ಅರಮನೆ ನಗರಿಯಲ್ಲಿ ಗಣರಾಜ್ಯೋತ್ಸವ ಸಡಗರ


Team Udayavani, Jan 27, 2019, 11:07 AM IST

mysore.jpg

ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ 70ನೇ ಗಣರಾಜ್ಯೋತ್ಸವ ಆಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಜಿಲ್ಲಾಡಳಿತದಿಂದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಆಯೋಜಿಸಿದ್ದ 70ನೇ ಗಣರಾಜ್ಯೋತ್ಸವಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸಲ್ಲಿಸಿದರು.

ಮೈಸೂರು ವಿವಿ: ಮೈಸೂರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾನಸ ಗಂಗೋತ್ರಿಯ ಕ್ರಾಫ‌ರ್ಡ್‌ಭವನದ ಮುಂಭಾಗ ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್‌ ಕುಮಾರ್‌ ಧ್ವಜಾರೋಹಣ ಮಾಡಿದರು. ನೈಋತ್ಯ ರೈಲ್ವೆ ಮೈಸೂರು ವಿಭಾಗೀಯ ಕಚೇರಿಯಲ್ಲಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕಿ ಅಪರ್ಣಾ ಗರ್ಗ್‌ ಧ್ವಜಾರೋಹಣ ಮಾಡಿದರು.

ಮೈಸೂರು ವಿವಿ ಅಂಬೇಡ್ಕರ್‌ ಸಂಶೋಧನ ಹಾಗೂ ವಿಸ್ತರಣ ಕೇಂದ್ರದಲ್ಲಿ ಗಣರಾಜ್ಯದ ಪರಿಕಲ್ಪನೆ, ಮಹತ್ವ ಮತ್ತು ಪ್ರಸ್ತುತ ಸವಾಲುಗಳು: ಭಾರತದ ಸಂದರ್ಭ ವಿಷಯ ಕುರಿತು ವಿಶೇಷ ಉಪನ್ಯಾಸ ಹಾಗೂ ಮುಕ್ತ ಸಂವಾದ ನಡೆಯಿತು.
ಸ್ವಾತಂತ್ರ್ಯ ಹೋರಾಟಗಾರರ ಸಂಘ: ಮೈಸೂರು ಜಿಲ್ಲೆ ಮತ್ತು ನಗರ ಸ್ವಾತಂತ್ರ್ಯ ಹೋರಾಟಗಾರರ ಸಂಘದಿಂದ ನಗರದ ಸುಬ್ಬರಾಯನ ಕೆರೆಯಲ್ಲಿ ಗಣ ರಾಜ್ಯೋತ್ಸವದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ಮಾಡಲಾಯಿತು. ಸಂಘದ ಅಧ್ಯಕ್ಷರಾದ ಡಾ.ಎಂ.ಜಿ. ಕೃಷ್ಣಮೂರ್ತಿ ಮೊದಲಾದವರು ಹಾಜರಿದ್ದರು.

ಜೆಎಸ್‌ಎಸ್‌ ಕಾಲೇಜು: ನಗರದ ಬಿ.ಎನ್‌.ರಸ್ತೆ ಯಲ್ಲಿರುವ ಜೆಎಸ್‌ಎಸ್‌ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನಲ್ಲಿ ಏರ್ಪಡಿಸಿದ್ದ ಗಣರಾಜ್ಯೋ ತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಮುಕ್ತ ವಿವಿ ಸಹಾಯಕ ಪ್ರಾಧ್ಯಾಪಕಿ ಡಾ.ಜ್ಯೋತಿಶಂಕರ್‌, ಮೊದಲಿಗೆ ನಾವು ಈ ನೆಲದಲ್ಲಿ ಹುಟ್ಟಿದ್ದೇವೆ ಎಂಬ ಹೆಮ್ಮೆ ನಮ್ಮದಾಗಬೇಕಿದೆ, ತಂದೆ – ತಾಯಿ, ಗುರು, ಭಾಷೆ ಮತ್ತು ನೆಲವನ್ನು ಗೌರವಿಸುವುದರಲ್ಲಿ ನಮ್ಮ ಘನತೆಯಿದೆ. ಯಾವ ದೃಷ್ಟಿಯಿಂದ ನೋಡಿದರೂ ಭಾರತ ಸಮೃದ್ಧವಾಗಿದೆ, ಜಗತ್ತಿನ ಯಾವ ಜ್ಞಾನಗಳೂ ಭಾರತಕ್ಕೆ ಹೊಸತಲ್ಲ. ನಮ್ಮ ಇತಿಹಾಸ ಹೂವಿನ ಹಾಸಿಗೆಯಲ್ಲ, ನೆಲದ ಶ್ರೀಮಂತಿಕೆಗಿಂತ ಅನುಭವಿಸಿದ ಸಂಕಟಗಳ ಅರಿವು ನಮಗಿರಬೇಕಿದೆ ಎಂದು ನುಡಿದರು.

ಜೆಎಸ್‌ಎಸ್‌ ಕಾಲೇಜು ಸಮುಚ್ಛಯಗಳ ಮುಖ್ಯ ಕಾರ್ಯ ನಿರ್ವಾಹಕ ಪ್ರೊ ಬಿ.ವಿ. ಸಾಂಬಶಿವಯ್ಯ ಧ್ವಜಾರೋಹಣ ನೆರವೇರಿಸಿದರು, ಪದವಿ ಕಾಲೇಜಿನ ಪ್ರಾಚಾರ್ಯ ಪ್ರೊ. ಎಂ. ಮಹದೇವಪ್ಪ, ಪಿಯು ಕಾಲೇಜಿನ ಪ್ರಾಂಶುಪಾಲ ಎಸ್‌.ವಿ. ಸೋಮಶೇಖರ್‌ಹಾಜರಿದ್ದರು. ಸಮಾರಂಭದಲ್ಲಿ ಎನ್‌ಸಿ ಸಿ ಕೆಡೆಟ್‌ಗಳು ಆಕರ್ಷಕ ಪಥಸಂಚಲನ ನಡೆಸಿದರು.

ಶಾರದಾ ವಿಲಾಸ ಸಂಸ್ಥೆ: ಶಾರದಾ ವಿಲಾಸ ವಿದ್ಯಾ ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆ ಗಣರಾಜ್ಯೋತ್ಸವ ದಲ್ಲಿ ಸಂಸ್ಥೆಯ ಅಧ್ಯಕ್ಷ ಬಿ.ಎಸ್‌. ಪಾರ್ಥಸಾರಥಿ, ಧ್ವಜಾರೋಹಣ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿದ್ದ ಬೆಂಗಳೂರು ವಿವಿ ವಿಶ್ರಾಂತ ಕುಲಪತಿ ಹಾಗೂ ನ್ಯಾಕ್‌ ಸಮಿತಿ ಮಾಜಿ ನಿರ್ದೇಶಕ ಪ್ರೊ.ಎಚ್.ಎ.ರಂಗನಾಥ್‌ ಮಾತನಾಡಿ, ಭಾರತ ವೈವಿಧ್ಯತೆಯಲ್ಲಿ ಏಕತೆ ಕಂಡ ಏಕೈಕ ಹೆಮ್ಮೆಯ ದೇಶವಾಗಿದ್ದು, ಸರ್ವರಿಗೂ ಸಮಾನತೆ, ಸಹಬಾಳ್ವೆಗೆ ಅವಕಾಶವನ್ನು ದೊರಕಿಸಿಕೊಟ್ಟಿದೆ. ಜಾತಿ, ಭೇದ, ವರ್ಗ, ಮತಗಳ ಘರ್ಷಣೆಯಿಲ್ಲದೆ ಒಗ್ಗಟ್ಟಿನಿಂದ ಗಣತಂತ್ರ ಹಬ್ಬವನ್ನು ಆಚರಿಸುವ ರಾಷ್ಟ್ರೀಯ ಹಬ್ಬವೇ ಗಣರಾಜ್ಯೋತ್ಸವ ಎಂದರು.

ಸ್ವಾತಂತ್ರ್ಯ, ಸಮಾನತೆ, ಸೋದರತ್ವದ ಮತ್ತೂಂದು ಹೆಸರೇ ನ್ಯಾಯ. ಈ ಹಿನ್ನೆಲೆಯಲ್ಲಿ ಇಂದಿನ ಯುವಕರು ದೇಶವನ್ನು ಮುನ್ನಡೆಸಲು ಒಗ್ಗಟ್ಟಿನಿಂದ ರಾಷ್ಟ್ರೀಯ ಹಬ್ಬಗಳಲ್ಲಿ ಭಾಗವಹಿಸಬೇಕಿದೆ ಎಂದರು. ಸಂಸ್ಥೆಯ ಗೌರವ ಕಾರ್ಯದರ್ಶಿ ಎಚ್.ಕೆ. ಶ್ರೀನಾಥ್‌, ಆಡಳಿತ ಮಂಡಳಿ ಸದಸ್ಯರಾದ ವೈ.ಕೆ.ಭಾಸ್ಕರ್‌, ಎಸ್‌. ನಾಗರಾಜ್‌, ಹರೀಶ್‌, ಕೃಷ್ಣ, ಡೋಂಗ್ರೆ ಉಪಸ್ಥಿತರಿದ್ದರು.

ಮರಿಮಲ್ಲಪ್ಪ ಸಂಸ್ಥೆ: ಮರಿಮಲ್ಲಪ್ಪ ವಿದ್ಯಾಸಂಸ್ಥೆಯಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಸಂಸ್ಥೆಯ ಅಧ್ಯಕ್ಷ ಎಸ್‌. ಪರಮಶಿವಯ್ಯ ಅಧ್ಯಕ್ಷತೆವಹಿಸಿದ್ದರು. ನಗರದ ಬೋಗಾದಿ ಮುಖ್ಯರಸ್ತೆಯಲ್ಲಿರುವ ಗಂಗೋತ್ರಿ ಪಬ್ಲಿಕ್‌ ಶಾಲೆ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ 70ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಟಿ.ರಂಗಪ್ಪ ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಅತಿಥಿಯಾಗಿದ್ದ ಭಾರತ ವಿಕಾಸ ಪರಿಷದ್‌ನ ಕರ್ನಾಟಕ ದಕ್ಷಿಣ ಪ್ರಾಂತದ ಸಂಘಟನಾ ಕಾರ್ಯ ದರ್ಶಿ ನಾಗಭೂಷಣ್‌ ಮಾತ ನಾಡಿ, ಒತ್ತಡಕ್ಕೆ ಮಣಿಯದೆ ಶ್ರದ್ಧಾಪೂರ್ವಕವಾಗಿ ಆಸಕ್ತಿಯಿಂದ ಕಲಿತಾಗ ಮಾತ್ರ ವಿದ್ಯೆಯನ್ನು ಗಳಿಸ ಬಹುದು ಎಂದು ಹೇಳಿದರು.

ಭಾರತ ವಿಕಾಸ ಪರಿಷದ್‌: ಭಾರತ ವಿಕಾಸ ಪರಿಷದ್‌ ಪರಮಹಂಸ ಶಾಖೆಯ ಅಧ್ಯಕ್ಷ ಜಗದೀಶ್‌, ಸಂಸ್ಕೃತ ಉಪನ್ಯಾಸಕ ಡಾ.ಪ್ರದೀಪ್‌ ದೀಕ್ಷಿತ್‌ ಮಾತನಾಡಿದರು. ಸಂಸ್ಥೆಯ ಆಡಳಿತಾಧಿಕಾರಿ ಕಾಂತಿ ನಾಯಕ್‌, ಶಾಲಾ ಮುಖ್ಯೋಪಾಧ್ಯಾಯಿನಿ ಝರೀನಾ ಬಾಬುಲ್‌, ಕಾಲೇಜಿನ ಪ್ರಾಂಶುಪಾಲ ಸುನಿಲ್‌ ಕುಮಾರ್‌ ಉಪಸ್ಥಿತರಿದ್ದರು. ಇದೇ ವೇಳೆ ಪ್ರತಿಭಾನ್ವಿತ ವಿದ್ಯಾರ್ಥಿ ಗಳನ್ನು ಪುರಸ್ಕರಿಸಲಾಯಿತು.

ನಮೋ ಭಾರತ: ನಮೋ ಭಾರತ ಮೈಸೂರು ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ಫೀಲ್ಡ್‌ ಮಾರ್ಷಲ್‌ ವೃತ್ತದಿಂದ ದೇಶಕ್ಕಾಗಿ ನಡಿಗೆ ತಿರಂಗಾ ಯಾತ್ರೆ ನಡೆಸಲಾಯಿತು. ನಿವೃತ್ತ ಸೇನಾ ಬ್ರಿಗೇಡಿಯ್‌ ಪಿ.ಡಿ. ಮೇದಪ್ಪ ಚಾಲನೆ ನೀಡಿದರು.ಸಂಜೆ ಕಲಾಮಂದಿರ ಸೇರಿದಂತೆ ನಗರದ ವಿವಿಧೆಡೆ ಗಣರಾಜ್ಯೋತ್ಸವ ನಿಮಿತ್ತ ಸಾಂಸ್ಕೃತಿಕ ಕಾರ್ಯ ಕ್ರಮಗಳು ನಡೆದವು.

ಟಾಪ್ ನ್ಯೂಸ್

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.