ಭೂಮಿ ಕಬಳಿಸಿದವನಿಗೆ ಒಂದು ವರ್ಷ ಜೈಲು
Team Udayavani, Jan 25, 2019, 6:07 AM IST
ಬೆಂಗಳೂರು: ಆನೇಕಲ್ ತಾಲೂಕಿನ ಯರಂಡಹಳ್ಳಿ ಗ್ರಾಮದಲ್ಲಿ ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡು ಶಾಪಿಂಗ್ ಕಾಂಪ್ಲೆಕ್ಸ್ ನಿರ್ಮಾಣ ಮಾಡಿದ್ದ ಬಿ.ಕೃಷ್ಣಾ ರೆಡ್ಡಿ ಎಂಬಾತನಿಗೆ ಒಂದು ವರ್ಷ ಜೈಲು ಹಾಗೂ ಐದು ಸಾವಿರ ರೂ. ದಂಡ ವಿಧಿಸಿ ಭೂ ಕಬಳಿಕೆ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.
ಆರೋಪಿ ಕೃಷ್ಣಾ ರೆಡ್ಡಿ, ಯರಂಡಹಳ್ಳಿಯ ಸರ್ವೇ ನಂಬರ್ 86ರಲ್ಲಿನ 14*80 ವಿಸ್ತೀರ್ಣದ ಸರ್ಕಾರಿ ಭೂಮಿ ಒತ್ತುವರಿಮಾಡಿಕೊಂಡು ಶಾಪಿಂಗ್ ಕಾಂಪ್ಲೆಕ್ಸ್ ನಿರ್ಮಿಸಿದ್ದ. ಸರ್ವೇ ನಂಬರ್ 87ರಲ್ಲಿನ 13*48 ಭೂಮಿ ಒತ್ತುವರಿ ಮಾಡಿ ಮನೆ ನಿರ್ಮಾಣ ಮಾಡಿದ್ದ ಆರೋಪ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಬಿಎಂಟಿಎಫ್ ಅಧಿಕಾರಿಗಳು, ಆರೋಪಿ ವಿರುದ್ಧ ಕರ್ನಾಟಕ ಭೂ ಕಂದಾಯ ಕಾಯಿದೆ ಕಲಂ 192 (ಎ)ಅನ್ವಯ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಭೂ ಕಬಳಿಕೆ ವಿಶೇಷ ನ್ಯಾಯಾಲಯ, ಆರೋಪಿ ವಿರುದ್ಧದ ಸಾಕ್ಷ್ಯಾಧಾರಗಳು ಹಾಗೂ ಪ್ರಾಸಿಕ್ಯೂಶನ್ ವಾದ ಪುರಸ್ಕರಿಸಿ ಕೃಷ್ಣಾರೆಡ್ಡಿ ವಿರುದ್ಧ ಆರೋಪ ಸಾಬೀತಾಗಿದೆ ಎಂದು ಅಭಿಪ್ರಾಯಪಟ್ಟಿದೆ. ಜತೆಗೆ, ಆರೋಪಿಗೆ ಒಂದು ವರ್ಷ ಜೈಲು ಹಾಗೂ ಐದು ಸಾವಿರ ರೂ. ದಂಡ ವಿಧಿಸಿ ವಿಶೇಷ ನ್ಯಾಯಾಲಯದ ನ್ಯಾಯಿಕ ಸದಸ್ಯರಾದ ಆರ್.ಎಚ್.ರದ್ದಿ ಹಾಗೂ ಕಂದಾಯ ಸದಸ್ಯರಾದ ನಿರಂಜನ್ ಅವರಿದ್ದ ಪೀಠ, ಜ.23ರಂದು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
ಜತೆಗೆ, ಆರೋಪಿ ಒತ್ತುವರಿ ಮಾಡಿಕೊಂಡಿರುವ ಸರ್ಕಾರಿ ಭೂಮಿಯನ್ನು ತೆರವುಗೊಳಿಸುವ ಸಂಬಂಧ ಕ್ರಮ ಕೈಗೊಳ್ಳುವಂತೆ ಆನೇಕಲ್ ತಹಶೀಲ್ದಾರ್‌ಗೆ ನಿರ್ದೇಶಿಸಿದೆ. ಬಿಎಂಟಿಎಫ್ ಪರವಾಗಿ ಸರ್ಕಾರಿ ಅಭಿಯೋಜಕರಾಗಿ ಶೈಲಜಾ ಕೃಷ್ಣಾನಾಯಕ್ ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.