ಆಮಿಷಕ್ಕೆ ಒಳಗಾಗದೇ ಕಡ್ಡಾಯವಾಗಿ ಮತ ಚಲಾಯಿಸಿ

Team Udayavani, Jan 26, 2019, 11:16 AM IST

lure.jpg

ತಿಪಟೂರು: ಹದಿನೆಂಟು ವರ್ಷ ತುಂಬಿದ ಪ್ರತಿಯೊಬ್ಬರು ಚುನಾವಣೆಯಲ್ಲಿ ಯಾವುದೇ ಆಮಿಷಕ್ಕೆ ಒಳಗಾಗದೆ ಆತ್ಮವಿಶ್ವಾಸದಿಂದ ಮತದಾನದ ಹಕ್ಕನ್ನು ಚಲಾಯಿಸುವ ಪ್ರಜ್ಞಾವಂತಿಕೆ ಬೆಳೆಸಿಕೊಂಡು, ಮತ ದಾನದ ಮೌಲ್ಯ ಮತ್ತು ಪ್ರಜಾಪ್ರಭುತ್ವದ ಮಹತ್ವ ಕಾಪಾಡಬೇಕೆಂದು ಉಪವಿಭಾಗಾಧಿಕಾರಿ ಎಸ್‌. ಪೂವಿತಾ ತಿಳಿಸಿದರು.

ನಗರದ ಕಲ್ಪತರು ಆಡಿಟೋರಿಯಂನಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಜಗತ್ತಿ ನಲ್ಲಿಯೇ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದಲ್ಲಿ 18 ವರ್ಷ ಪೂರ್ಣಗೊಂಡ ಪ್ರತಿ ಯೊಬ್ಬರು ಮತದಾನದ ಹಕ್ಕು ಪಡೆದಿರುತ್ತಾರೆ. ಅದನ್ನು ಯಾವುದೇ ಪ್ರಭಾವಕ್ಕೆ ಒಳಗಾಗದೆ ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಚಲಾಯಿಸಬೇಕು. ಮತ ಚಲಾಯಿಸುವುದು ನಮ್ಮ ಹಕ್ಕು ಮತ್ತು ಕರ್ತವ್ಯವಾಗಿದ್ದು, ಚುನಾವಣಾ ಆಯೋಗ ಹಾಗೂ ಸಂವಿಧಾನದ ನಿಯಮಾವಳಿ, ಮಾರ್ಗಸೂಚಿ ಪರಿಪೂರ್ಣವಾಗಿ ಮನನ ಮಾಡಿಕೊಂಡು ಅವುಗಳ ಪಾವಿತ್ರ್ಯತೆ ಕಾಪಾಡಬೇಕು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಬಿ. ಮಂಗಳಗೌರಮ್ಮ ಮಾತನಾಡಿ, ದೇಶದ ಬಗ್ಗೆ ಅಭಿಮಾನ, ಸ್ವಾಭಿಮಾನದ ಜೊತೆಗೆ ಮತ ಚಲಾವಣೆ ಮಾಡುವುದೂ ನಮ್ಮ ದೇಶಕ್ಕೆ ಕೊಟ್ಟ ಗೌರವವಾಗಿರುತ್ತದೆ. ಪ್ರತಿಯೊಬ್ಬರು ಮತದಾನ ಮಾಡುವ ಮೂಲಕ ಇತರರಿಗೆ ಜಾಗೃತಿ ಮೂಡಿಸಬೇಕೆಂದರು.

ಸಂವಿಧಾನ ನೀಡಿರುವ ಹಕ್ಕು: ಪೌರಾಯುಕ್ತ ಮಧು ಮಾತನಾಡಿ, ಯುವ ಮತ್ತು ಭಾವಿ ಮತದಾರರನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಚುನಾವಣಾ ಆಯೋಗ ಪ್ರತಿವರ್ಷ ಜ.25ರಂದು ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಿಸಲಾಗುತ್ತದೆ. ಸಂವಿಧಾನ ನೀಡಿರುವ ಮತದಾನದ ಹಕ್ಕು ಪಡೆದು ಕೊಂಡು ಉತ್ತಮ ಪ್ರತಿನಿಧಿಯನ್ನು ಆಯ್ಕೆ ಮಾಡ ಬೇಕಿದೆ ಎಂದು ಸಲಹೆ ನೀಡಿದರು.

ಶೇ.100ರಷ್ಟು ಮತದಾನವಾಗಲಿ: ತಾಪಂ ಕಾರ್ಯ ನಿರ್ವಹಣಾಧಿಕಾರಿ ಮದನ್‌ಮೋಹನ್‌ ಮಾತನಾಡಿ, ಪ್ರಜಾಪ್ರಭುತ್ವದ ಆಧಾರ ಸ್ತಂಭವಾಗಿರುವ ಮತದಾನ ವನ್ನು 18 ವರ್ಷ ಮೇಲ್ಪಟ್ಟಿರುವವರು ಮಾಡುವ ಮೂಲಕ ದಕ್ಷ ಮತ್ತು ಪ್ರಾಮಾಣಿಕ ವ್ಯಕ್ತಿಯನ್ನು ಆಯ್ಕೆ ಮಾಡಬೇಕು. ಈ ಬಗ್ಗೆ ಜನರಲ್ಲಿ ಅರಿವು ಜಾಗೃತಿ ಮೂಡಿಸಲಾಗುತ್ತಿದ್ದು, ನಮ್ಮಲ್ಲಿ ಶೇ. 75ರಷ್ಟು ಮಾತ್ರ ಮತದಾನ ನಡೆಯುತ್ತಿದು,್ದ ಮುಂಬರುವ ದಿನಗಳಲ್ಲಿ ಶೇ. 100ರಷ್ಟು ಮತದಾನ ನಡೆಯಬೇಕಾಗಿರು ವುದರಿಂದ ಎಲ್ಲರೂ ಮಾಹಿತಿ ಪಡೆದುಕೊಂಡು ಬೇರೆಯವರಿಗೂ ಜಾಗೃತಿ ಮೂಡಿಸಬೇಕೆಂದರು.

ಈ ಸಂದರ್ಭದಲ್ಲಿ ತಹಶೀಲ್ದಾರ್‌ ಬಿ.ಆರತಿ ಪ್ರತಿಜ್ಞಾ ವಿಧಿ ಬೋಧಿಸಿದರು. ನಂತರ ಎಲ್ಲಾ ಹೋಬಳಿಗಳ ಮತಗಟ್ಟೆ ಅಧಿಕಾರಿಗಳನ್ನು ಅಭಿನಂದಿಸ ಲಾಯಿತು. ಮತದಾನದ ವಿಧಾನದ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ತಿಳಿಸಿಕೊಡಲಾಯಿತು. ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ, ತಹಶೀಲ್ದಾರ್‌ ಹಾಗೂ ನಗರಸಭೆ ಸಿಬ್ಬಂದಿ ವರ್ಗ ದವರು, ಬಿಎಲ್‌ಒಗಳು, ಶಿಕ್ಷಕರು, ಮತದಾರರು ಭಾಗವಹಿಸಿದ್ದರು. ಉಪನ್ಯಾಸಕ ಮಹದೇವಯ್ಯ ನಿರೂಪಿಸಿ, ವಂದಿಸಿದರು.

ಪ್ರಾಮಾಣಿಕ ವ್ಯಕ್ತಿಗೆ ಮತ ಚಲಾಯಿಸಿ

ಕುಣಿಗಲ್‌: ಮತದಾನದ ಹಕ್ಕಿನ ಮಹತ್ವ ತಿಳಿದು ಪ್ರಾಮಾಣಿಕ ವ್ಯಕ್ತಿಗೆ ಮತ ಚಲಾಯಿಸಿ, ಆಯ್ಕೆ ಮಾಡುವ ಮೂಲಕ ದೇಶದಲ್ಲಿನ ಭ್ರಷ್ಟಾಚಾರ ತಡೆಗಟ್ಟ ಬೇಕೆಂದು ಹಿರಿಯ ಸಿವಿಲ್‌ ನ್ಯಾಯಾಧೀಶ ಮಹಮ್ಮದ್‌ ಮೊಯುದ್ದೀನ್‌ ಸಲಹೆ ನೀಡಿದರು. ಪಟ್ಟಣದ ಕಂದಾಯ ಭವನದಲ್ಲಿ ಚುನಾವಣಾ ಆಯೋಗ ಹಾಗೂ ತಾಲೂಕು ಆಡಳಿತ ಹಮ್ಮಿಕೊಂಡಿದ್ದ ಮತ ದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಭ್ರಷ್ಟಾಚಾರ ಇಳಿಮುಖವಾಗಿಲ್ಲ: ಚುನಾವಣಾ ಆಯೋಗದ ಪ್ರಕಾರ 2014ರಲ್ಲಿ ದೇಶದಲ್ಲಿ 86.68 ಕೋಟಿ ಮತದಾರರಿದ್ದಾರೆ. ಆದರೆ, ನೂರಕ್ಕೆ ನೂರಷ್ಟು ಮತದಾನ ದೇಶದಲ್ಲಿ ಎಲ್ಲೂ ನಡೆದಿಲ್ಲ, ಶೇ. 75 ರಷ್ಟು ಮಾತ್ರ ಮತದಾನವಾಗುತ್ತದೆ. ಮತದಾನದ ದಿನ ದಂದು ಪ್ರಜ್ಞಾವಂತರು ತಮ್ಮ ಹಕ್ಕು ಚಲಾಯಿಸದೆ ಕುಟುಂಬದೊಂದಿಗೆ ಪ್ರವಾಸ ಹೋಗುತ್ತಿರುವುದು ಮತದಾನ ಕಡಿಮೆಯಾಗಲು ಕಾರಣವಾಗಿದೆ. ಇದ ರಿಂದ ಪ್ರಾಮಾಣಿಕ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಲು ಸಾಧ್ಯವಾಗದೇ ದೇಶದಲ್ಲಿ ಭ್ರಷ್ಟಾಚಾರ ಇಳಿಮುಖವಾಗಿಲ್ಲ ಎಂದು ವಿಷಾದಿಸಿದರು.

ಪ್ರಧಾನ ಸಿವಿಲ್‌ ನ್ಯಾಯಾಧೀಶ ಜೆ.ಕೃಷ್ಣ ಮಾತ ನಾಡಿ, ದೇಶದ ಅಭಿವೃದ್ಧಿಯ ಹಿತ ದೃಷ್ಟಿಯಿಂದ ಮತ ದಾನ ಮಾಡಿ ಉತ್ತಮ ಜನ ಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳದಿದ್ದರೇ ಪ್ರಜಾಪ್ರಭುತ್ವ ವ್ಯವಸ್ಥೆಗೆ ಹಾಗೂ ಸಂವಿಧಾನಕ್ಕೆ ಅಪಮಾನ ಮಾಡಿದಂತ್ತಾಗುತ್ತದೆ ಎಂದು ಹೇಳಿದರು. ತಹಶೀಲ್ದಾರ್‌ ವಿ.ಆರ್‌ ವಿಶ್ವನಾಥ್‌ ಪ್ರತಿಜ್ಞಾನ ವಿಧಿ ಬೋಧಿಸಿದರು. ಈ ವೇಳೆ ಯುವ ಮತದಾರರಿಗೆ ಗುರುತಿನ ಚೀಟಿ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಅಪರ ಸಿವಿಲ್‌ ನ್ಯಾಯಾಧೀಶ ಕಿಶೋರ್‌ಕುಮಾರ್‌, ತಾಪಂ ಇಒ ಶಿವರಾಜಯ್ಯ, ಡಿವೈಎಸ್‌ಪಿ ಎಚ್.ಎಸ್‌.ರಾಮಲಿಂಗೇಗೌಡ, ಪುರಸಭೆ ಮುಖ್ಯಾಧಿಕಾರಿ ಆರ್‌.ರಮೇಶ್‌, ಬಿಇಒ ಎಸ್‌.ಆರ್‌.ಬಂಡಿವೀರಪ್ಪ, ಎಪಿಪಿ ರಘು ಇದ್ದರು.

ಟಾಪ್ ನ್ಯೂಸ್

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-kunigal

Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ

14-kunigal

Kunigal: ಟೈರ್ ಸ್ಪೋಟಗೊಂಡು ಕಾರು ಪಲ್ಟಿ: ಐಟಿ ಉದ್ಯೋಗಿ ದುರ್ಮರಣ

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

koratagere

Koratagere: ಗೃಹ ಸಚಿವರ ಸ್ವ ಕ್ಷೇತ್ರದಲ್ಲೇ ಮಲ ಹೊತ್ತ 10 ವರ್ಷದ ಬಾಲಕ!

Accident-logo

Kunigal: ಬೈಕ್, ಕ್ಯಾಂಟರ್ ಮುಖಾಮುಖಿ ಢಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು 

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ

Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ

ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ

ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

7-r-ashok

Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.