ಉಪ್ಪಿನಂಗಡಿ: ನಾಡ ಕಚೇರಿ ಸ್ಥಳಾಂತರ ಪ್ರಕ್ರಿಯೆಗೆ ಚಾಲನೆ
Team Udayavani, Jan 25, 2019, 6:09 AM IST
ಉಪ್ಪಿನಂಗಡಿ: ಅಪಾಯದ ಅಂಚಿನಲ್ಲಿದ್ದ ಕಂದಾಯ ಇಲಾಖೆಯ ನಾಡ ಕಚೇರಿ ಸ್ಥಳಾಂತರಕ್ಕೆ ಚಾಲನೆ ದೊರೆತಿದೆ.
ನಾದುರಸ್ತಿಯಲ್ಲಿದ್ದ ಕಚೇರಿಯ ಕುರಿತು ಕಳೆದ ಒಂದು ವರ್ಷದಿಂದ ‘ಉದಯವಾಣಿ’ ಸತತವಾಗಿ ವರದಿ ಮಾಡಿತ್ತು. ವರದಿಯನ್ನು ಗಮನಿಸಿದ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಕಚೇರಿ ಸ್ಥಳಾಂತರಕ್ಕೆ ಕ್ರಮ ವಹಿಸುವಂತೆ ಅಧೀನ ಅಧಿಕಾರಿಗಳಿಗೆ ಸೂಚಿಸಿದ್ದರು. ಪುತ್ತೂರು ಸಹಾಯಕ ಕಮಿಷನರ್ ಅವರು ಸ್ಥಳೀಯ ಪಂಚಾಯತ್‌ಗೆ ಪತ್ರ ಬರೆದು ಕೋರಿಕೆ ಸಲ್ಲಿಸಿದ್ದರು.
ನಾಡ ಕಚೇರಿಗೆ ಸ್ಥಳಾವಕಾಶ ಕೊಟ್ಟಲ್ಲಿ ಅದರ ಸಾಧಕ – ಬಾಧಕಗಳ ಕುರಿತು ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗಿತ್ತು.
ಪುತ್ತೂರು ಸಹಾಯಕ ಆಯುಕ್ತ ಎಚ್.ಕೆ. ಕೃಷ್ಣಮೂರ್ತಿ ಅವರು ಕಚೇರಿಯನ್ನು ತತ್‌ಕ್ಷಣವೇ ಸ್ಥಳಾಂತರಿಸುವಂತೆ ಸೂಚಿಸಿದ್ದಾರೆ. ಕಚೇರಿಯಲ್ಲಿರುವ ದಾಖಲೆಗಳ ಸಹಿತ ಪೀಠೊಪಕರಣಗಳನ್ನು ಸಾಗಾಟ ಮಾಡಲಾ ಗುತ್ತಿದ್ದು, ವಾರದೊಳಗೆ ಹೊಸ ಕಚೇರಿ ಕಾರ್ಯಾರಂಭ ಮಾಡಲಿದೆ ಎಂದು ಸಹಾಯಕ ಉಪತಹಶೀಲ್ದಾರ್ ಸದಾಶಿವ ನಾಯ್ಕ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
ಪ್ರಯಾಣಿಕರಿಗೆ ಟಿಕೆಟ್ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು
School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.