ತ್ಯಾಗ-ಸೇವಾ ಮನೋಭಾವ ಅಳವಡಿಸಿಕೊಳ್ಳಿ


Team Udayavani, Jan 27, 2019, 6:41 AM IST

shivabsava.jpg

ಅಕ್ಕಿಆಲೂರು: ಭಾರತದಲ್ಲಿ ಜನಿಸಿದ ಪ್ರತಿ ಪ್ರಜೆಗಳು ತ್ಯಾಗ ಮತ್ತು ಸೇವಾ ಮನೋಭಾವದಿಂದ ಬದುಕಿದರೆ ದೇಶ ಜಗತ್ತಿಗೆ ಜಗದ್ಗುರುವಾಗುವುದರಲ್ಲಿ ಸಂಶಯವಿಲ್ಲ ಎಂದು ವಿರಕ್ತಮಠದ ಶಿವಬಸವ ಶ್ರೀಗಳು ಹೇಳಿದರು.

ಪಟ್ಟಣದ ನರಸಿಂಗರಾವ್‌ ದೇಸಾಯಿ ಸಂಯುಕ್ತ ಪಪೂ ಕಾಲೇಜಿನ ಆವರಣದಲ್ಲಿ 70ನೇ ಗಣರಾಜ್ಯೋತ್ಸವದ ಪ್ರಯುಕ್ತ ಗ್ರಾಮ ಪಂಚಾಯತಿ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ಸಾರ್ವಜನಿಕ ಧ್ವಜಾರೋಹಣ ಸಮಾರಂಭದ ಸಾನ್ನಿಧ್ಯವಹಿಸಿ ಆಶೀರ್ವಚನ ನೀಡಿದರು.

ಪ್ರತಿಯೊಬ್ಬರೂ ವೈಯಕ್ತಿಕ ಹಿತಾಸಕ್ತಿಗಾಗಿ ಮಾತ್ರ ಶ್ರಮಿಸದೇ ಭಾರತದ ಮೂಲ ಆಚರಣೆಗಳನ್ನು ಅರಿತು, ಪ್ರಾಮಾಣಿಕ ಸೇವೆ ಸಲ್ಲಿಸಿದರೆ ಭಾರತ ಜಾಗತಿಕಮಟ್ಟದಲ್ಲಿ ಸ್ವಾವಲಂಬಿಯಾಗಿ ಮುನ್ನಡೆಯಬಲ್ಲದು. ವಿಶ್ವದಲ್ಲಿ ಅತೀ ಹೆಚ್ಚು ಯುವಜನಾಂಗ ಹೊಂದಿದ ನಮ್ಮ ದೇಶದಲ್ಲಿ ಬಹುತೇಕ ಯುವಕರಿಗೆ ಭಾರತದ ಸಂವಿಧಾನದ ಮಹತ್ವವೇ ತಿಳಿಯದಿರುವುದು ಬೇಸರದ ಸಂಗತಿ ಎಂದರು.

ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಗ್ರಾಪಂ ಅಧ್ಯಕ್ಷ ಪ್ರದೀಪ ಶೇಷಗಿರಿ, ದೇಶವನ್ನು ಮುನ್ನಡೆಸುವ ಮಹತ್ತರ ಜವಾಬ್ದಾರಿ ಯುವಶಕ್ತಿಯದಾಗಿದ್ದು, ಎಲ್ಲ ರಂಗಗಳಲ್ಲಿ ಉತ್ತಮ ಜ್ಞಾನ ಸಂಪಾದಿಸಿ ದೇಶದ ಆಸ್ತಿಯಾಗಿ ಹೊರಹೊಮ್ಮಬೇಕಾದ ಅಗತ್ಯತೆ ಇಂದಿನ ವಿದ್ಯಾರ್ಥಿಗಳಿಗಿದೆ ಎಂದರು.

ನಂತರ ಬ್ಯಾಡಗಿ ತಾಲೂಕಿನ ಬುಡಪನಹಳ್ಳಿಯ ಸರ್ಕಾರಿ ಪ್ರೌಢ ಶಾಲೆ ವಿದ್ಯಾರ್ಥಿಗಳು ಪ್ರದರ್ಶಿಸಿದ ಕಾರ್ಗಿಲ್‌ ವಿಜಯೋತ್ಸವದ ರೂಪಕ ನೆರೆದಿದ್ದ ಸಾವಿರಾರು ಜನರನ್ನು ಮಂತ್ರಮುಗ್ದಗೊಳಿಸಿತು. ದೇಶ ಕಾಯುವ ಯೋಧರು ವೀರ ಮರಣವನ್ನಪ್ಪಿದಾಗ ಅವರ ಅಂತ್ಯಕ್ರಿಯೆ ನೆರವೇರಿಸುವ ದೃಶ್ಯವಂತೂ ನೆರೆದವರನ್ನು ಭಾವನಾತ್ಮವಾಗಿ ಕಟ್ಟಿ ಹಾಕಿತು. ಶಿರಸಿಯ ವಿಶೇಷ ಚೇತನ ಕಲಾವಿದರಿಂದ ನಡೆದ ಸಂಗೀತ ಕಾರ್ಯಕ್ರಮದಲ್ಲಿ ದೇಶಭಕ್ತಿಗಳನ್ನು ಹಾಡಲಾಯಿತು.

ಇದಕ್ಕೂ ಮುನ್ನ ಪಟ್ಟಣದ 20ಕ್ಕೂ ಹೆಚ್ಚು ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ನಡೆದ ಧ್ವಜವಂದನೆ ಪರೇಡ್‌, ಆಕರ್ಷಕ ಪಥಸಂಚಲನ, ನೇತಾಜಿ ಸುಭಾಸಚಂದ್ರ ಭೋಸ ಯುವಕ ಮಂಡಳದ ಬೈಕ್‌ ಪರೇಡ್‌ ಗಣರಾಜ್ಯೋತ್ಸವದ ಕಳೆ ಹೆಚ್ಚಿಸಿದವು.

ಜಿಪಂ ಸದಸ್ಯ ಟಾಕನಗೌಡ ಪಾಟೀಲ, ಗ್ರಾಪಂ ಉಪಾಧ್ಯಕ್ಷೆ ಸರೋಜಾ ಪಾಟೀಲ, ಬಸನಗೌಡ ಪಾಟೀಲ, ಎಚ್.ಬಿ.ಉಮಾಪತಿ, ಪಿಡಿಒ ಪಿ.ಎಸ್‌.ಬಿಜ್ಜೂರ, ಪ್ರತಾಪ ಎನ್‌.ಎಂ., ಶಿವಕುಮಾರ ದೇಶಮುಖ, ಷಣ್ಮುಖಪ್ಪ ಮುಚ್ಚಂಡಿ, ಬಸವರಾಜ ಕೋರಿ, ನಾಗರಾಜ ಪಾವಲಿ, ಕೃಷ್ಣ ಈಳಗೇರ, ವಿಶ್ವನಾಥ ಭಿಕ್ಷಾವರ್ತಿಮಠ, ಫಕ್ಕೀರಗೌಡ ಪಾಟೀಲ ಸೇರಿದಂತೆ ಗ್ರಾಪಂ ಪದಾಧಿಕಾರಿಗಳು, ಶಾಲಾ-ಕಾಲೇಜು ಸಿಬ್ಬಂದಿವರ್ಗದವರು, ಸಾರ್ವಜನಿಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-nikil

Channapatna; ಜನಾದೇಶಕ್ಕೆ ತಲೆಬಾಗುತ್ತೇನೆ, ಪ‌ಲಾಯನ ಮಾಡಲ್ಲ: ನಿಖಿಲ್‌

1-bank

Karnataka; ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗರೇಕೆ ವಿರಳ? ಆಗಬೇಕಿರುವುದೇನು?

renukaacharya

BJP; ಹರಕುಬಾಯಿ ನಾಯಕರಿಂದಲೇ ಸೋಲು: ರೇಣುಕಾಚಾರ್ಯ ಆಕ್ರೋಶ

Arrest

Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ

1-modi

BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ

Exam 2

SSLC ಪರೀಕ್ಷೆ ನೋಂದಣಿ: ನ.30ರವರೆಗೆ ಅವಧಿ ವಿಸ್ತರಣೆ

R Ashok (2)

R. Ashok; ಪಾಪ, ನಿಖಿಲ್‌ ಅದೃಷ್ಟವೇ ಸರಿಯಿಲ್ಲ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

1-nikil

Channapatna; ಜನಾದೇಶಕ್ಕೆ ತಲೆಬಾಗುತ್ತೇನೆ, ಪ‌ಲಾಯನ ಮಾಡಲ್ಲ: ನಿಖಿಲ್‌

1-bank

Karnataka; ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗರೇಕೆ ವಿರಳ? ಆಗಬೇಕಿರುವುದೇನು?

World Super Kabaddi League: ವಿಶ್ವ ಕಬಡ್ಡಿ ಲೀಗ್‌ಗೆ ಅನುಮತಿ

World Super Kabaddi League: ವಿಶ್ವ ಕಬಡ್ಡಿ ಲೀಗ್‌ಗೆ ಅನುಮತಿ

renukaacharya

BJP; ಹರಕುಬಾಯಿ ನಾಯಕರಿಂದಲೇ ಸೋಲು: ರೇಣುಕಾಚಾರ್ಯ ಆಕ್ರೋಶ

Arrest

Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.