‘ಎಲೆಕ್ಷನ್ ಸೌಂದರ್ಯ ಸ್ಪರ್ಧೆಯಲ್ಲ’: ಪ್ರಿಯಾಂಕಗೆ ಮೋದಿ ಟಾಂಗ್
Team Udayavani, Jan 28, 2019, 4:29 AM IST
ಕೊಲ್ಕೊತ್ತಾ: ಪ್ರಿಯಾಂಕಾ ಗಾಂಧಿಯವರನ್ನು ಕಾಂಗ್ರೆಸ್ ಪಕ್ಷವು ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಿದ ಬೆನ್ನಲ್ಲೇ ಬಿ.ಜೆ.ಪಿ. ಮತ್ತು ಅದರ ಮಿತ್ರ ಪಕ್ಷಗಳಲ್ಲಿ ಅಳುಕು ಹುಟ್ಟಿದಂತಿದೆ. ಪ್ರಿಯಾಂಕ ಗಾಂಧಿ ಸಕ್ರಿಯ ರಾಜಕಾರಣಕ್ಕೆ ಪ್ರವೇಶಿಸಿದ ಬಳಿಕ ಅವರ ವಿರುದ್ಧ ವೈಯಕ್ತಿಕ ಟೀಕೆಗಳ ಪ್ರಕರಣಗಳು ವರದಿಯಾಗುತ್ತಲೇ ಇದೆ.
ಇದಕ್ಕೆ ಹೊಸ ಸೇರ್ಪಡೆಯೆಂಬಂತೆ ಬಿಹಾರದ ಉಪ ಮುಖ್ಯಮಂತ್ರಿ ಮತ್ತು ಬಿ.ಜೆ.ಪಿ.ಯ ಹಿರಿಯ ನಾಯಕ ಸುಶೀಲ್ ಮೋದಿ ಅವರು ಪ್ರಿಯಾಂಕ ಗಾಂಧಿ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ. ‘ಚುನಾವಣೆ ಎಂಬುದು ಸೌಂದರ್ಯ ಸ್ಪರ್ಧೆಯಲ್ಲ, ಮತದಾರರು ಅಭ್ಯರ್ಥಿಯ ಸಾಧನೆಯನ್ನು ನೋಡಿ ಮತ ಹಾಕುತ್ತಾರೆಯೇ ಹೊರತು ಅಭ್ಯರ್ಥಿಯ ಬಾಹ್ಯ ಸೌಂದರ್ಯಕ್ಕೆ ಮರುಳಾಗಿ ಯಾರೂ ಮತ ಹಾಕುವುದಿಲ್ಲ…’ ಎಂದು ಅವರು ಹೇಳಿಕೆ ನೀಡಿದ್ದಾರೆ.
‘ಚುನಾವಣೆಯೆಂಬುದು ಕುಸ್ತಿ ಪಂದ್ಯಾಟವೂ ಅಲ್ಲ, ಸೌಂದರ್ಯ ಸ್ಪರ್ಧೆಯೂ ಅಲ್ಲ, ಅಥವಾ ಇನ್ಯಾವುದೇ ರೀತಿಯ ಸ್ಪರ್ಧಾ ಕಣವೂ ಇದಲ್ಲ’ ಎಂದು ಸುಶೀಲ್ ಮೋದಿ ಅವರು ಕೊಲ್ಕೊತ್ತಾದ ಹೌರಾದಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತಾ ನುಡಿದರು.
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಪ್ರಣಬ್ ಮುಖರ್ಜಿಯವರಿಗೆ ಪ್ರಧಾನ ಮಂತ್ರಿ ಪಟ್ಟ ತಪ್ಪಿಸುವ ಮೂಲಕ ಗಾಂಧಿ ಕುಟುಂಬವು ತನ್ನದೇ ಪಕ್ಷದ ಹಿರಿಯ ನಾಯಕರಿಗೆ ಅನ್ಯಾಯವೆಸಗಿದೆ ಎಂಬ ಗಂಭೀರ ಆರೋಪವನ್ನೂ ಸುಶೀಲ್ ಮೋದಿ ಇದೇ ಸಂದರ್ಭದಲ್ಲಿ ಮಾಡಿದರು. ಇಂತಹ ಹಿರಿಯ ನಾಯಕರಿಗೆ ಭಾರತ ರತ್ನ ನೀಡುವ ಮೂಲಕ ಪ್ರಣಬ್ ಅವರ ಸಾಧನೆಯನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಗುರುತಿಸಿದೆ ಅದಕ್ಕಾಗಿ ನಾನು ಕೇಂದ್ರ ಸರಕಾರವನ್ನು ಅಭಿನಂದಿಸುತ್ತೇನೆ ಎಂದು ಅವರು ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
MUST WATCH
ಹೊಸ ಸೇರ್ಪಡೆ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Discipline: ಬದುಕಿನಲ್ಲಿ ಶಿಸ್ತಿರಲಿ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ
Perth test: ಜೈಸ್ವಾಲ್-ರಾಹುಲ್ ಅಜೇಯ ಆಟ; ಪರ್ತ್ ನಲ್ಲಿ ಭಾರತದ ಮೇಲಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.