ಪ್ರತಿಗಾಮಿ ಮನಸ್ಸುಗಳಿಂದ ತಪ್ಪಿದ ಭಾರತರತ್ನ
Team Udayavani, Jan 28, 2019, 1:41 AM IST
ಕೂಡಲಸಂಗಮ: ‘ಸಮಾನತೆಯ ಪ್ರತಿಪಾದಕರಾಗಿದ್ದ ಸಿದ್ಧಗಂಗಾ ಮಠದ ಡಾ| ಶಿವಕುಮಾರ ಶ್ರೀಗಳು ಬಸವಣ್ಣನವರ ಅನುಯಾಯಿಗಳಾಗಿದ್ದ ಕಾರಣಕ್ಕಾಗಿಯೇ ಕೆಲವೊಂದು ಪ್ರತಿಗಾಮಿ ಮನಸ್ಸುಗಳು ಭಾರತರತ್ನ ತಪ್ಪಿಸಿರುವ ಶಂಕೆಯಿದೆ’ ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಿಂದ ಆಯ್ಕೆಯಾದ ಕೇಂದ್ರ ಸಚಿವರು ಶ್ರೀಗಳ ಬಗ್ಗೆ ಗೌರವ ಹೊಂದಿದ್ದರೆ ಕೂಡಲೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವ ಮೂಲಕ ಶ್ರೀಗಳ, ಭಕ್ತರ ಪರ ನಿಲ್ಲಬೇಕು ಎಂದರು. ರಾಜ್ಯದಿಂದ ಆಯ್ಕೆಯಾದ ಲೋಕಸಭಾ ಸದಸ್ಯರು ಸಹ ಸಿದ್ಧಗಂಗಾ ಮಠದ ಪ್ರಸಾದದ ಋಣದಲ್ಲಿದ್ದು, ಈ ಋಣ ತೀರಿಸಲು ಕೇಂದ್ರ ಸರ್ಕಾರಕ್ಕೆ ಹಕ್ಕೊತ್ತಾಯ ಮಾಡಬೇಕು. ಸಿದ್ಧಗಂಗಾ ಶ್ರೀಗಳಿಗೆ ಮರಣೋತ್ತರ ಭಾರತರತ್ನ ಪ್ರಶಸ್ತಿ ಘೋಷಿಸುವ ಮೂಲಕ ಪ್ರಧಾನಿ ಮೋದಿ ಗೌರವ ಹೆಚ್ಚಿಸಿಕೊಳ್ಳಬೇಕು. ಇಲ್ಲವಾದರೆ ಜನರ ವಿಶ್ವಾಸ, ನಂಬಿಕೆ ಕಳೆದುಕೊಳ್ಳುವ ಸಂದರ್ಭ ಬರಬಹುದೆಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.