ಮಂಗನಕಾಯಿಲೆಗೆ ಇಬ್ಬರು ಬಲಿ?

Team Udayavani, Jan 27, 2019, 12:30 AM IST

monkey-4.jpg

ಎಚ್.ಡಿ.ಕೋಟೆ: ತಾಲೂಕಿನ ಡಿ.ಬಿ.ಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿಮ್ಮನಹೊಸಳ್ಳಿ ಹಾಡಿಯಲ್ಲಿ ತೀವ್ರ ಜ್ವರದಿಂದ ಇಬ್ಬರು ಮೃತರಾಗಿದ್ದು, ಮಂಗನಕಾಯಿಲೆಯಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಕೇರಳದ ಮಾನಂದವಾಡಿ ತಾಲೂಕಿನ ಆಸ್ಪತ್ರೆಯಲ್ಲಿ ಮತ್ತು ಕೋಜಿಕ್ಕೋಡ್‌ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸುರೇಶ್‌ ಮತ್ತು ಸುರೇಶಯ್ಯ ಎಂಬುವರು ತಿಮ್ಮನ ಹೊಸಳ್ಳಿ ಹಾಡಿಗೆ ವಿಶ್ರಾಂತಿಗಾಗಿ ಬಂದಿ ದ್ದರು. ಜ್ವರ ತೀವ್ರವಾಗಿ, ಸ್ಥಳೀಯ ಆಸ್ಪತ್ರೆಗೆ ದಾಖಲಾದರಾದರೂ, ಚಿಕಿತ್ಸೆ ಫ‌ಲಿಸದೆ ಅಸುನೀಗಿದ್ದಾರೆ. ಇವರಿಂದ ಪಡೆದ ರಕ್ತಪರೀಕ್ಷೆಯ ವರದಿ ಬಂದಿದ್ದು, ಮಂಗನಕಾಯಿಲೆ ಇರುವ ಲಕ್ಷಣಗಳು ಕಂಡು ಬಂದಿವೆ. ಹಾಗಾಗಿ, ಮುನ್ನೆಚ್ಚರಿಕೆ ಕ್ರಮವಾಗಿ ತಿಮ್ಮನಹೊಸಳ್ಳಿ ಹಾಡಿ ಸೇರಿ ಸುತ್ತಮುತ್ತಲ ಗ್ರಾಮಗಳಲ್ಲಿ ಪರೀಕ್ಷೆ ನಡೆಸಲಾಗಿದೆ. ಕಾಡಿನಲ್ಲಿರುವ ಉಣ್ಣೆಗಳನ್ನು ಸಂಗ್ರಹಿಸಿ, ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಆದರೆ, ಇವರು ಅನಾರೋಗ್ಯ, ಅತಿಯಾದ ಕುಡಿತ ಹಾಗೂ ಇತರ ಕಾರಣದಿಂದ ಮೃತರಾಗಿದ್ದಾರೆಯೇ ಹೊರತು ಮಂಗನ ಕಾಯಿಲೆಯಿಂದ ಅಲ್ಲ ಎಂದು ತಾಲೂಕು ವೈದ್ಯಾಧಿಕಾರಿ ಡಾ.ಟಿ.ರವಿಕುಮಾರ್‌ ‘ಉದಯವಾಣಿ’ಗೆ ತಿಳಿಸಿದ್ದಾರೆ.

ಮಂಗನ ಕಾಯಿಲೆ ಶಾಶ್ವತ ನಿರ್ಮೂಲನೆಗೆ ಕ್ರಮ
ಬಾಗಲಕೋಟೆ:
ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಹರಡುತ್ತಿರುವ ಮಂಗನ ಕಾಯಿಲೆ ಹತೋಟಿಗೆ ಆರೋಗ್ಯ ಇಲಾಖೆ ಅಗತ್ಯ ಕ್ರಮ ಕೈಗೊಂಡಿದೆ. ಈ ಕಾಯಿಲೆಯನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ಯೋಜನೆ ಹಾಕಿ ಕೊಂಡಿದ್ದು, ಪ್ರಸಕ್ತ ಬಜೆಟ್‌ನಲ್ಲಿ 10 ಕೋಟಿ ರೂ.ಅನುದಾನ ನೀಡಲು ಮುಖ್ಯಮಂತ್ರಿಗೆ ಮನವಿ ಮಾಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶಿವಾನಂದ ಪಾಟೀಲ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1957ರ ಬಳಿಕ ಮಂಗನ ಕಾಯಿಲೆ ದೊಡ್ಡ ಪ್ರಮಾಣದಲ್ಲಿ ಕಾಣಿಸಿಕೊಂಡಿದೆ. ಈ ಕಾಯಿಲೆ ಹರಡದಂತೆ ಮುಂಚಿತವಾಗಿಯೇ ಎಚ್ಚರಿಕೆ ವಹಿಸುವ ಜವಾಬ್ದಾರಿ ಆಯಾ ಗ್ರಾಮ ಪಂಚಾಯಿತಿ ಮತ್ತು ಅರಣ್ಯ ಇಲಾಖೆಯದ್ದು. ಮಂಗನ ಕಾಯಿಲೆಯನ್ನು ಶಾಶ್ವತವಾಗಿ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಶಿವಮೊಗ್ಗದಲ್ಲಿ ಹೊಸ ಪ್ರಯೋಗಾಲಯ ಸ್ಥಾಪಿಸಲು ಉದ್ದೇಶಿಸಲಾಗಿದೆ. ಅಲ್ಲದೆ, ಈಗಾಗಲೇ ಎರಡು ಬಾರಿ ಔಷಧ ವಿತರಣೆ ಅಭಿಯಾನ ನಡೆಸಲಾಗಿದೆ. ಇನ್ನೊಂದು ಬಾರಿ ನಡೆಸಲಾಗುವುದುಎಂದು ಹೇಳಿದರು.

ರಾಜ್ಯದಲ್ಲಿ ಆಪರೇಶನ್‌ ಕಮಲ ಮಾಡಿ, ಅಧಿಕಾರಕ್ಕೆ ಬರಬೇಕೆಂದು ಯಡಿಯೂರಪ್ಪ ಮತ್ತು ಬಿಜೆಪಿಯವರು ಪ್ರಯತ್ನಿಸುತ್ತಲೇ ಇದ್ದಾರೆ. ಬಿಜೆಪಿಯವರು ಮೈತ್ರಿ ಸರ್ಕಾರ, ಇಂದು-ನಾಳೆ ಬೀಳುತ್ತದೆ ಎಂದೂ ಹೇಳುತ್ತಿದ್ದಾರೆ. ಇದನ್ನು ಕೇಳಿ ಮಾಧ್ಯಮದವರೂ ಸುಸ್ತಾಗಿದ್ದಾರೆ. ಆಪರೇಶನ್‌ ಕಮಲ ವಿಚಾರದಲ್ಲಿ ಎಲ್ಲರೂ ಬೇಸತ್ತಿದ್ದಾರೆ.
–  ಶಿವಾನಂದ ಪಾಟೀಲ, ಆರೋಗ್ಯ ಸಚಿವ.

ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆಯಿಂದ ಮೃತಪಟ್ಟವರ ಕುಟುಂಬಗಳಿಗೆ ವೈಯಕ್ತಿಕವಾಗಿ 50 ಸಾವಿರ ರೂ.ನೀಡಲಾಗುತ್ತಿದೆ.
ಕಾಯಿಲೆ ನಿಯಂತ್ರಣಕ್ಕೂ ಎಲ್ಲ ಕ್ರಮ ಕೈಗೊಳ್ಳಲಾಗುತ್ತಿದೆ.
– ಡಿ.ಸಿ.ತಮ್ಮಣ್ಣ , ಸಾರಿಗೆ ಸಚಿವ.

ಟಾಪ್ ನ್ಯೂಸ್

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.