ಬರ ಪ್ರದೇಶಗಳಿಗೆ ಸಚಿವರ ತಂಡ ಭೇಟಿ
Team Udayavani, Jan 26, 2019, 9:48 AM IST
ಚಾಮರಾಜನಗರ: ರಾಜ್ಯದ ಪ್ರವಾಹ ಪೀಡಿತ ಹಾಗೂ ಬರಪೀಡಿತ ಪ್ರದೇಶಗಳ ಅಧ್ಯಯನ ಹಾಗೂ ಬರ ನಿರ್ವಹಣೆ ಹಿನ್ನೆಲೆಯಲ್ಲಿ ಕೈಗೊಂಡಿರುವ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆಗಾಗಿ ರಚಿಸಲಾಗಿರುವ ಮೈಸೂರು ಕಂದಾಯ ವಿಭಾಗದ ಸಚಿವ ಸಂಪುಟ ಉಪಸಮಿತಿಯು ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಸಚಿವ ಸಂಪುಟ ಉಪಸಮಿತಿಯ ಅಧ್ಯಕ್ಷ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣ ಭೈರೇಗೌಡ ನೇತೃತ್ವದಲ್ಲಿ ಸಮಿತಿಯ ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ, ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ಅವರು ಬರಪೀಡಿತ ಪ್ರದೇಶಗಳ ವೀಕ್ಷಣೆ ಮಾಡಿದರು.
ಚಾಮರಾಜನಗರ ತಾಲೂಕಿನ ಯಡಪುರಕ್ಕೆ ಮೊದಲು ಆಗಮಿಸಿದ ಸಮಿತಿಯು ರಾಗಿ, ಹುರುಳಿ ಬೆಳೆ ಹಾನಿಗೀಡಾಗಿರುವುದನ್ನು ಪರಿಶೀಲಿಸಿದರು. ಸಚಿವರು ಹೊಲದಲ್ಲಿ ಒಣಗಿಹೋಗಿದ್ದ ಬೆಳೆಯನ್ನು ಕಿತ್ತು ವೀಕ್ಷಿಸಿದರು. ಅಲ್ಲಿಯೇ ಇದ್ದ ರೈತರೊಂದಿಗೆ ಸಮಾಲೋಚಿಸಿ ಸಮಸ್ಯೆಗಳನ್ನು ಆಲಿಸಿದರು.
ಇದೇ ಸಂದರ್ಭದಲ್ಲಿ ಸ್ಥಳೀಯ ರೈತರು ಮಾತನಾಡಿ, ಬೆಳೆ ಹಾನಿಗೆ ವೈಜ್ಞಾನಿಕವಾಗಿ ಪರಿಹಾರ ನಿಗದಿಯಾಗಬೇಕು. ಕೃಷಿಗೆ ಮಾಡಲಾದ ವೆಚ್ಚ ನಷ್ಟವನ್ನು ಸರಿಯಾದ ಪ್ರಮಾಣದಲ್ಲಿ ಸಿಗುವಂತಾಗಬೇಕು ಎಂದು ಸಚಿವ ಸಂಪುಟ ಉಪಸಮಿತಿಯ ಗಮನಕ್ಕೆ ತಂದರು.
ಬಳಿಕ ಗುಂಡ್ಲುಪೇಟೆ ತಾಲೂಕು ತೆರಕಣಾಂಬಿಗೆ ತೆರಳಿದ ಸಚಿವರ ತಂಡ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಮಧ್ಯಂತರ ಜಲ ಸಂಗ್ರಹಾಲಯಕ್ಕೆ ಭೇಟಿ ನೀಡಿತು. ಬಹುಗ್ರಾಮ ಯೋಜನೆಯಡಿ ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ವ್ಯವಸ್ಥೆ ಹೇಗೆ ನಡೆಯುತ್ತಿದೆ ಎಂಬ ಬಗ್ಗೆ ಅಧಿಕಾರಿಗಳಿಂದ ವಿವರವಾಗಿ ಮಾಹಿತಿ ಪಡೆದುಕೊಂಡರು.
ತದ ನಂತರ ಗುಂಡ್ಲುಪೇಟೆ ತಾಲೂಕು ಅಣ್ಣೂರು ಗ್ರಾಮಕ್ಕೆ ತೆರಳಿ ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನಡೆಯುತ್ತಿದ್ದ ಬಾಳೆಕಟ್ಟೆ ಕೆರೆಯ ಹೂಳೆತ್ತುವ ಕಾಮಗಾರಿ ವೀಕ್ಷಣೆ ಮಾಡಿದರು. ಕೆಲಸದಲ್ಲಿ ತೊಡಗಿದ್ದ ಕಾರ್ಮಿಕರೊಂದಿಗೆ ಸಮಾಲೋಚಿಸಿದ ಸಚಿವರು ಯೋಜನೆಯಿಂದ ಉಪಯೋಗವಾಗುತ್ತಿದೆಯೇ? ಹೆಚ್ಚು ಕೆಲಸ ಅವಕಾಶ ಸಿಗುತ್ತಿದೆಯೇ? ಕೂಲಿ ಹಣ ಪಾವತಿ ಸರಿಯಾದ ಸಮಯಕ್ಕೆ ಆಗುತ್ತಿದೆಯೇ ಎಂಬ ಬಗ್ಗೆ ಕೆಲಸಗಾರರಿಂದಲೇ ಮಾಹಿತಿ ತಿಳಿದು ಕೊಂಡರು. ಉದ್ಯೋಗ ಖಾತ್ರಿಯಡಿ ಎಷ್ಟು ಪ್ರಮಾಣದಲ್ಲಿ ಉದ್ಯೋಗ ಬೇಡಿಕೆ ಬರಲಿದೆಯೋ ಅದಕ್ಕೆ ತಕ್ಕಂತೆ ಸ್ಥಳೀಯವಾಗಿಯೇ ಜನರಿಗೆ ಉದ್ಯೋಗ ಅವಕಾಶ ನೀಡಬೇಕೆಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರ ಪೈಕಿ ಓರ್ವ ಮೃತ್ಯು, ಸಹಸವಾರೆ ಗಾಯ
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ
Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.