ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿ
Team Udayavani, Jan 28, 2019, 7:20 AM IST
ದೇವನಹಳ್ಳಿ: ಮುಂಬರುವ ಲೋಕಸಭಾ ಚುನಾವಣೆ ವೇಳೆಗೆ ಕಾಂಗ್ರೆಸ್ ಪಕ್ಷ ಸಂಘಟಿಸಿ, ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಬೇ ಕೆಂದು ವಸತಿ ಸಚಿವ ಎಂ.ಟಿ.ಬಿ. ನಾಗರಾಜ್ ಕಾರ್ಯಕರ್ತರಿಗೆ ಸೂಚನೆ ನೀಡಿದರು. ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸಮಾರಂಭದಲ್ಲಿ ವಿಜಯಪುರ ಮತ್ತು ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.
ಚುನಾವಣೆಗೆ ಸಿದ್ಧರಾಗಿ: ಪಕ್ಷದ ಕಾರ್ಯ ಕರ್ತರು ಮತ್ತು ಮುಖಂಡರು ಒಗ್ಗಟ್ಟಿನಿಂದ ಪಕ್ಷವನ್ನು ಸಂಘಟನೆ ಮಾಡಿ, ಮಾರ್ಚ್ ಮೊದಲ ವಾರ ಅಥವಾ ಎರಡನೇ ವಾರದಲ್ಲಿ ಘೋಷಣೆಯಾಗಲಿರುವ ಲೋಕಸಭಾ ಚುನಾ ವಣೆಗೆ ಸಿದ್ಧರಾಗಬೇಕು. ಅದಕ್ಕಾಗಿ, ಈಗಿ ನಿಂದಲೇ ಪಕ್ಷ ಬಲವರ್ಧನೆಗೆ ಆದ್ಯತೆ ನೀಡಬೇಕು ಎಂದು ಹೇಳಿದರು.
ಸೂರಿಗೆ ಆದ್ಯತೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕೂ ತಾಲೂಕುಗಳಲ್ಲಿ ಪಕ್ಷವನ್ನು ಸದೃಢಗೊಳಿಸಿದರೆ ನಮ್ಮ ಲೋಕಸಭಾ ಸದಸ್ಯ ರನ್ನು ಮತ್ತೆ ಗೆಲ್ಲಿಸಿಕೊಳ್ಳಲು ಅನುಕೂಲ ವಾಗುತ್ತದೆ. ಈಗಾಗಲೇ ವೀರಪ್ಪ ಮೊಯ್ಲಿ ಅವರು ಸಂಸದರಾಗಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ತಾವು ಮೈತ್ರಿ ಸರ್ಕಾರದಲ್ಲಿ ವಸತಿ ಸಚಿವರಾಗಿ ನೇಮಕವಾಗಿರುವುದ ರಿಂದ ಹೆಚ್ಚಿನ ಮನೆಗಳಿಗೆ ಆದ್ಯತೆ ನೀಡಲಾ ಗುವುದು ಎಂದು ಭರವಸೆ ನೀಡಿದರು.
20 ಲಕ್ಷ ಜನರಿಗೆ ಗುಂಪು ಮನೆ: ಇನ್ನೆರಡು ವರ್ಷಗಳಲ್ಲಿ ವಸತಿ ಯೋಜನೆಯಡಿ ಸುಮಾರು 20 ಲಕ್ಷ ಜನರಿಗೆ ಗುಂಪು ಮನೆ ನಿರ್ಮಾಣ ಮಾಡಲು ಆದ್ಯತೆ ನೀಡಲಾ ಗುವುದು. ಅರ್ಹ ಬಡವರನ್ನು ಗುರುತಿಸಿ ವಸತಿ ಸಿಗುವಂತೆ ಮಾಡಬೇಕು. ಈಗಾಗಲೇ ವಸತಿ ಇಲಾಖೆಗೆ ಕಾಯಕಲ್ಪ ರೂಪಿಸಲಾ ಗುತ್ತಿದೆ. ಕಳೆದ ಸಿದ್ಧರಾಮಯ್ಯ ನೇತೃತ್ವ ಸರ್ಕಾರ ಉತ್ತಮ ಜನಪರ ಕಾರ್ಯಕ್ರಮ ಗಳನ್ನು ನೀಡಿದೆ. ಅದನ್ನು ಯಾರು ಸಹ ಮರೆಯಲು ಸಾಧ್ಯವಿಲ್ಲ. ಕೇಂದ್ರ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಜನರಿಗೆ ಮನ ದಟ್ಟು ಮಾಡಿಕೊಡಬೇಕು. ಪ್ರತಿ ಬೂತ್‌ನಲ್ಲೂ ನಮ್ಮ ಶಕ್ತಿಯನ್ನು ಹೆಚ್ಚಿಸಬೇಕು. ವಸತಿ ಯೋಜನೆಗಳಿಗಾಗಿ ರೈತರಿಂದ ಸ್ವಾಧೀನಪಡಿ ಸಿಕೊಳ್ಳುತ್ತಿರುವ ಭೂಮಿಗೆ ಇನ್ನೆರಡು ತಿಂಗಳ ಒಳಗಾಗಿ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದರು.
ಬಡವರಿಗೆ ಮನೆ ಕಲ್ಪಿಸಿ: ಜಿಪಂ ಸದಸ್ಯ ಕೆ.ಸಿ.ಮಂಜುನಾಥ್ ಮಾತನಾಡಿ, ದೇವನ ಹಳ್ಳಿ ಮೀಸಲು ಕ್ಷೇತ್ರದಲ್ಲಿ ಸಾಕಷ್ಟು ಬಡವರಿ ದ್ದಾರೆ. ಅವರಿಗೆ ವಸತಿ ಯೋಜನೆಯಲ್ಲಿ ಮನೆ ಕಲ್ಪಿಸಿಕೊಡಬೇಕು. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿರುವುದರಿಂದ ಸರ್ಕಾ ರಿ ಜಾಗ ಸಿಗುತ್ತಿಲ್ಲ. ಖಾಸಗಿ ಜಮೀನನ್ನು ಕೊಂಡುಕೊಂಡು ಬಡವರಿಗೆ ವಸತಿ ಕಲ್ಪಿಸಿ ಕೊಟ್ಟರೆ ಅನುಕೂಲವಾಗುತ್ತದೆ ಎಂದು ಮನವಿ ಮಾಡಿದರು.
ಜಿಪಂ ಸದಸ್ಯ ಲಕ್ಷ್ಮೀನಾರಾಯಣ್ ಮಾತ ನಾಡಿ, ವಸತಿ ಯೋಜನೆಯಲ್ಲಿ ಅತಿ ಹೆಚ್ಚು ಮನೆಗಳನ್ನು ತಾಲೂಕಿಗೆ ಮಂಜೂರು ಮಾಡಿ ಕೊಟ್ಟರೆ ಬಡಜನರಿಗೆ ಸಹಕಾರಿಯಾಗುತ್ತದೆ. ಈಗಾಗಲೇ ಪಕ್ಷ ಸಂಘಟನೆ ಮಾಡುತ್ತಿದ್ದೇವೆ. ಈಗಾಗಲೇ, 104 ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಚುನಾವಣೆ ನಡೆ ಯುತ್ತಿದೆ. ಪುರಸಭಾ ಚುನಾವಣೆ ಹಾಗೂ ಲೋಕಸಭಾ ಚುನಾವಣೆಗಳು ಸಮೀಪಿಸು ತ್ತಿದೆ. ಅದಕ್ಕಾಗಿ ಸಭೆಗಳನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ಚೇತನ್ ಗೌಡ, ಜಿಪಂ ಅಧ್ಯಕ್ಷೆ ಜಯಮ್ಮ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷೆ ಆರತಿ ಗಜೇಂದ್ರ, ವಿಜಯಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಮಚಂದ್ರಪ್ಪ, ತಾಪಂ ಮಾಜಿ ಅಧ್ಯಕ್ಷ ನಾರಾಯಣಸ್ವಾಮಿ, ತಾಪಂ ಮಾಜಿ ಸದಸ್ಯ ಲಕ್ಷ್ಮಣ್‌ಗೌಡ, ಪುರಸಭಾ ಮಾಜಿ ಅಧ್ಯಕ್ಷ ಎಂ.ನಾರಾಯಣಸ್ವಾಮಿ, ಅಲ್ಪಸಂಖ್ಯಾತ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಜ್ಜದ್, ಮುಖಂಡರಾದ ಜಿ.ಸುರೇಶ್, ಕಾರಹಳ್ಳಿ ಜಯರಾಮ್, ಜಿ.ರಮೇಶ್, ನಾಗನಾಯಕನಹಳ್ಳಿ ರಮೇಶ್ ಸೇರಿದಂತೆಪಕ್ಷದ ಇತರೇ ಮುಖಂಡರು, ಕಾರ್ಯಕರ್ತರು ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.