ಹುಮನಾಬಾದ ವೀರಭದ್ರೇಶ್ವರ ರಥೋತ್ಸವ ವೈಭವ

Team Udayavani, Jan 28, 2019, 9:30 AM IST

bell-4.jpg

ಹುಮನಾಬಾದ: ನಗರದಲ್ಲಿ ರವಿವಾರ ಕಲ್ಯಾಣ ಕರ್ನಾಟಕದ ಇತಿಹಾಸ ಪ್ರಸಿದ್ಧ, ಸರ್ವಧರ್ಮ ಸಮನ್ವಯತೆ ಖ್ಯಾತಿಯ ಶ್ರೀ ವೀರಭದ್ರೇಶ್ವರ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವೈಭವದಿಂದ ನೆರವೇರಿತು.

ಪಲ್ಲಕ್ಕಿ ಉತ್ಸವದೊಂದಿಗೆ ಆಗಮಿಸಿದ ಹಿರೇಮಠದ ಶ್ರೀ ರೇಣುಕ ಗಂಗಾಧರ ಸ್ವಾಮೀಜಿ ಅವರನ್ನು ಭಕ್ತರು ವಾದ್ಯವೃಂದದೊಂದಿಗೆ ರಥದತ್ತ ಕರೆತಂದರು. ರಥದ ಮುಂಭಾಗದ ಮಂಟಪದಲ್ಲಿ ಬೈವೇದ್ಯಕ್ಕಾಗಿ ಇಡಲಾದ ಎಳ್ಳಿನ ಹೋಳಿಗೆ, ಜೋಳದ ಅನ್ನ ಮೊದಲಾದವುಗಳ ಮೇಲೆ ಹಾಯ್ದು ಸ್ವಾಮೀಜಿ ರಥದಲ್ಲಿ ಆಸೀನರಾಗುತ್ತಿದ್ದ ಹಾಗೆ ಭಕ್ತರಿಂದ ಶ್ರೀ ವೀರಭದ್ರೇಶ್ವರ ಮಹಾಜರಾಕೀ ಜೈ ಎಂಬ ಘೋಷಣೆ ಮುಗಿಲುಮುಟ್ಟಿತು. ಬಳಿಕ ಕಲಬುರಗಿ ಜಿಲ್ಲೆಯ ಶರಣಬಸಪ್ಪ ಕಲ್ಯಾಣಿ ಅವರು ರಥ ಹತ್ತಿದ್ದಾಗ ಭಕ್ತರಿಂದ ಕರತಾಡನ ಕೇಳಿಸುತಿದ್ದಂತೆ ರಥೋತ್ಸವ ಆರಂಭಗೊಂಡಿತು.

ಭಕ್ತರು ರಥದತ್ತ ಬಾಳೆಹಣ್ಣು, ಪೇಡಾ, ಖಾರಿಕ ಮೊದಲಾದ ಸಿಹಿ ತಿನಿಸು ಸಮರ್ಪಿಸಿದರೆ ಇನ್ನೂ ಕೆಲವರು ಹಣವನ್ನು ರಥಕ್ಕೆ ಸಮರ್ಪಿಸಿ ಭಕ್ತಿಸೇವೆ ಸಲ್ಲಿಸಿದರು. ಅಲ್ಲದೇ ವೀರಭದ್ರೇಶ್ವರ ಸ್ವಾಮಿ ಕೃಪೆಯಿಂದ ತಮ್ಮ ಇಷ್ಟಾರ್ಥ ಈಡೇರಿದ್ದಕ್ಕೆ ಭಕ್ತಾದಿಗಳು ವಿಭಿನ್ನ ರೀತಿಯಲ್ಲಿ ತಮ್ಮ ಹರಿಕೆ ತೀರಿಸಿದರು.

ರಥವು ಹಳೆ ತಹಶೀಲ್ದಾರ್‌ ಕಚೇರಿ ಮುಂಭಾಗದ ಬಸವಣ್ಣ ಕಟ್ಟೆ ತಲುಪಿದ ನಂತರ ವೀರಭದ್ರೇಶ್ವರ ಪಲ್ಲಕಿಯನ್ನು ದೇವಸ್ಥಾನ ಕಟ್ಟೆ ಹತ್ತಿಸಿದಾಗ, ಸ್ವಾಮೀಜಿ ಭಕ್ತರತ್ತ ಎಸೆದ ಪ್ರಸಾದ ಹಿಡಿಯಲು ಭಕ್ತರು ಮುಂದಾದರು.

ಸಚಿವರಿಂದ ಕಲಾ ಪ್ರದರ್ಶನ ವೀಕ್ಷಣೆ: ರಥೋತ್ಸವ ಆರಂಭಕ್ಕೆ ಮುನ್ನ ಶಿವಮೊಗ್ಗ ಜಿಲ್ಲೆ ಸಾಗರದ ಶ್ರೀ ಆದಿಶಕ್ತಿ ಮಹಿಳಾ ಡೊಳ್ಳು ಕುಣಿತ ತಂಡದ ನೃತ್ಯ, ಸೊನ್ನಲಪುರದ ಜೋಡುಕುದುರೆ ನೃತ್ಯ, ಬೊಂಬೆ ಕುಣಿತ, ನಂದಿಕೋಲು ಕುಣಿತವನ್ನು ಸಚಿವ ರಾಜಶೇಖರ ಪಾಟೀಲ ವೀಕ್ಷಿಸಿ, ಕಲಾತಂಡಗಳನ್ನು ಪ್ರೋತ್ಸಾಹಿಸಿದರು.

ವಿಧಾನ ಪರಿಷತ್‌ ಸದಸ್ಯ ಡಾ| ಚಂದ್ರಶೇಖರ ಪಾಟೀಲ, ದೇವಸ್ಥಾನ ಸಮಿತಿ ಅಧ್ಯಕ್ಷ ವೀರಣ್ಣ ಪಾಟೀಲ, ತಹಶೀಲ್ದಾರ್‌ ದೇವೇಂದ್ರ ಪಾಣಿ, ಪಿಕೆಪಿಎಸ್‌ ಅಧ್ಯಕ್ಷ ಶರಣಪಗೌಡ ಪಾಟೀಲ, ಜಿಲ್ಲಾ ಸಹಕಾರ ಬ್ಯಾಂಕ್‌ ಉಪಧ್ಯಕ್ಷ ಭೀಮರಾವ ಪಾಟೀಲ, ಅಗ್ನಿಕುಂಡ ಸಮಿತಿ ಅಧ್ಯಕ್ಷ ಡಿ.ಆರ್‌. ಚಿದ್ರಿ, ಪಲ್ಲಕ್ಕಿ ಉತ್ಸವ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಮಳಶಟ್ಟಿ ಇದ್ದರು. ಇದೇ ವೇಳೆ ಜಾತ್ರಾ ಉತ್ಸವ ಯಶಸ್ಸಿಗೆ ಶ್ರಮಿಸಿದವರನ್ನು ಸಚಿವ ರಾಜಶೇಖರ ಪಾಟೀಲ ಸನ್ಮಾನಿಸಿದರು.

ಟಾಪ್ ನ್ಯೂಸ್

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.