ಖನಿಜ ಬಳಕೆಗೆ ರಾಜಧನ ಕಡಿತ ಕಡ್ಡಾಯ
Team Udayavani, Jan 26, 2019, 7:50 AM IST
ಹಾಸನ: ಸರ್ಕಾರಿ ಕಾಮಗಾರಿಗಳಿಗೆ ಬಳಸುವ ಮರಳು ಮತ್ತು ಉಪ ಖನಿಜಗಳಿಗೆ ನಿಯಮಾನುಸಾರ ರಾಜಧನ ಮತ್ತು ಜಿಲ್ಲಾ ಖನಿಜ ನಿಧಿ ತೆರಿಗೆ ಕಡ್ಡಾಯವಾಗಿ ಕಡಿತಗೊಳಿಸಿ ಪಾವತಿಸುವಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ರಸ್ತೆ ಹಾಗೂ ಇತರೆ ಸರ್ಕಾರಿ ಕಾಮಗಾರಿಗೆ ಅನುಗುಣವಾಗಿ ರಾಜಧನ, ಡಿಎಂಎಫ್ ಹಾಗೂ ಇತರೆ ತೆರಿಗೆಗಳನ್ನು ಕಟಾಯಿಸುತ್ತಿರುವ ಕುರಿತು ನಡೆದ ಸಭೆಯಲ್ಲಿ ಮಾತನಾಡಿ ಅವರು, ಸರ್ಕಾರಿ ಕಾಮಗಾರಿಗಳಲ್ಲಿ ಹೆಚ್ಚಾಗಿ ಎಂ ಸ್ಯಾಂಡ್ ಬಳಕೆಗೆ ಆದ್ಯತೆ ಮತ್ತು ಪ್ರೋತ್ಸಾಹ ನೀಡಬೇಕು ಎಂದು ಸಲಹೆ ನೀಡಿದರು.
ಕಡ್ಡಾಯ ಕ್ರಮ: ಲೋಕೋಪಯೋಗಿ ಇಲಾಖೆ, ಜಿಪಂ ಎಂಜಿನಿಯರಿಂಗ್ ವಿಭಾಗ, ರಾಷ್ಟ್ರೀಯ ಹೆದ್ದಾರಿ, ಎತ್ತಿನ ಹೊಳೆ ಯೋಜನೆ ಸೇರಿದಂತೆ ಸರ್ಕಾರಿ ಕಾಮಗಾರಿಗೆ ಬಳಸಲಾಗುತ್ತಿರುವ ಮರಳು ಮತ್ತು ಇತರ ಖನಿಜಗಳಿಗೆ ನಿಖರವಾಗಿ ರಾಜಧನ ಕಡಿತಗೊಳಿಸದೇ ಇರುವುದು ಮತ್ತು ಜಿಲ್ಲಾ ಖನಿಜ ನಿಧಿಗೆ ಹಣ ಪಾವತಿ ಮಾಡದೆ ಇರುವುದನ್ನು ಗಮನಿಸಲಾಗಿದೆ. ಎಲ್ಲಾ ಇಲಾಖೆಗಳು ಈ ಬಗ್ಗೆ ಕಡ್ಡಾಯವಾಗಿ ಕ್ರಮ ಕೈಗೊಳ್ಳಬೇಕು ಎಂದು ಸಿಂಧೂರಿ ನಿರ್ದೇಶನ ನೀಡಿದರು.
ರಾಜಧನ ಸಂದಾಯ: ಎತ್ತಿನಹೊಳೆ ಯೋಜನೆಯಡಿ ಜಿಲ್ಲೆಯ ಮರಳು ಬಳಸಿ ರಾಜಧನವನ್ನು ಚಿತ್ರದುರ್ಗ ಕಚೇರಿಯಲ್ಲಿ ಕಡಿತ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ವರದಿ ನೀಡುತ್ತಿದ್ದಾರೆ. ಆಯಾಯಾ ಜಿಲ್ಲೆಗೆ ಅದು ಸಂದಾಯವಾಗಬೇಕು. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.
ಲೋಪ ಸರಿಪಡಿಸಿ: ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಸ್ಥಳೀಯ ಆಡಳಿತದ ಗಮನಕ್ಕೆ ತಾರದೆ, ಸಾಮಗ್ರಿಗಳನ್ನು ಸಂಗ್ರಹಿಸದೆ ನಗರದ ಮಧ್ಯಭಾಗದಲ್ಲಿ ಅಗೆದು ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿರುವುದು ಸಮರ್ಪಕವಲ್ಲ. ಕೂಡಲೇ ಲೋಪ ಸರಿಪಡಿಸಿ ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ರಾಜಧನ ಸಂದಾಯ ಮಾಡಿ: ಸಭೆಯಲ್ಲಿ 2016-17 ರಿಂದ 2018-19ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ಸರ್ಕಾರಿ ಕಾಮಗಾರಿಗಳಿಗೆ ಉಪಯೋಗಿಸುತ್ತಿರುವ, ನಿರ್ವಹಿಸುತ್ತಿರುವ ಹಾಗೂ ಪ್ರಾರಂಭವಾಗಬೇಕಿರುವ ಸರ್ಕಾರಿ ಕಾಮಗಾರಿಗಳಿಗೆ ಅವಶ್ಯವಿರುವ ಉಪಖನಿಜಗಳ ಕುರಿತು ಚರ್ಚೆ ನಡೆಯಿತು. ಉಪಖನಿಜ ಸಾಗಾಣಿಕಾ ಪರವಾನಗಿಯನ್ನು ಪಡೆಯದೆ ಸರ್ಕಾರಿ ಕಾಮಗಾರಿಗಳಲ್ಲಿ ಒಳಸುವ ಉಪಖನಿಜಗಳ ಗಾತ್ರಕ್ಕೆ ಕರ್ನಾಟಕ ಉಪಖನಿಜ ರಿಯಾಯ್ತಿ ನಿಯಮಾವಳಿ-1994ರ ತಿದ್ದುಪಡಿ ಅಧಿನಿಯಮ 2017ರ ನಿಯಮ 44(4)ರಂತೆ ರಾಜಧನದ ಐದುಪಟ್ಟು ದಂಡದ ಮೊತ್ತವನ್ನು ಕಟಾಯಿಸಿ ಸರ್ಕಾರಕ್ಕೆ ಸಂದಾಯ ಮಾಡುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಕೆಎಂಎಂಸಿಆರ್ 1994ರ ತಿದ್ದುಪಡಿ ಆಧಿನಿಯಮ 2016 ನಿಯಮ 36ರಲ್ಲಿ ಕಡ್ಡಾಯವಾಗಿ ಉಪಖನಿಜ ಅಂದರೆ ಮಣ್ಣು, ಜೆಲ್ಲಿ, ಕಟ್ಟಡಕಲ್ಲು, ಮರಳಿಗೆ ಕಡ್ಡಾಯವಾಗಿ ಉಪಖನಿಜ ಸಾಗಾಣಿಕಾ ಪರವಾನಗಿಯನ್ನು ಪಡೆಯುವ ಬಗ್ಗೆ ಚರ್ಚೆ ನಡೆಸಲಾಯಿತು. ಲೋಕೋಪಯೋಗಿ, ಜಿಪಂ ಎಂಜಿನಿಯರಿಂಗ್ ವಿಭಾಗ, ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಅಭಿಯಂತರರು, ಗಣಿ ಮತ್ತು ಭೂಜ್ಞಾನ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್ ರೇವಣ್ಣ
ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ
Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ
Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Toxic Movie: ಫ್ಯಾನ್ಸ್ ನಶೆಯೇರಿಸಿದ ಯಶ್; ಹಾಲಿವುಡ್ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!
Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ
Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Fraud; ಡಿಕೆಶಿ, ಡಿಕೆಸು ಸಹೋದರಿ ಎಂದು ಸ್ತ್ರೀರೋಗ ತಜ್ಞೆಗೂ 4.2 ಕೋಟಿ ವಂಚಿಸಿದ್ದ ಐಶ್ವರ್ಯ!
Bengaluru; ಮದ್ಯ ಕುಡಿಸಿ ಅತ್ಯಾಚಾ*ರ: ಬಿಜೆಪಿ ಮುಖಂಡ ಜಿಮ್ ಸೋಮನ ವಿರುದ್ಧ ಕೇಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.