ಕಾಂಗ್ರೆಸ್‌ಗೆ ಈಗ 3ಜಿ, ಪ್ರಿಯಾಂಕಾ ನೇಮಕಕ್ಕೆ ಅಮಿತ್‌ ಶಾ ಲೇವಡಿ

Team Udayavani, Jan 30, 2019, 12:50 AM IST

amith-shah.jpg

ಕಂಥಿ/ಕೊಚ್ಚಿ: ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಪ್ರಿಯಾಂಕಾ ಗಾಂಧಿ ವಾದ್ರಾರನ್ನು ನೇಮಿಸಿದ್ದರಿಂದ ಕಾಂಗ್ರೆಸ್‌ “ಮೂರನೇ ಜಿ’ ಹೊಂದಿದಂತಾಗಿದೆ. ಈಗಾಗಲೇ 2 “ಜಿ’ಗಳು ಅಂದರೆ ಸೋನಿಯಾ ಜಿ ಮತ್ತು ರಾಹುಲ್‌ ಜಿ ಇದ್ದಾರೆ. ಅವರಿಬ್ಬರ ವಿರುದ್ಧ ಗುರುತರ ಭ್ರಷ್ಟಾಚಾರದ ಆರೋಪಗಳಿವೆ. ಈಗ ಅದಕ್ಕೆ ಪ್ರಿಯಾಂಕಾಜೀ ಸೇರ್ಪಡೆ ಯಾಗಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಲೇವಡಿ ಮಾಡಿದ್ದಾರೆ. 

ಪಶ್ಚಿಮ ಬಂಗಾಲದ ಕಂಥಿ ಮತ್ತು ಒಡಿಶಾದ ಕುಲಿಯಾದಲ್ಲಿ ಸಾರ್ವಜನಿಕ ಸಭೆಗಳಲ್ಲಿ ಅವರು ಮಾತನಾಡಿದ್ದಾರೆ. ಕಂಥಿಯಲ್ಲಿ ಮಾತನಾಡಿದ ಶಾ, ವಂಶಪಾರಂಪರ್ಯವಾಗಿ ಆಡಳಿತ ನಡೆಸುವ ಪಕ್ಷ ದೇಶ ಸೇವೆ ಮಾಡಲು ಸಾಧ್ಯವಿಲ್ಲ. ಬದಲಿಗೆ ಅಸಹಾಯಕ ಸರ್ಕಾರ ಮಾತ್ರ ನೀಡಲು ಸಾಧ್ಯ ಎಂದು ಲೇವಡಿ ಮಾಡಿದ್ದಾರೆ.

ಬಂಗಾಳ ಉದ್ವಿಗ್ನ: ಅಮಿತ್‌ ಶಾ ಅವರು ಭಾಷಣ ಮಾಡಿ ತೆರಳುತ್ತಿ ದ್ದಂತೆಯೇ, ರ್ಯಾಲಿ ನಡೆದ ಸ್ಥಳದಲ್ಲಿ ತೃಣಮೂಲ ಕಾಂಗ್ರೆಸ್‌ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನವಾಗಿದೆ. ಉಭಯ ಬಣದಿಂದ ಕಲ್ಲು ತೂರಾಟ ನಡೆದಿದ್ದು, ತಕ್ಷಣವೇ ಕ್ಷಿಪ್ರ ಕಾರ್ಯಪಡೆಯನ್ನು (ಆರ್‌ಎಎಫ್) ಕರೆಯಿಸಿ, ಪರಿಸ್ಥಿತಿಯನ್ನು ಹತೋಟಿಗೆ ತರಲಾಗಿದೆ. ಸಿಎಂ ಮಮತಾ ಬ್ಯಾನರ್ಜಿಗೆ ಕರೆ ಮಾಡಿದ ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಇದರ ಬೆನ್ನಲ್ಲೇ, ತನ್ನ ಕಚೇರಿಯೊಂದನ್ನು ಬಿಜೆಪಿ ಧ್ವಂಸ ಮಾಡಿದೆ ಎಂದು ಟಿಎಂಸಿ ಆರೋಪಿಸಿದೆ.

15 ಮಂದಿಗೆ ಮಾತ್ರ: ಕೇರಳದಲ್ಲಿ ಕಾಂಗ್ರೆಸ್‌ ಪರ ಲೋಕಸಭೆ ಪ್ರಚಾರ ಆರಂಭಿಸಿದ ರಾಹುಲ್‌ ಗಾಂಧಿ, “ಪ್ರಧಾನಿ ನರೇಂದ್ರ ಮೋದಿ ಕೇವಲ 15 ಮಂದಿ ಸ್ನೇಹಿತರಿಗೆ ಮಾತ್ರ ಕನಿಷ್ಠ ಆದಾಯ ಬರುವಂತೆ ಮಾಡಿದ್ದಾರೆ’ ಎಂದು ಲೇವಡಿ ಮಾಡಿದ್ದಾರೆ. ಕೊಚ್ಚಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಶೇ.33ರಷ್ಟು ಮೀಸಲು ನಿಯಮಕ್ಕೆ ಅನುಮೋದನೆ ಪಡೆದು ಜಾರಿಗೊಳಿಸಲಿದೆ ಎಂದಿದ್ದಾರೆ. 

ರಾಮನಂತೆ ರಾಹುಲ್‌
ಫೆ.3ರಂದು ಪಾಟ್ನಾದಲ್ಲಿ ಕಾಂಗ್ರೆಸ್‌ ಜನಾಕ್ರೋಶ ರ್ಯಾಲಿ ನಿಗದಿಯಾಗಿದೆ. ಅದಕ್ಕೆ ಪೂರಕವಾಗಿ ಬಿಹಾರದ ರಾಜಧಾನಿಯಲ್ಲಿ ಪ್ರಕಟವಾಗಿರುವ ಪೋಸ್ಟರ್‌ನಲ್ಲಿ ರಾಹುಲ್‌ ಗಾಂಧಿಯವರನ್ನು ಶ್ರೀರಾಮನಂತೆ ಚಿತ್ರಿಸಲಾಗಿದೆ. ಪ್ರಧಾನಿ ಮೋದಿಯವರಿಗಿಂತ ರಾಹುಲ್‌ ಗಾಂಧಿಯವರಿಗೇ ಶ್ರೀರಾಮನ ಗುಣಲಕ್ಷಣಗಳಿವೆ ಎಂದು ಕಾಂಗ್ರೆಸ್‌ ಕಾರ್ಯಕರ್ತರೊಬ್ಬರು ಹೇಳಿದ್ದಾರೆ.

ಟಾಪ್ ನ್ಯೂಸ್

Belthangady-River

Belthangady: ಸ್ನಾನಕ್ಕಾಗಿ ನದಿಗೆ ತೆರಳಿದ್ದ ಮೂವರು ಯುವಕರು ನೀರುಪಾಲು!

Shirasi-1

Sirasi: ಭಾರತಕ್ಕೆ ಆಮದಾಗುವ ಅಕ್ರಮ ಅಡಿಕೆಗಳಿಗೆ ತಡೆಯೊಡ್ಡಿ; ಬೆಳೆಗಾರರ ಪ್ರತಿನಿಧಿಗಳ ನಿಯೋಗ

Rishab Shetty: ʼಜೈ ಹನುಮಾನ್‌ʼ ಬಳಿಕ ಮತ್ತೊಂದು ತೆಲುಗು ಸಿನಿಮಾದಲ್ಲಿ ರಿಷಬ್‌ ಶೆಟ್ಟಿ?

Rishab Shetty: ʼಜೈ ಹನುಮಾನ್‌ʼ ಬಳಿಕ ಮತ್ತೊಂದು ತೆಲುಗು ಸಿನಿಮಾದಲ್ಲಿ ರಿಷಬ್‌ ಶೆಟ್ಟಿ?

Kambala: ಶಿರ್ವ ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನ

Kambala: ಶಿರ್ವ ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನ

Video: ಮದುವೆ ಮೆರವಣಿಗೆಯ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

Video: ಮದುವೆ ಸಂಭ್ರಮದ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

16-MGM-1

MGM: ಮಹಾತ್ಮ ಗಾಂಧಿ ಮೆಮೋರಿಯಲ್‌ ಕಾಲೇಜು; ಅಮೃತ ಮಹೋತ್ಸವ

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ಮದುವೆ ಮೆರವಣಿಗೆಯ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

Video: ಮದುವೆ ಸಂಭ್ರಮದ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ

Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ

Mumbai: ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!

Mumbai: ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!

Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು

Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು

1-ddssas

Jammu; ವೈಷ್ಣೋದೇವಿ ರೋಪ್‌ವೇ ವಿವಾದ: ಪ್ರತಿಭಟನೆಗಿಳಿದವರು ವಶಕ್ಕೆ, ಎಫ್ಐಆರ್

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Belthangady-River

Belthangady: ಸ್ನಾನಕ್ಕಾಗಿ ನದಿಗೆ ತೆರಳಿದ್ದ ಮೂವರು ಯುವಕರು ನೀರುಪಾಲು!

4

Karkala: ನಲ್ಲೂರು; ಮಹಿಳೆ ಆತ್ಮಹ*ತ್ಯೆ

TAMATE MOVIE: ಟೀಸರ್‌ನಲ್ಲಿ ತಮಟೆ ಸದ್ದು

TAMATE MOVIE: ಟೀಸರ್‌ನಲ್ಲಿ ತಮಟೆ ಸದ್ದು

Shirasi-1

Sirasi: ಭಾರತಕ್ಕೆ ಆಮದಾಗುವ ಅಕ್ರಮ ಅಡಿಕೆಗಳಿಗೆ ತಡೆಯೊಡ್ಡಿ; ಬೆಳೆಗಾರರ ಪ್ರತಿನಿಧಿಗಳ ನಿಯೋಗ

Jalandhara Kannada Movie: ಜಲಂಧರ ಮೇಲೆ ಪ್ರಮೋದ್‌ ಕಣ್ಣು

Jalandhara Kannada Movie: ಜಲಂಧರ ಮೇಲೆ ಪ್ರಮೋದ್‌ ಕಣ್ಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.