ಕರಾವಳಿಗೆ ಪ್ರತ್ಯೇಕ ಮರಳು ನೀತಿ
Team Udayavani, Jan 30, 2019, 4:01 AM IST
ಉಡುಪಿ: ಕರಾವಳಿಯಲ್ಲಿ ಸಾಂಪ್ರದಾಯಿಕ ರೀತಿಯಲ್ಲಿ ಮರಳು ತೆಗೆಯುತ್ತಿದ್ದು, ಇತರ ಜಿಲ್ಲೆಗಳ ನಿಯಮಗಳು ಇಲ್ಲಿಗೆ ಅನ್ವಯಿಸುವುದಿಲ್ಲ. ಆದ್ದರಿಂದ ಕರಾವಳಿ ಜಿಲ್ಲೆಯಲ್ಲಿ ಮರಳುಗಾರಿಕೆ ಕುರಿತಂತೆ ಪ್ರತ್ಯೇಕ ನೀತಿ ರೂಪಿಸಲು ಕ್ಯಾಬಿನೆಟ್ ಉಪ ಸಮಿತಿಯಲ್ಲಿ ಚರ್ಚಿಸಲಾಗುವುದು ಎಂದು ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಸಚಿವ ರಾಜಶೇಖರ್ ಪಾಟೀಲ್ ತಿಳಿಸಿದ್ದಾರೆ.
ಅವರು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಪ್ರಗತಿ ಪರಿಶೀಲನ ಸಭೆಯಲ್ಲಿ ಮಾತ
ನಾಡಿದರು. ಪ್ರತ್ಯೇಕ ಮರಳು ನೀತಿಗೆ ಅನುಗುಣವಾಗಿ ಸೇರಿಸಬಹುದಾದ ಅಂಶಗಳ ಕುರಿತು ವಿವರವಾದ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.
ಜಿಲ್ಲೆಯಲ್ಲಿ ಪ್ರಸ್ತುತ ಗುರುತಿಸಲಾಗಿರುವ 23 ನಾನ್ ಸಿಆರ್‌ಝಡ್ ವ್ಯಾಪ್ತಿಯಲ್ಲಿ ಮರಳು ತೆಗೆಯುವ ಕುರಿತಂತೆ ಪಿಡಬ್ಯೂಡಿ, ಕೆಆರ್‌ಐಡಿಎಲ್, ಪಿಆರ್‌ಇಡಿ ಸೇರಿದಂತೆ ವಿವಿಧ ಸರಕಾರಿ ಏಜೆನ್ಸಿಗಳಿಗೆ ಹಾಗೂ ಪ್ರಾಯೋಗಿಕವಾಗಿ ಈ ಮರಳು ದಿಬ್ಬವ್ಯಾಪ್ತಿಯ 2 ಗ್ರಾ.ಪಂ.ಗಳಿಗೆ ಪ್ರಾಯೋಗಿಕ ಅನುಮತಿ ನೀಡುವ ಕುರಿತು ನಿರ್ಧರಿಸಲಾಯಿತು.
ಸುದ್ದಿಗಾರರ ಜತೆ ಮಾತನಾಡಿದ ಸಚಿವರು, ಸಿಆರ್‌ಝಡ್ ವ್ಯಾಪ್ತಿಯ 30 ಮರಳು ದಿಬ್ಬಗಳಲ್ಲಿ ಐದಕ್ಕೆ ಕೆಸಿ
ಝಡ್‌ಎಂಪಿ (ಕರ್ನಾಟಕ ಕರಾವಳಿ ವಲಯ ನಿರ್ವಹಣಾ ಯೋಜನೆ) ಅನುಮೋದನೆ ಸಿಕ್ಕಿದೆ. ಇನ್ನು ಎಂಟಕ್ಕೆ ಎಂಟು ದಿನಗಳೊಳಗೆ ಅನುಮತಿ ಸಿಗಲಿದೆ. ಹೀಗಾದರೆ 13-13 ಲ.ಮೆ.ಟನ್ ಅಂದಾಜು ಮರಳು ಲಭ್ಯವಾಗಲಿದೆ.
ನಾನ್‌ಸಿಆರ್‌ಝಡ್ ಮರಳು ತೆಗೆಯಲು ಸರಕಾರದ ಇತರ ಇಲಾಖೆಗೂ ಅವಕಾಶ ನೀಡಲಾಗಿದೆ ಎಂದರು.
ವಿಧಾನ ಪರಿಷತ್ ವಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ವಿಧಾನಸಭೆಯ ವಿಪಕ್ಷದ ಮುಖ್ಯ ಸಚೇತಕ ವಿ. ಸುನೀಲ್ ಕುಮಾರ್, ಸಂಸದೆ ಶೋಭಾ ಕರಂದ್ಲಾಜೆ, ಶಾಸಕರಾದ ರಘುಪತಿ ಭಟ್, ಲಾಲಾಜಿ ಮೆಂಡನ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ಬಿ.ಎಂ. ಸುಕುಮಾರ ಶೆಟ್ಟಿ, ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ. ಮಹೇಶ್ವರ ರಾವ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕಠಾರಿಯಾ, ನಿರ್ದೇಶಕ ಪ್ರಸನ್ನ ಕುಮಾರ್, ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಜಿ.ಪಂ. ಸಿಇಒ ಸಿಂಧು ಬಿ ರೂಪೇಶ್, ಎಸ್ಪಿ ಲಕ್ಷ್ಮಣ ಬ. ನಿಂಬರಗಿ, ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಪದ್ಮಜ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಸಭೆ ಮುನ್ನ ಸಚಿವರು ಧರಣಿ ನಿರತರನ್ನು ಉದ್ದೇಶಿಸಿ ಮಾತನಾಡಿದರು.
ನಾನ್ ಸಿಆರ್‌ಝಡ್ ಮರಳುಗಾರಿಕೆಗೆ ಅನುಮತಿ
ಮಂಗಳೂರು: ಸಚಿವ ರಾಜಶೇಖರ ಬಿ. ಪಾಟೀಲ ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಇಲಾಖಾ ಪ್ರಗತಿ ಪರಿಶೀಲನ ಸಭೆ ನಡೆಸಿದ್ದು, ನಾನ್ ಸಿಆರ್‌ಝಡ್‌ನಲ್ಲಿ ಮರಳುಗಾರಿಕೆ ನಡೆಸಲು ಅನುಮತಿ ನೀಡುವಂತೆ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಎಲ್ಲರಿಗೆ ಗುತ್ತಿಗೆ: ಭರವಸೆ; ಧರಣಿ ಅಂತ್ಯ
ನಾವು ಎಲ್ಲ 171 ಗುತ್ತಿಗೆದಾರರಿಗೆ ಮರಳು ತೆಗೆಯಲು ಅವಕಾಶ ನೀಡಬೇಕೆಂದು ಒತ್ತಾಯಿಸಿದ್ದೆವು. ಇವರಲ್ಲಿ 79 ಜನರು ನಿಯಮ ಉಲ್ಲಂ ಸಿದ್ದಾರೆಂಬ ಕಾರಣಕ್ಕೆ ಜಿಲ್ಲಾಡಳಿತ ಪರವಾನಿಗೆ ರದ್ದು ಮಾಡಿತ್ತು. ಇದೇನೂ ಅಕ್ರಮ ಮರಳುಗಾರಿಕೆಯಂತಹ ನಿಯಮ ಉಲ್ಲಂಘನೆಯಲ್ಲ. ಕೇವಲ ಜಿಪಿಎಸ್ ಉಲ್ಲಂಘನೆ. ಇದನ್ನು ರದ್ದುಪಡಿಸಿ ಎಲ್ಲರಿಗೂ ಗುತ್ತಿಗೆ ಕೊಡುವುದಾಗಿ ಸಚಿವರು ಭರವಸೆ ನೀಡಿದ್ದಾರೆ. ಜಿಲ್ಲೆಯನ್ನು ಒಂದು ಕ್ಲಸ್ಟರ್ ಆಗಿ ಮಾಡಬೇಕೆಂಬ ಬೇಡಿಕೆಗೂ ಒಪ್ಪಿದ್ದಾರೆ. ಬೇಡಿಕೆ ಈಡೇರಿಸುವ ಸಚಿವರ ಭರವಸೆ ಹಿನ್ನೆಲೆಯಲ್ಲಿ ಧರಣಿ ಹಿಂದಕ್ಕೆ
ಪಡೆಯುತ್ತೇವೆ.
ಕೆ. ರಘುಪತಿ ಭಟ್, ಶಾಸಕ, ಉಡುಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ
Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್ ಕುಮಾರ್
Udupi: ರೈಲು ಬಡಿದು ವ್ಯಕ್ತಿ ಸಾವು
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Karkala: ಬಾವಿಗೆ ಬಿದ್ದು ವ್ಯಕ್ತಿ ಸಾವು; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ ಪಡೆ
MUST WATCH
ಹೊಸ ಸೇರ್ಪಡೆ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.