ಸಿದ್ಧಗಂಗಾ ಶ್ರೀಗಳ ವ್ಯಕ್ತಿತ್ವ ಮಾದರಿ
Team Udayavani, Jan 25, 2019, 10:03 AM IST
ಚಿತ್ರದುರ್ಗ: ಶತಾಯುಷಿ, ನಡೆದಾಡುವ ದೇವರು, ತ್ರಿವಿಧ ದಾಸೋಹಿ ತುಮಕೂರಿನ ಸಿದ್ಧಗಂಗಾ ಮಠದ ಲಿಂಗೈಕ್ಯ ಡಾ| ಶಿವಕುಮಾರ ಸ್ವಾಮೀಜಿಯವರಿಗೆ ಮಹಿಳಾ ಸೇವಾ ಸಮಾಜದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಮಹಿಳಾ ಸಮಾಜದ ಉಪಾಧ್ಯಕ್ಷೆ ಮೋಕ್ಷಾ ರುದ್ರಸ್ವಾಮಿ, ಸಿದ್ಧಗಂಗಾ ಶ್ರೀಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿ, ಹನ್ನೆರಡನೇ ಶತಮಾನದಲ್ಲಿಯೇ ಕಾಯಕಕ್ಕೆ ಮಹತ್ವ ನೀಡಿದ್ದ ಬಸವಣ್ಣನವರ ತತ್ವ ಸಿದ್ಧಾಂತಗಳನ್ನು ಜೀವನದುದ್ದಕ್ಕೂ ಸ್ವಾಮೀಜಿ ಮೈಗೂಡಿಸಿಕೊಂಡಿದ್ದರು. ಯಾವುದೇ ಜಾತಿ ತಾರತಮ್ಯವಿಲ್ಲದೆ ಪ್ರತಿನಿತ್ಯ ಸಾವಿರಾರು ಬಡಮಕ್ಕಳಿಗೆ ಅನ್ನ, ಅಕ್ಷರ ದಾಸೋಹ ನೀಡುತ್ತ 111 ವರ್ಷಗಳ ಕಾಲ ಸಾರ್ಥಕವಾಗಿ ಬಾಳಿದರು. ಶ್ರೀಗಳ ವ್ಯಕ್ತಿತ್ವ ಇತರೆ ಸ್ವಾಮೀಜಿಗಳಿಗೆ ಮಾದರಿ ಎಂದರು.
ಲಿಂಗೈಕ್ಯ ಶ್ರೀಗಳು ಮಾಡಿರುವ ಸಾಮಾಜಿಕ ಸೇವೆ, ಶೋಷಿತ, ಬಡವರ ಬಗ್ಗೆ ಅವರಿಗಿದ್ದ ಕಳಕಳಿ, ಬಡವ-ಶ್ರೀಮಂತ, ಮೇಲು-ಕೀಳು ಎನ್ನುವ ಯಾವ ಭೇದ ಭಾವವೂ ಇಲ್ಲದೆ ಪ್ರತಿದಿನ ಹತ್ತು ಸಾವಿರಕ್ಕೂ ಹೆಚ್ಚು ಮಕ್ಕಳಿಗೆ ಅನ್ನ ನೀಡಿ ಜ್ಞಾನದ ಬೆಳಕನ್ನು ಹಚ್ಚಿದ್ದರಿಂದಲೇ ಡಾ| ಶಿವಕುಮಾರ ಸ್ವಾಮಿಗಳು ಲಕ್ಷಾಂತರ ಭಕ್ತರ ಮನದಲ್ಲಿ ಉಳಿದಿದ್ದಾರೆ. ಶ್ರೀಮಠದಲ್ಲಿ ಶಿಕ್ಷಣ ಪಡೆದ ಅನೇಕರು ದೇಶ ವಿದೇಶಗಳಲ್ಲಿ ನೆಲೆಸಿ ಈಗಲೂ ಮಠಕ್ಕೆ ಕೃತಜ್ಞರಾಗಿದ್ದಾರೆ ಎಂದು ಬಣ್ಣಿಸಿದರು.
ಮಹಿಳಾ ಸಮಾಜದ ಕಾರ್ಯದರ್ಶಿ ಲತಾ ಉಮೇಶ್, ರೂಪಾ, ಮಾಳವಿಕಾ, ಮಹಾಂತಮ್ಮ, ಉಮಾ ಗುರುರಾಜ್, ಅನ್ನಪೂರ್ಣ ಸಜ್ಜನ್, ಲಿಂಗಾರೆಡ್ಡಿ ಹಾಗೂ ಒನಕೆ ಓಬವ್ವ ಬಾಲಿಕಾಶ್ರಮದ ಮಕ್ಕಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
MUST WATCH
ಹೊಸ ಸೇರ್ಪಡೆ
IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ
Bengaluru: ಉದ್ಯೋಗ, ಹೂಡಿಕೆ ನೆಪದಲ್ಲಿ ಜನರಿಗೆ ವಂಚನೆ: ನಾಲ್ವರ ಸೆರೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.