ಜ.29: ರೋಟರಿ ಜಿಲ್ಲಾ ಗವರ್ನರ್ ಪರ್ಕಳ ಘಟಕ ಭೇಟಿ
Team Udayavani, Jan 28, 2019, 10:09 AM IST
ಉಡುಪಿ: ರೋಟರಿ ಜಿಲ್ಲಾ ಗವರ್ನರ್ ರೊ. PHF ಅಭಿನಂದನ್ ಶೆಟ್ಟಿಯವರು ಜ.29ರ ಮಂಗಳವಾರದಂದು ರೋಟರಿ ಪರ್ಕಳಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ ಕೃಷ್ಣಾನುಗ್ರಹ ಅನಾಥಾಶ್ರಮಕ್ಕೆ ಭೇಟಿ ನೀಡಿ ಬಳಿಕ ಅಲ್ಲಿ ರೋಟರಾಕ್ಟ್ ವಿದ್ಯಾರ್ಥಿಗಳು ಮತ್ತು ಆಶ್ರಮದ ಮಕ್ಕಳೊಂದಿಗೆ ಸಂವಾದ ನಡೆಸಲಿದ್ದಾರೆ. ತದನಂತರ ಕುಕ್ಕೆಹಳ್ಳಿ ಸರಕಾರಿ ಪ್ರೌಢಶಾಲೆಗೆ ಭೇಟಿ ನೀಡಲಿರುವ ಅವರು ಅಲ್ಲಿ ಇಂಟರ್ ಲಾಕ್ ವ್ಯವಸ್ಥೆಯ ಅನಾವರಣ ಹಾಗೂ ಇಂಟರಾಕ್ಟ್ ಮಕ್ಕಳೊಂದಿಗೆ ಸಂವಾದ ನಡೆಸಲಿದ್ದಾರೆ. ಆ ಬಳಿಕ ಸಾಯಂಕಾಲ ಪರ್ಕಳ ರೋಟರಿ ಅನುದಾನಿತ ಭವನದಲ್ಲಿ ಕ್ಲಬ್ ಅಸೆಂಬ್ಲಿ ನಡೆಯಲಿದೆ. ಅಂತಿಮವಾಗಿ ಪರ್ಕಳ ಹೈಸ್ಕೂಲ್ ಸಭಾಂಗಣದಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪರ್ಕಳ ರೋಟರಿಯ ಅಧ್ಯಕ್ಷರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಸಾಯಂಕಾಲ ಪರ್ಕಳ ಹೈಸ್ಕೂಲ್ ಸಭಾಂಗಣದಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ವೃತ್ತಿಪರ ಸೇವಾ ಮಾಸಾಚರಣೆಯ ಅಂಗವಾಗಿ ಸಾಧಕರಿಗೆ ಸಮ್ಮಾನ, ವಲಯ ಸೇನಾನಿಯವರಿಂದ ಸುನಂದಾ ಶೆಟ್ಟಿಯವರಿಗೆ ಸಹಾಯಧನ ಹಸ್ತಾಂತರ, ಕ್ಲಬ್ ಬುಲೆಟಿನ್ ‘ರೋಟರಿ ಧ್ವನಿ’ ಬಿಡುಗಡೆ, ವಿಶೇಷ ಪ್ರತಿಭಾ ಪ್ರದರ್ಶನ, TRF ದೇಣಿಗೆ ಹಸ್ತಾಂತರ ಸಹಿತ ಇನ್ನಿತರ ಪೂರ್ವನಿರ್ಧಾರಿತ ಕಾರ್ಯಕ್ರಮಗಳು ನಡೆಯಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ
Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.