ಹೆಮ್ಮಾಡಿ: ನೀರಿನ ಸಮಸ್ಯೆಗೆ ಬೇಕಿದೆ ಶಾಶ್ವತ ಪರಿಹಾರ


Team Udayavani, Jan 28, 2019, 2:28 AM IST

hemmadi-village-panchayath-600.jpg

ಹೆಮ್ಮಾಡಿ: ಹೆದ್ದಾರಿಗೆ ಹೊಂದಿಕೊಂಡಿರುವ ಹೆಮ್ಮಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ದಿನೇ ದಿನೇ ಬಿಗಡಾಯಿಸುತ್ತಿದೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅಥವಾ ‘ಜಲಧಾರೆ’ ಯೋಜನೆ ಇಲ್ಲಿ ಅನುಷ್ಠಾನಗೊಳಿಸಿದರೆ ನೀರಿನ ಸಮಸ್ಯೆಗೆ ಮುಕ್ತಿ ಸಿಗಲಿದೆ. ಇಲ್ಲಿನ ಹೆಚ್ಚಿನ ಎಲ್ಲ  ಮನೆಗಳಲ್ಲಿಯೂ ಬಾವಿಯಿದೆ. ಆದರೆ ಉಪ್ಪು ನೀರಿನ ಪ್ರಭಾವದಿಂದ ಬಾವಿ ನೀರು ಕುಡಿಯಲು ಯೋಗ್ಯವಿಲ್ಲ. ಕೆಲವು ಬಾವಿಗಳು ಈಗಾಗಲೇ ಬತ್ತಿ ಹೋಗಿವೆೆ.

ಪ್ರತೀ ವರ್ಷ ಫೆಬ್ರವರಿ – ಮಾರ್ಚ್‌ ಆರಂಭವಾಗುತ್ತಿದ್ದಂತೆ ಗ್ರಾಮದಲ್ಲಿ ನೀರಿನ ಸಮಸ್ಯೆ ಉದ್ಭವವಾಗುತ್ತದೆ. ಕನ್ನಡಕುದ್ರು, ಜಾಲಾಡಿ, ಕಟ್ಟು, ಬುಗುರಿಕಡು ಭಾಗಗಳಲ್ಲಿ ಸಮಸ್ಯೆ ತೀವ್ರವಾಗಿದೆ. ಮಳೆಗಾಲ ಆರಂಭವಾಗುವಲ್ಲಿಯವರೆಗೂ ಸಮಸ್ಯೆಗೆ ಪರಿಹಾರ ಮಾತ್ರ ಮರೀಚಿಕೆ. ಹಿಂದೆ ಹೆಮ್ಮಾಡಿ, ಕಟ್‌ಬೆಲ್ತೂರು ಮತ್ತು ದೇವಲ್ಕುಂದಗಳು ಒಂದೇ ವ್ಯಾಪ್ತಿಯಲ್ಲಿದ್ದಾಗ ಒಟ್ಟು 3 ಕೊಳವೆ ಬಾವಿಗಳಿಂದ ಮೂರು ಗ್ರಾಮಗಳ ಜನರಿಗೂ ನೀರು ಪೂರೈಕೆಯಾಗುತ್ತಿತ್ತು. ಆದರೆ ಈಗ 2 ಕೊಳವೆ ಬಾವಿಗಳು ಕಟ್‌ ಬೆಲ್ತೂರು ಪಂ. ವ್ಯಾಪ್ತಿಯಲ್ಲಿ ಬರುವುದರಿಂದ ಹೆಮ್ಮಾಡಿಗೆ ಅವುಗಳ ಪ್ರಯೋಜನ ಸಿಗುತ್ತಿಲ್ಲ.

ಶಾಶ್ವತ ಪರಿಹಾರ ಅಗತ್ಯ
ಉಪ್ಪು ನೀರಿನ ಸಮಸ್ಯೆ ಗಂಭೀರವಾಗಿರುವುದರಿಂದ ಇಲ್ಲಿಗೆ ಶಾಶ್ವತ ಪರಿಹಾರ ಅಗತ್ಯವಾಗಿ ಬೇಕಿದೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಲ್ಲಿ ಹೆಮ್ಮಾಡಿಯನ್ನು ಸೇರಿಸಲಾಗಿತ್ತು. ಅನಂತರ ಇದರಿಂದ ಕೈ ಬಿಡಲಾಗಿದೆ. ಸದ್ಯ ಜಲಧಾರೆ ಎಂಬ ಹೊಸ ಯೋಜನೆ ಆರಂಭಿಸಲಾಗಿದ್ದು, ಇದರಿಂದಲಾದರೂ ಇಲ್ಲಿನ ಜನರ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿ ಎನ್ನುವುದು ಗ್ರಾಮಸ್ಥರ ಆಶಯ.

170 ಮನೆಗಳಿಗೆ ಮಾತ್ರ ಸಂಪರ್ಕ
ಹೆಮ್ಮಾಡಿ ಗ್ರಾಮದಲ್ಲಿ ಸುಮಾರು 6,000ಕ್ಕೂ ಹೆಚ್ಚು ಮಂದಿ ಗ್ರಾಮಸ್ಥರಿದ್ದಾರೆ. ಆ ಪೈಕಿ 1,000ಕ್ಕೂ ಮಿಕ್ಕಿ ಮನೆಗಳಿದ್ದು, ಗ್ರಾ. ಪಂ. ನಿಂದ 170 ಮನೆಗಳಿಗೆ ನೀರಿನ ಸಂಪರ್ಕ ಕಲ್ಪಿಸಲಾಗಿದೆ. ಪಂ.ನಿಂದ 1 ಕೊಳವೆ ಹಾಗೂ ಸಂತೋಷ ನಗರದಲ್ಲಿ 1 ತೆರೆದ ಬಾವಿಯಿದೆ. ಬಾಕಿ ಉಳಿದ ಮನೆಗಳಲ್ಲಿ  ಸ್ವಂತ ಬಾವಿ ಇದೆ. ಆದರೆ ಉಪ್ಪು ನೀರಿನ ಪ್ರಭಾವದಿಂದ ಸಮಸ್ಯೆಯಾಗಿದೆ.

ಪರಿಹಾರಕ್ಕೆ ಪ್ರಯತ್ನ
ಕ್ಷೇತ್ರದ ಕೆಲವು ಗ್ರಾಮಗಳನ್ನು ಜಲಧಾರೆ ಯೋಜನೆಯಡಿ ನೀರಿನ ಸಮಸ್ಯೆ ಪರಿಹಾರಕ್ಕೆ ಆಯ್ಕೆ ಮಾಡಲಾಗಿದೆ. ಅದರಲ್ಲಿ ತಲ್ಲೂರು, ಹೆಮ್ಮಾಡಿಯನ್ನು ಕೂಡ ಸೇರಿಸಲಾಗಿದೆ. ಶೀಘ್ರ ಗ್ರಾ.ಪಂ. ಅಧಿಕಾರಿಗಳನ್ನು ಕರೆದು ಚರ್ಚಿಸಿ, ನಿರ್ಧಾರ ಕೈಗೊಳ್ಳಲಾಗುವುದು. ಹಂತ-ಹಂತವಾಗಿ ಕ್ಷೇತ್ರದ ಎಲ್ಲ ಗ್ರಾ.ಪಂ.ಗಳ ನೀರಿನ ಸಮಸ್ಯೆ ಪರಿಹರಿಸಲಾಗುವುದು.
– ಬಿ.ಎಂ.ಸುಕುಮಾರ ಶೆಟ್ಟಿ, ಶಾಸಕರು, ಬೈಂದೂರು.

— ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

7-

Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

Jharkhand Polls: Coalition of INDIA to power in tribal state; A setback for BJP

Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ

Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್‌ ಅಘಾಡಿಗೆ ಮುಖಭಂಗ

Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್‌ ಅಘಾಡಿಗೆ ಮುಖಭಂಗ

banner

Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್

Aaram Aravinda Swamy Movie Review

Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫ‌ನ್‌ರೈಡ್‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-karkala

Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Naxal-encounter-Vikram-1

Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ

Kota-Shrinivas

Udupi: ಟವರ್‌ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್‌ ದಾವೆ: ಸಂಸದ ಕೋಟ

MUST WATCH

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

ಹೊಸ ಸೇರ್ಪಡೆ

7-

Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?

6-bng

Bengaluru: ಬಸ್‌ಗಳಲ್ಲಿ ಮೊಬೈಲ್‌ ಕಳ್ಳತನ: ಇಬ್ಬರು ಆರೋಪಿಗಳ ಸೆರೆ‌, 60 ಫೋನ್‌ ಜಪ್ತಿ

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

5-bng

Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ

4-bng

Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.