾತನಾಡಿ, ಶಿಸ್ತು, ಬದ್ಧತೆ, ಪ್ರಾಮಾಣಿಕತೆ ಮೊದಲಾದ ಆದರ್ಶ, ಮೌಲ್ಯಗಳನ್ನು ಶಿಕ್ಷಣದೊಂದಿಗೆ ಅಳವಡಿಸಿಕೊಂಡಾಗ ಸಂಸ್ಥೆಯು ಶ್ರೇಷ್ಠ ಮನ್ನಣೆಯನ್ನು ಗಳಿಸಲು ಸಾಧ್ಯ ಎಂದರು.

ಕೆಥೋಲಿಕ್‌ ಶಿಕ್ಷಣ ಮಂಡಳಿಯ ಕಾರ್ಯದರ್ಶಿ ವಂ| ಆ್ಯಂಟನಿ ಸೆರಾ ಮಾತನಾಡಿ, ಶೈಕ್ಷಣಿಕ ರಂಗದಲ್ಲಿ ರ್‍ಯಾಂಕ್‌ ಗಳಿಸಿದ ವಿದ್ಯಾರ್ಥಿಗಳು, ಇತರ ಚಟು ವಟಿಕೆಗಳಲ್ಲಿ ಹೆಸರು ಗಳಿಸಿದವರು, ಜತೆಗೆ ಎಲ್ಲ ವಿದ್ಯಾರ್ಥಿಗಳು ಯಶಸ್ಸಿನ ಉತ್ತುಂಗಕ್ಕೇರಲಿ ಎಂದು ಹಾರೈಸಿದರು.

ಸಮ್ಮಾನ
2018ರಲ್ಲಿ ಧರ್ಮಾಧ್ಯಕ್ಷರಾಗಿ ನೇಮಕಗೊಂಡು ಮೊದಲ ಬಾರಿಗೆ ಕಾಲೇಜಿಗೆ ಆಗಮಿಸಿದ ಡಾ| ಪೀಟರ್‌ ಪೌಲ್‌ ಸಲ್ಡಾನ್ಹಾ, ವಿಜಿಎಸ್‌ಟಿ ಪ್ರಶಸ್ತಿ ವಿಜೇತ ಕಾಲೇಜಿನ ಕ್ಯಾಂಪಸ್‌ ನಿರ್ದೇಶಕ ವಂ| ಡಾ| ಆ್ಯಂಟನಿ ಪ್ರಕಾಶ್‌ ಮೊಂತೆರೊ, ಮಂಗಳೂರು ವಿವಿ ಸಿಂಡಿಕೇಟ್‌ಗೆ ನಾಮನಿರ್ದೇಶನಗೊಂಡ ಕಾಲೇಜಿನ ಪ್ರಾಂಶುಪಾಲ ಪ್ರೊ| ಲಿಯೋ ನೊರೊನ್ಹಾ, ಪಿಎಚ್‌ಡಿ ಪದವಿ ಗಳಿಸಿದ ಭೌತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ| ಕೆ. ಚಂದ್ರಶೇಖರ ಮತ್ತು ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ| ಮಾಲಿನಿ ಕೆ. ಅವರನ್ನು ಸಮ್ಮಾನಿಸಲಾಯಿತು.

ಪದವಿಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕಿ ಎಲ್ವಿರಾ ಫಿಲೋ ಮಿನಾ, ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಉದ್ಯಮಿ ಮೈಕಲ್‌ ಡಿ’ಸೋಜಾ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜೈರಾಜ್‌ ಭಂಡಾರಿ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಆ್ಯಂಟನಿ ಒಲಿವೆರ, ಪ.ಪೂ. ಕಾಲೇಜಿನ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ದುರ್ಗಾಪ್ರಸಾದ್‌ ರೈ, ಮಾೖದೆ ದೇವುಸ್‌ ಚರ್ಚ್‌ ಪಾಲನ ಮಂಡಳಿಯ ಉಪಾಧ್ಯಕ್ಷ ಜೆ.ಪಿ. ರೋಡ್ರಿಗಸ್‌ ಉಪಸ್ಥಿತರಿದ್ದರು.

ಕಾಲೇಜಿನ ಸಂಚಾಲಕ ವಂ| ಅಲ್ಫ್ರೆಡ್‌ ಜೆ. ಪಿಂಟೊ ಸ್ವಾಗತಿಸಿ, ಪ್ರಾಂಶುಪಾಲ ಪ್ರೊ| ಲಿಯೋ ನೊರೊನ್ಹಾ ಕಾಲೇಜಿನ ಆರು ದಶಕಗಳ ಸಾಧನೆಗಳ ವರದಿ ಮಂಡಿಸಿದರು. ಪ.ಪೂ. ಕಾಲೇಜಿನ ಪ್ರಾಂಶುಪಾಲ ವಂ| ವಿಜಯ್‌ ಲೋಬೊ ವಂದಿಸಿದರು. ಆಂಗ್ಲ ಭಾಷಾ ವಿಭಾಗದ ಮುಖ್ಯಸ್ಥೆ ಭಾರತಿ ಎಸ್‌. ರೈ ಕಾರ್ಯಕ್ರಮ ನಿರ್ವಹಿಸಿದರು.

ಶಿಕ್ಷಣ ನಿರಂತರ ಪ್ರಕ್ರಿಯೆ
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಂಗಳೂರು ಧರ್ಮಪ್ರಾಂತದ ಧರ್ಮಾಧ್ಯಕ್ಷ ವಂ| ಡಾ| ಪೀಟರ್‌ ಪೌಲ್‌ ಸಲ್ಡಾನ್ಹಾ ಮಾತನಾಡಿ, ನಾವು ವಸ್ತುಸ್ಥಿತಿಯನ್ನು ಅವಲೋಕಿಸುವಾಗ ಸಾಧಕ-ಬಾಧಕಗಳೆರಡನ್ನೂ ಸಮಾನವಾಗಿ ಪರಿಗಣಿಸಬೇಕು. ಆಗ ಮಾತ್ರ ಬೆಳವಣಿಗೆ ಸಾಧ್ಯ. ಶಿಕ್ಷಣವು ನಿರಂತರ ಪ್ರಕ್ರಿಯೆ. ಅದು ಕಾಲೇಜಿನ ಚೌಕಟ್ಟನ್ನು ಮೀರಿದ ಬೆಳವಣಿಗೆಯಾಗಬೇಕು ಎಂದರು.

ಟಾಪ್ ನ್ಯೂಸ್

BGT Series: Indians Should not forget the battle of Pujara at the Gabba

BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

ಹೋಟೆಲ್ ಕೊಠಡಿಯಲ್ಲೇ ಹಿರಿಯ ವೈದ್ಯ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Rakesh Adiga in Maryade Prashne movie

Rakesh Adiga: ನಾನು ಮಿಡಲ್‌ ಕ್ಲಾಸ್‌ ಹುಡುಗ ಮರ್ಯಾದೆ ಉಳಿಸಿ!

JPC misused for drama in by-election: HK Patil

Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Yathanaa

Waqf Property: ಸಚಿವ ಜಮೀರ್‌ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್‌

ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ

ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ

BGT Series: Indians Should not forget the battle of Pujara at the Gabba

BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ

ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.