ಜಿಲ್ಲಾ ಕೇಂದ್ರದಲ್ಲಿ ಸಂಭ್ರಮದ ಗಣರಾಜ್ಯೋತ್ಸವ
Team Udayavani, Jan 27, 2019, 12:50 AM IST
ಉಡುಪಿ: ಬೀಡಿನ ಗುಡ್ಡೆಯ ಮಹಾತ್ಮಾ ಗಾಂಧೀ ಬಯಲು ರಂಗ ಮಂದಿರದಲ್ಲಿ ಶನಿವಾರ ನಡೆದ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಸಚಿವೆ ಡಾ| ಜಯಮಾಲಾ ಧ್ವಜಾರೋಹಣ ನೆರವೇರಿಸಿ, ಗಣರಾಜ್ಯೋತ್ಸವದ ಸಂದೇಶ ನೀಡಿದರು.
ರಾಷ್ಟ್ರಮಟ್ಟದ ಕ್ರೀಡಾ ಕೂಟದಲ್ಲಿ ಭಾಗವಹಿಸಿದ 17 ಕ್ರೀಡಾಪಟುಗಳಿಗೆ, ಪ್ರವಾಹ ಪರಿಸ್ಥಿತಿ ಸಂದರ್ಭದಲ್ಲಿ ಉತ್ತಮ ರೀತಿಯ ಕಾರ್ಯ ನಿರ್ವಹಿಸಿದ ಅಗ್ನಿಶಾಮಕ ಇಲಾಖೆಯ 15 ಜನ ಅಧಿಕಾರಿ/ಸಿಬಂದಿಗಳಿಗೆ ಮತ್ತು ಪಥ ಸಂಚಲನದಲ್ಲಿ ಭಾಗ ವಹಿಸಿದ ತಂಡಗಳಿಗೆ ಪ್ರಶಸ್ತಿ ವಿತರಿಸಲಾಯಿತು. ಶಾಸಕ ರಘುಪತಿ ಭಟ್ ಉಪಸ್ಥಿತರಿದ್ದರು.
ಉಡುಪಿ ಜಿಲ್ಲೆಯಲ್ಲಿ ಸರ್ವೋತ್ತಮ ಪ್ರಶಸ್ತಿಗೆ ಆಯ್ಕೆಯಾದ ಪಶುಸಂಗೋಪನಾ ಇಲಾಖೆಯ ಉಪನಿರ್ದೇಶಕ ಡಾ| ಸರ್ವೋತ್ತಮ ಉಡುಪ, ಕೃಷಿ ಇಲಾಖೆಯ ಉಪನಿರ್ದೇಶಕ ಚಂದ್ರಶೇಖರ ನಾಯ್ಕ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕಿ ಅನಿತಾ ಎಸ್., ಬಿಸಿಎಂ ಇಲಾಖೆಯ ಪತ್ರಾಂಕಿತ ವ್ಯವಸ್ಥಾಪಕ ಶಂಕರನಾರಾಯಣ ಭಟ್, ಬ್ರಹ್ಮಾವರದ ಕಂದಾಯ ನಿರೀಕ್ಷಕ ಲಕ್ಷ್ಮೀನಾರಾಯಣ ಭಟ್, ನಗರಸಭೆಯ ದ್ವಿತೀಯ ದರ್ಜೆ ಸಹಾಯಕ ಶ್ರೀಧರ್ ಅವರಿಗೆ ಪ್ರಶಸ್ತಿ ವಿತರಿಸಲಾಯಿತು.
ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಪೊಲೀಸ್, ಅಗ್ನಿಶಾಮಕ, ಗೃಹ ರಕ್ಷಕದಳ ಮತ್ತು ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಶಿಕ್ಷಕರಾದ ಸುಮಾ ಮತ್ತು ಪ್ರಶಾಂತ ಹಾವಂಜೆ ಕಾರ್ಯಕ್ರಮ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.