ಇಂದಿರಾ ಕ್ಯಾಂಟೀನ್ಗೆ ಸಚಿವ ಜಮೀರ್ ಚಾಲನೆ
Team Udayavani, Jan 27, 2019, 11:33 AM IST
ಹಾವೇರಿ: ಶ್ರಮಿಕರಿಗೆ, ಬಡವರಿಗೆ ಕಡಿಮೆ ದರದಲ್ಲಿ ಉಪಹಾರ, ಊಟ ನೀಡುವ ರಾಜ್ಯ ಸರ್ಕಾರ ಪ್ರಾಯೋಜಿತ ಇಂದಿರಾ ಕ್ಯಾಂಟೀನ್ಗೆ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದಖಾನ್ ಚಾಲನೆ ನೀಡಿದರು.
ಸ್ವತಃ ಹಣ ನೀಡಿ ಇಡ್ಲಿ-ವಡೆ, ಪೊಂಗಲ್, ಚಟ್ನಿ ಖರೀದಿಸಿ ಸವಿದ ಸಚಿವರು, ಜಿಲ್ಲೆಯಲ್ಲಿ ಒಟ್ಟು ಎಂಟು ಇಂದಿರಾ ಕ್ಯಾಂಟೀನ್ಗಳು ಮಂಜೂರಾಗಿದ್ದು, ಮೊದಲನೆದಾಗಿ ಹಾವೇರಿ ಇಂದಿರಾ ಕ್ಯಾಂಟಿನ್ ಇಂದು ಕಾರ್ಯಾರಂಭಗೊಳಿಸಲಾಗಿದೆ. ಶೀಘ್ರದಲ್ಲೇ ರಾಣಿಬೆನ್ನೂರಲ್ಲಿ ಕಾರ್ಯಾರಂಭಕ್ಕೆ ಸಿದ್ಧತೆ ನಡೆಸಲಾಗಿದೆ. ರಾಣಿಬೆನ್ನೂರಿನಲ್ಲಿ ಎರಡು, ಉಳಿದ ತಾಲೂಕಿನಲ್ಲಿ ತಲಾ ಒಂದರಂತೆ ಎಂಟು ಇಂದಿರಾ ಕ್ಯಾಂಟೀನ್ಗಳನ್ನು ಹಂತ ಹಂತವಾಗಿ ಕಾರ್ಯಾರಂಭಗೊಳಿಸಲಾಗುವುದು ಎಂದರು.
ಜಿಲ್ಲೆಯ ಇಂದಿರಾ ಕ್ಯಾಂಟೀನ್ ನಿರ್ವಹಣೆಯ ಹೊಣೆ ಹೊತ್ತಿರುವ ಬೆಂಗಳೂರು ಮೂಲದ ನೌ ಪ್ರಯಾಸ್ ಕಂಪನಿಯ ಯೋಜನಾ ನಿರ್ದೇಶಕ ಶೋಯಬ್ ಅಹ್ಮದ್, ತಮ್ಮ ಕಂಪನಿ ವತಿಯಿಂದ ಚಿಕ್ಕಬಳ್ಳಾಪುರ ಮತ್ತು ಹಾವೇರಿ ಜಿಲ್ಲೆಯ ಇಂದಿರಾ ಕ್ಯಾಂಟೀನ್ಗಳ ನಿರ್ವಹಣೆಯ ಜವಾಬ್ದಾರಿಯನ್ನು ತೆಗೆದುಕೊಳ್ಳಲಾಗಿದೆ. ಬೆಳಗ್ಗೆ 500 ಜನರಿಗೆ ತಲಾ ಐದು ರೂ. ದರದಲ್ಲಿ ಉಪಹಾರ ಮಧ್ಯಾಹ್ನ ಹಾಗೂ ಸಂಜೆ 500 ಜನರಿಗೆ ಹತ್ತು ರೂ. ದರದಲ್ಲಿ ಊಟ ಪೂರೈಸಲಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಪಂ ಅಧ್ಯಕ್ಷ ಎಸ್.ಕೆ.ಕರಿಯಣ್ಣನವರ, ಸಂಸದ ಶಿವಕುಮಾರ ಉದಾಸಿ, ಶಾಸಕ ನೆಹರು ಓಲೇಕಾರ, ಜಿಪಂ ಉಪಾಧ್ಯಕ್ಷೆ ದೀಪಾ ಅತ್ತಿಗೇರಿ, ಜಿಲ್ಲಾಧಿಕಾರಿ ಡಾ| ಎಂ.ವಿ.ವೆಂಕಟೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ, ಮಾಜಿ ಸಚಿವ ರುದ್ರಪ್ಪ ಲಮಾಣಿ ಇತರರು ಉಪಹಾರ ಸವಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.