ತಂಬಾಕು ಬೆಳೆ ಮುಕ್ತ ಹುಣಸೂರು ಗುರಿ


Team Udayavani, Jan 28, 2019, 7:21 AM IST

m2-tambaku.jpg

ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಂಚಿನ ಹಾಗೂ ಕೊಡಗಿನ ಹೆಬ್ಟಾಗಿಲಾಗಿರುವ ಹುಣಸೂರು ತಾಲೂ ಕನ್ನು ತಂಬಾಕು ಮುಕ್ತವಾಗಿಸಲು ರೈತರಿಗೆ ಅರಿವು ಮೂಡಿಸಲು ರೋಟರಿಯೊಂದಿಗೆ ಕೈಜೋಡಿಸುವುದಾಗಿ ಬೆಂಗಳೂರಿನ ವೈದ್ಯಕೀಯ ಸಂಶೋಧನಾ ಕೇಂದ್ರದ ಮಕ್ಕಳ ಹೃದ್ರೋಗ ವಿಭಾಗದ ಪ್ರಾಧ್ಯಾಪಕಿ ಡಾ. ವಿಜಯಲಕ್ಷ್ಮೀ ಬಾಳೆಕುಂದ್ರಿ ತಿಳಿಸಿದರು.

ನಗರದ ರೋಟರಿ ವಿದ್ಯಾಸಂಸ್ಥೆಯ 25ನೇ ವರ್ಷದ ಅಂಗವಾಗಿ ಕಾಫಿ ವರ್ಕ್ಸ್ ಆವರಣದಲ್ಲಿ ಆಯೋಜಿಸಿದ್ದ ರಜತ ಮಹೋತ್ಸವದಲ್ಲಿ ಮಾತನಾಡಿದ ಅವರು, ಅರಣ್ಯ ಹೊಂದಿರುವ ಪುಣ್ಯಭೂಮಿ ಇದಾಗಿದ್ದು, ಇಂತಹ ಸ್ಥಳದಲ್ಲಿ ತಂಬಾಕು ಬೆಳೆಯುತ್ತಿರುವುದು ದುರಂತ. ಪ್ರತಿ ಒಂದು ಕೆ.ಜಿ. ತಂಬಾಕು ಹದಗೊಳಿಸಲು ಪ್ರತಿಯಾಗಿ 118 ಗಿಡಗಳನ್ನು ನೆಟ್ಟು ಬೆಳೆಸಬೇಕಿದೆ. ರೋಟರಿ ಸಂಸ್ಥೆ ಹುಣಸೂರಿನಲ್ಲಿ ರೈತರಿಗೆ ಪರ್ಯಾಯ ಬೆಳೆಗಳ ಅಗತ್ಯತೆ ಕುರಿತು ಅರಿವು ಮೂಡಿಸುವ ಕಾರ್ಯ ಕೈಗೊಂಡಲ್ಲಿ ತಾವು ಕೂಡ ಅದರಲ್ಲಿ ಭಾಗಿಯಾಗುವುದಾಗಿ ಭರವಸೆ ನೀಡಿದರು.

ಈ ನೆಲದಲ್ಲಿ ಆಂಗ್ಲಭಾಷೆ ವ್ಯಾಮೋಹಕ್ಕೆ ಸಿಲುಕಬೇಡಿ. ಕನ್ನಡ ನಿಮ್ಮ ಆದ್ಯತೆಯಾಗಲಿ. ಆಂಗ್ಲಭಾಷೆ ಕೂಡ ಬೇಕು. ಪ್ರಾಮುಖ್ಯತೆ ಕನ್ನಡವಾಗಲಿ ಎಂದರು. ಎಂಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಜಿ.ಡಿ.ಹರೀಶ್‌ಗೌಡ ಸಂಸ್ಥೆಯ ಸ್ಮರಣ ಸಂಚಿಕೆ ಬಿಡುಗಡೆ ಗೊಳಿಸಿ ಮಾತನಾಡಿ, ಹುಣಸೂರು ರೋಟರಿ ವಿದ್ಯಾಸಂಸ್ಥೆ ಪ್ರತಿವರ್ಷ ಎಸ್‌ಎಸ್‌ಎಲ್‌ಸಿಯಲ್ಲಿ ಸಾಧನೆ ಮಾಡಿತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ರೋಟರಿ ಜಿಲ್ಲೆ 3181ರ ಜಿಲ್ಲಾ ಗವರ್ನರ್‌ ಮೇಜರ್‌ ಡೋನರ್‌ ಪಿ.ರೋಹಿನಾಥ್‌, ನಗರಸಭಾಧ್ಯಕ್ಷ ಎಚ್.ವೈ.ಮಹದೇವ್‌, ರಜತ ಮಹೋತ್ಸವ ಸಮಿತಿ ಅಧ್ಯಕ್ಷ ಶಿವಕುಮಾರ್‌ ವಿ.ರಾವ್‌, ವಿದ್ಯಾಸಂಸ್ಥೆ ಅಧ್ಯಕ್ಷ ಅನಂತರಾಜೇಅರಸ್‌, ರೋಟರಿ ಕ್ಲಬ್‌ ಅಧ್ಯಕ್ಷ ನರಹರಿ, ಕಾರ್ಯದರ್ಶಿ ಸುನೀತಾ ಇತರರಿದ್ದರು.

ಸಾಂಸ್ಕೃತಿಕ ಸೌರಭ: 25ನೇ ವರ್ಷದ ಸವಿ ನೆನಪಿಗಾಗಿ ವಿದ್ಯಾರ್ಥಿಗಳು ಕೇರಳ ನಾಡಿನ ತೈಯ್ಯಂ ನೃತ್ಯದ ಮೂಲಕ ಹಿರಣ್ಯ ಕಶಿಪುವಿನ ಸಂಹಾರ, ಕೇಳರದ ಮೋಹಿನಿ ಯಾಟ್ಟಂ ನೃತ್ಯ, ದಿ ವಿಲನ್‌ ಚಲನಚಿತ್ರದ ರಾವಣ ಸಂಹಾರ ನೃತ್ಯ, ಜಪಾನಿ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ನೃತ್ಯ ಪ್ರದರ್ಶಿಸಿ ಗಮನ ಸೆಳೆದರು.

ಟಾಪ್ ನ್ಯೂಸ್

Sheik Hasina

Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ

Uddav-2

Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್‌ ಶಿವಸೇನೆ ಇಂಗಿತ!

1-kann

Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ

BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?

BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?

Forest

2 ವರ್ಷಗಳಲ್ಲಿ ಕರ್ನಾಟಕದಲ್ಲಿ 459 ಚ.ಕಿ.ಮೀ. ಅರಣ್ಯ ನಾಶ

congress

Ambedkar; ಅವಮಾನ ಖಂಡಿಸಿ ಕಾಂಗ್ರೆಸ್‌ ಆಂದೋಲನ

1-sara

Hindi ಹೇರಿದರೆ ಗೋಕಾಕ್‌ ಮಾದರಿ ಹೋರಾಟ: ಸಾ.ರಾ.ಗೋವಿಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sheik Hasina

Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ

19

Team India: ಎಂಸಿಜಿಯಲ್ಲಿ ಟೀಮ್‌ ಇಂಡಿಯಾ ಅಭ್ಯಾಸ

Uddav-2

Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್‌ ಶಿವಸೇನೆ ಇಂಗಿತ!

suicide

Kota; ಮತ್ತೊಬ್ಬ ವಿದ್ಯಾರ್ಥಿ ಆತ್ಮಹ*ತ್ಯೆ: ವರ್ಷದ 17ನೇ ಕೇಸು

hk-patil

C.T. Ravi ಗೈರು; ಸಾಹಿತ್ಯ ಕ್ಷೇತ್ರದಲ್ಲಿ ರಾಜಕೀಯ ಮಾಡಬಾರದು: ಎಚ್‌.ಕೆ.ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.