ವಿಜಯ ಬ್ಯಾಂಕ್ ನಿವ್ವಳ ಲಾಭ 143 ಕೋಟಿ
Team Udayavani, Jan 25, 2019, 6:07 AM IST
ಬೆಂಗಳೂರು: ಸಾರ್ವಜನಿಕ ವಲಯದ ವಿಜಯ ಬ್ಯಾಂಕ್ 2018-19ನೇ ಸಾಲಿನ ವಿತ್ತ ವರ್ಷದ 3ನೇ ತ್ತೈಮಾಸಿಕದಲ್ಲಿ 143 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ.
ಬುಧವಾರ ಬ್ಯಾಂಕಿನ ಕೇಂದ್ರ ಕಚೇರಿಯಲ್ಲಿ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಆರ್.ಎ. ಶಂಕರನಾರಾಯಣನ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ವರ್ಷ ಇದೇ ಅವಧಿಯಲ್ಲಿ ಬ್ಯಾಂಕು ಗಳಿಸಿದ್ದ 79.56 ಕೋಟಿ ಲಾಭಕ್ಕೆ ಹೋಲಿಸಿದರೆ ಈ ಬಾರಿ ಶೇ.80 ರಷ್ಟು ಹೆಚ್ಚಳ ಕಂಡುಬಂದಿದೆ ಎಂದರು.
ಪ್ರಸ್ತುತ ಬ್ಯಾಂಕಿನ ಒಟ್ಟು ವರಮಾನ 3,451 ಕೋಟಿ ರೂ.ನಿಂದ 4,106 ಕೋಟಿ ರೂ.ಗೆ ಏರಿಕೆಯಾಗಿದ್ದು, ಅಲ್ಪ ಪ್ರಮಾಣದಲ್ಲಿ ಸರಾಸರಿ ಎನ್‌ಪಿಎ ಇಳಿಕೆಯಾಗಿದೆ. ಒಟ್ಟಾರೆ ನಿವ್ವಳ ಎನ್‌ಪಿಎ ಶೇ.3.99 ರಿಂದ ಶೇ.4ಕ್ಕೆ ಹೆಚ್ಚಳವಾಗಿದೆ. ಕಾರ್ಯನಿರ್ವಾಹಕ ನಿರ್ದೇಶಕರಾದ ವೈ. ನಾಗೇಶ್ವರ ರಾವ್ ಹಾಗೂ ಮುರಳಿ ರಾಮಸ್ವಾಮಿ ಅವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.