ಕುಷ್ಠರೋಗ ಅರಿವು ಆಂದೋಲನ ಭಿತ್ತಿಪತ್ರ ಬಿಡುಗಡೆ

Team Udayavani, Jan 29, 2019, 9:23 AM IST

bid-2.jpg

ಬೀದರ: ಜ.30ರಿಂದ ಫೆಬ್ರವರಿ 13ರ ವರೆಗೆ ಜಿಲ್ಲಾದ್ಯಂತ ನಡೆಯಲಿರುವ ಸ್ಪರ್ಶ ಕುಷ್ಠರೋಗ ಅರಿವು ಆಂದೋಲನ-2019ರ ಭಿತ್ತಿ ಪತ್ರ, ಕರಪತ್ರ ಬ್ಯಾನರ್‌ಗಳನ್ನು ಸೋಮವಾರ ಜಿಲ್ಲಾ ಪಂಚಾಯತ್‌ ಕಚೇರಿಯಲ್ಲಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಾಂತೇಶ ಬೀಳಗಿ ಬಿಡುಗಡೆಗೊಳಿಸಿದರು.

ಈ ವೇಳೆ ಮಾತನಾಡಿದ ಅವರು, ಎಲ್ಲಾ ಗ್ರಾಮ ಪಂಚಾಯಿತಿ, ಪುರಸಭೆಗಳಲ್ಲಿ ಅಧ್ಯಕ್ಷರ ನೇತೃತ್ವದಲ್ಲಿ ಕುಷ್ಠರೋಗ ನಿವಾರಿಸಲು ‘ಕೈ ಕೈ ಜೋಡಿಸಿ ಕುಷ್ಠ ನಿವಾರಿಸಿ’ ಎಂಬ ಘೋಷಣೆಯಂದಿಗೆ ಸಾರ್ವಜನಿಕರ ಸಮೂಹದಲ್ಲಿ ಪ್ರತಿಜ್ಞೆ ಸ್ವೀಕರಿಸಬೇಕು. ಜಿಲ್ಲಾ, ತಾಲೂಕು, ಹೋಬಳಿ ಹಾಗೂ ಗ್ರಾಮ ಮಟ್ಟದಲ್ಲಿಯೂ ಈ ಕಾರ್ಯಕ್ರಮ ನಡೆಯಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕಾರ್ಯಕ್ರಮ ಯಶಸ್ವಿಗೊಳಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ, ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳಾ ಅಭಿವೃದ್ಧಿ ಇಲಾಖೆ ಸೇರಿದಂತೆ ಇನ್ನಿತರೆ ಇಲಾಖೆಗಳ ಸಹಕಾರ ಪಡೆಯುವಂತೆ ಸಲಹೆ ನೀಡಿದರು.ಕುಷ್ಠರೋಗದಿಂದ ಉಂಟಾಗುವ ಅಂಗವಿಕಲತೆಗಳ ಬಗ್ಗೆ ಜನರು ತಮ್ಮ ನೆರೆ- ಹೊರೆಯವರಿಗೆ ತಿಳಿಸುವಂತಾಗಬೇಕು. ಚಿಕಿತ್ಸೆ ಸಂದರ್ಭದಲ್ಲಿ ರೋಗಿಗಳನ್ನು ತಾರತಮ್ಯದಿಂದ ಕಾಣದೇ ಗೌರವಯುತವಾಗಿ ಉಪಚರಿಸಬೇಕು ಎಂದು ನಿರ್ದೇಶನ ನೀಡಿದರು.

ಇದು ಸಾಂಕ್ರಾಮಿಕ ರೋಗವಾಗಿದ್ದು, ಯಾವುದೇ ಶಾಪ-ಪಾಪದಿಂದ ಬರದೇ ಮೈಕೋ ಬ್ಯಾಕ್ಟ್ರೀಯಾ ಲೆಪ್ರ ಎಂಬ ರೋಗಾಣುವಿನಿಂದ ಬರುತ್ತದೆ. ಸೋಂಕಿತ ವ್ಯಕ್ತಿ ಸೀನುವುದು, ಕೆಮ್ಮಿದಾಗ ಹೊರಬರುವ ರೋಗಾಣುಗಳು ಗಾಳಿಯಲ್ಲಿ ಸೇರಿ ಒಬ್ಬರಿಂದೊಬ್ಬರಿಗೆ ಹರಡುತ್ತದೆ. ಈ ಕಾಯಿಲೆ ಇರುವವರು ಹೆದರಬೇಕಾಗಿಲ್ಲ. ರೋಗವನ್ನು ಗುಪ್ತವಾಗಿಡದೇ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾದಿಕಾರಿಗಳಿಗೆ ಭೇಟಿಯಾಗಿ ಚಿಕಿತ್ಸೆ ಪಡೆಯಬೇಕು ಎನ್ನುವ ತಿಳಿವಳಿಕೆ ಎಲ್ಲರಲ್ಲಿಯೂ ಮೂಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ| ಎಂ.ಎ.ಜಬ್ಟಾರ್‌, ಜಿಲ್ಲಾ ಕುಷ್ಠರೋಗ ಅಧಿಕಾರಿ ಡಾ| ರಾಜಶೇಖರ ಪಾಟೀಲ, ಮೇಲ್ವಿಚಾರಕ ವೀರಶೆಟ್ಟಿ ಚನ್ನಶೆಟ್ಟಿ, ಎಲ್ಲಾ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?

1-libbb

Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ

sidda dkshi

CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

HDK (3)

Siddaramaiah; ಕೊಳ್ಳೆ ಹೊಡೆಯುತ್ತಿದ್ದರೂ ನಿಮ್ಮನ್ನು ಮುಟ್ಟಬಾರದಾ: ಎಚ್‌ಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?

1-libbb

Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ

sidda dkshi

CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.