ಸಂವಿಧಾನ ಸಾಕ್ಷರತಾ ಜನಪರ ಶಿಕ್ಷಣ ಯಶಸ್ವಿ
Team Udayavani, Jan 26, 2019, 1:25 AM IST
ಕಾಸರಗೋಡು: ದೇಶದ ಸಂವಿಧಾನದ ಮೂಲಭೂತ ಹಕ್ಕುಗಳ ಬಗ್ಗೆ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ರಾಜ್ಯಾದ್ಯಂತ ನಡೆಸಲಾಗುತ್ತಿರುವ ಸಂವಿಧಾನ ಸಾಕ್ಷರತಾ ಜನಪರ ಶಿಕ್ಷಣ ಕಾರ್ಯಕ್ರಮ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯುತ್ತಿವೆ.
ರಾಜ್ಯ ಸರಕಾರ, ಕೇರಳ ವಿಧಾನಸಭೆ, ಕೇರಳ ರಾಜ್ಯ ಸಾಕ್ಷರತಾ ಮಿಷನ್ ಪ್ರಾಧಿಕಾರ ಜಂಟಿ ವತಿಯಿಂದ ಈ ತರಗತಿಗಳನ್ನು ನಡೆಸಲಾಗುತ್ತಿದೆ.
ಪ್ರತಿ ಮನೆಗೆ ಮಾಹಿತಿ
ಚೆಮ್ನಾಡ್ ಗ್ರಾಮ ಪಂಚಾಯತ್‌ನಲ್ಲಿ ಈ ಸಂಬಂಧ ನಡೆಯುತ್ತಿರುವ ಚಟುವಟಿಕೆಗಳು ಈ ನಿಟ್ಟಿನಲ್ಲಿ ಮುಕ್ತ ಪ್ರಶಂಸೆಗೆ ಪಾತ್ರವಾಗಿವೆ. ಇಲ್ಲಿನ ಪ್ರತಿ ಮನೆಯ ಕನಿಷ್ಠ ಒಬ್ಬ ವ್ಯಕ್ತಿಗೆ ಸಂವಿಧಾನದ ಕುರಿತು ಜಾಗೃತಿ ಮೂಡಿಸುವಲ್ಲಿ ಪಂಚಾಯತ್ ಯಶಸ್ವಿಯಾಗಿದೆ.
ಇಲ್ಲಿನ 23 ವಾರ್ಡ್ ಗಳಲ್ಲಿ 180 ತರಗತಿಗಳು ಈಗಾಗಲೇ ನಡೆದಿವೆ. ಕೆಲವು ವಾರ್ಡ್‌ಗಳಲ್ಲಿ 20ಕ್ಕೂ ಅ ಧಿಕ ತರಗತಿಗಳು ಜರಗಿವೆ. ಕುಟುಂಬಶ್ರೀ ನೆರೆಕರೆ ಕೂಟಗಳ ಮೂಲಕವೂ ವಿವಿಧೆಡೆ ತರಗತಿಗಳು ನಡೆದಿವೆ.
ಗ್ರಾಮ ಪಂಚಾಯತ್ ಅಧ್ಯಕ್ಷ ಕಲ್ಲಟ್ರ ಅಬ್ದುಲ್ ಖಾದರ್, ಜಿಲ್ಲಾ ಸಾಕ್ಷರತಾ ಸಮಿತಿ ಸದಸ್ಯ ರಾಜನ್ ಪೊಯಿನಾಚಿ, ಪ್ರೇರಕಿ ತಂಗಮಣಿ ಚೆರುಕರ, ಸಿ.ಡಿ.ಎಸ್. ಅಧ್ಯಕ್ಷೆ ಮುಮ್ತಾಝ್ ಮೊದಲಾದವರು ಈ ನಿಟ್ಟಿನಲ್ಲಿ ಅತ್ಯುತ್ತಮ ನೇತೃತ್ವ ವಹಿಸಿದ್ದರು.
ಸಂವಿಧಾನ ಸಂಗಮ ಕಾರ್ಯಕ್ರಮ
ರಾಜ್ಯ ಸರಕಾರ, ಕೇರಳ ವಿಧಾನಸಭೆ, ಕೇರಳ ರಾಜ್ಯ ಸಾಕ್ಷರತಾ ಮಿಷನ್ ಪ್ರಾಧಿ ಕಾರ ಜಂಟಿ ವತಿಯಿಂದ ನಡೆಸಲಾಗುತ್ತಿರುವ ಸಂವಿಧಾನ ಸಾಕ್ಷರತಾ ಜನಪರ ಶಿಕ್ಷಣ ಕಾರ್ಯಕ್ರಮ ಅಂಗವಾಗಿ ಸಂವಿಧಾನ ಸಂಗಮ ಕಾರ್ಯಕ್ರಮ ಚೆಮ್ನಾಡ್ ಗ್ರಾಮಪಂಚಾಯತ್‌ನಲ್ಲಿ ಜರುಗಿತು.
ವಿಪಕ್ಷ ನೇತಾರ ಉಮ್ಮನ್ ಚಾಂಡಿ ಸಮಾರಂಭವನ್ನು ಉದ್ಘಾಟಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷ ಕಲ್ಲಟ್ರ ಅಬ್ದುಲ್ ಖಾದರ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸಂಚಾಲಕ ಶಾಜುಜಾನ್ ಪ್ರಧಾನ ಭಾಷಣ ಮಾಡಿದರು.
ಪಂಚಾಯತ್ ಉಪಾಧ್ಯಕ್ಷೆ ಶಕುಂತಲಾ ಕೃಷ್ಣನ್, ಸ್ಥಾಯೀ ಸಮಿತಿ ಅಧ್ಯಕ್ಷರಾದ ಶಂಸುದ್ದೀನ್ ತೆಕ್ಕಿಲ್, ಗೀತಾ ಗೋಪಾಲಕೃಷ್ಣನ್, ಎ. ಶಾಸಿಯಾ, ಸದಸ್ಯರಾದ ಕೆ. ಮಾಧವನ್ ನಾಯರ್, ಎನ್.ವಿ. ಬಾಲನ್, ರೇಣುಕಾ ಭಾಸ್ಕರನ್, ತಂಗಮಣಿ ಚೆರುಕರ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು
Kasaragod: ಕೊಲೆ ಯತ್ನ; ವೀಡಿಯೋ ಕಾನ್ಫರೆನ್ಸ್ ಮೂಲಕ ನಕ್ಸಲ್ ಸೋಮನ್ ವಿಚಾರಣೆ
Kasaragod: 300 ಪವನ್ ಚಿನ್ನ, 1 ಕೋಟಿ ರೂ. ಕಳವು ಕರ್ನಾಟಕ, ತಮಿಳುನಾಡಿಗೆ ತನಿಖೆ ವಿಸ್ತರಣೆ
Road Mishap: ಲಾರಿ ಹರಿದು ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು
Road Mishap: ಪೊನ್ನಂಪೇಟೆ: ಲಾರಿ ಢಿಕ್ಕಿ; ಬಾಲಕಿ ಸಾವು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು
School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್ ನಿಧನ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.