ಸಿಇಟಿ ನೋಂದಣಿ ಶುಲ್ಕ ಕಡಿಮೆ ಮಾಡಲು ನಿರ್ಧಾರ
Team Udayavani, Jan 30, 2019, 12:30 AM IST
ಬೆಂಗಳೂರು: ವೃತ್ತಿಪರ ಕೋರ್ಸ್ಗಳ ಸೀಟು ಹಂಚಿಕೆಗೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನೋಂದಣಿ ಶುಲ್ಕವನ್ನು ಕಡಿಮೆ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿರ್ಧರಿಸಿದೆ. ವಿದ್ಯಾರ್ಥಿನಿ ಯರಿಗೆ ಸಿಇಟಿ ನೋಂದಣಿ ಶುಲ್ಕದಲ್ಲಿ ಶೇ. 50ರಷ್ಟು ವಿನಾಯಿತಿ ನೀಡುವ ಬಗ್ಗೆಯೂ ಪ್ರಾಧಿಕಾರ ಚಿಂತನೆ ನಡೆಸಿದೆ.
2018ರಲ್ಲಿ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ 650 ರೂ. ಸಿಇಟಿ ನೋಂದಣಿ ಶುಲ್ಕ ನಿಗದಿ ಮಾಡ ಲಾಗಿತ್ತು. ಈ ವರ್ಷ ಅದನ್ನು 500 ರೂಪಾಯಿಗಳಿಗೆ ನಿಗದಿ ಪಡಿಸಲಾಗಿದೆ. ಕಳೆದ ವರ್ಷ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ 500 ರೂ. ಶುಲ್ಕ ನಿಗದಿ ಮಾಡಲಾಗಿತ್ತು. ಈ ವರ್ಷ ಸಿಇಟಿ ಬರೆಯಲಿರುವ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ 250 ರೂ. ಶುಲ್ಕ ನಿಗದಿ ಮಾಡಲಾಗುವುದು ಎಂದು ಪ್ರಾಧಿಕಾರದ ಮೂಲಗಳು ಖಚಿತಪಡಿಸಿವೆ.
ಎಲ್ಲ ಜಿಲ್ಲೆಗಳಲ್ಲೂ ದಾಖಲಾತಿ ಪರಿಶೀಲನೆ ಕೇಂದ್ರ
ಸಿಇಟಿ ಬರೆದು, ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸೀಟು ಹಂಚಿಕೆಯ ಮೊದಲು ಮೂಲ ದಾಖಲೆಗಳ ಪರಿ ಶೀಲನೆ ಮಾಡಲಾಗುತ್ತದೆ. ಬೆಂಗ ಳೂರಿನ ಮಲ್ಲೇಶ್ವರದ 18ನೇ ಕ್ರಾಸ್ ನಲ್ಲಿರುವ ಪ್ರಾಧಿಕಾರದ ಕೇಂದ್ರ ಕಚೇರಿ ಸಹಿತವಾಗಿ ರಾಜ್ಯದ 14 ಕಡೆ ಗಳಲ್ಲಿ ದಾಖಲಾತಿ ಪರಿಶೀಲನೆ ಮಾಡ ಲಾಗುತಿತ್ತು. ಉಳಿದ 16 ಜಿಲ್ಲೆಗಳಲ್ಲೂ ದಾಖ ಲಾತಿ ಪರಿಶೀಲನೆ ಕೇಂದ್ರ ತೆರೆಯುವ ಬಗ್ಗೆಯೂ ಪ್ರಾಧಿಕಾರ ಗಂಭೀರ ಚಿಂತನೆ ನಡೆಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.