ಪಾಕ್ಪರ ಘೋಷಣೆ: ವಾಟ್ಸ್ಆ್ಯಪ್ ಅಡ್ಮಿನ್ಗಿಲ್ಲ ಜಾಮೀನು
Team Udayavani, Jan 30, 2019, 6:49 AM IST
ಬೆಂಗಳೂರು: ವಾಟ್ಸ್ಆ್ಯಪ್ ಗ್ರೂಪ್ವೊಂದರಲ್ಲಿ ಸದಸ್ಯರು “ಪಾಕಿಸ್ತಾನ್ ಜಿಂದಾಬಾದ್’ ಎಂದು ಪೋಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆ ವಾಟ್ಸ್ಆ್ಯಪ್ ಗ್ರೂಪ್ ಅಡ್ಮಿನ್ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲು ಧಾರವಾಡ ಹೈಕೋರ್ಟ್ ಪೀಠ ನಿರಾಕರಿಸಿದೆ. ನಿರೀಕ್ಷಣಾ ಜಾಮೀನು ಕೋರಿ ವಾಟ್ಸ್ಆ್ಯಪ್ ಗ್ರೂಪ್ನ ಅಡ್ಮಿನ್ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಭಟ್ಟರ ನರಸಾಪುರ ನಿವಾಸಿ ಮುಸ್ತಫಾ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ. ಕೆ.ಎಸ್. ಮುದಗಲ್ ಅವರಿದ್ದ ನ್ಯಾಯಪೀಠ ವಜಾಗೊಳಿಸಿದೆ.
ಪ್ರಕರಣದಲ್ಲಿ ಆರೋಪಿ ವಿರುದ್ಧ ಇನ್ನೂ ಚಾರ್ಜ್ಶೀಟ್ ಸಲ್ಲಿಕೆಯಾಗಿಲ್ಲ ಎಂಬ ಕಾರಣಕ್ಕೆ 2018ರ ಡಿ.6ರಂದು ಈಗಾಗಲೇ ಇದೇ ಹೈಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದೆ. ಜಾಮೀನು ಮಂಜೂರು ಮಾಡಲು ಆರೋಪಿಯು ಸೂಕ್ತ ಕಾರಣಗಳನ್ನು ಒದಗಿಸಿಲ್ಲ ಎಂದು ಅಭಿಪ್ರಾಯಪಟ್ಟಿರುವ ನ್ಯಾ. ಮುದಗಲ್ ಅವರಿದ್ದ ನ್ಯಾಯಪೀಠ ನಿರೀಕ್ಷಣಾ ಜಾಮೀನು ಮಂಜೂರು ಮಾಡಲು ನಿರಾಕರಿಸಿ 2018ರ ಡಿ.27ರಂದು ಆದೇಶಿಸಿದೆ.
ಪ್ರಕರಣವೇನು?: ನನಗೆ ಪರಿಚಯಸ್ಥರಾದ ಮುಸ್ತಫಾ ಹಾಗೂ ನಿರುಪಾದಿಗೌಡ ಇಬ್ಬರು ಸೇರಿ “ಐಎಎಸ್ ಫ್ಯಾನ್ಸ್-ಬಿ.ನರಸಾಪುರ’ ಹೆಸರಿನ ವಾಟ್ಸ್ಆ್ಯಪ್ ಗ್ರೂಪ್ ಮಾಡಿ ಅಡ್ಮಿನ್ಗಳಾಗಿದ್ದಾರೆ. 63 ಸದಸ್ಯರು ಈ ಗ್ರೂಪ್ನಲ್ಲಿದ್ದಾರೆ. 2018ರ ಆ.14ರಂದು ಶಬ್ಬಿರ್ ಸಾಬ್ ಎಂಬುವರು “ಪಾಕಿಸ್ತಾನ್ ಜಿಂದಾಬಾದ್’ ಎಂಬ ಘೋಷಣೆ ಬರೆದು ಗ್ರೂಪ್ನಲ್ಲಿ ಹಾಕಿದ್ದಾರೆ. ಈ ರೀತಿ ಪಾಕಿಸ್ತಾನ ಪರ ಘೋಷಣೆ ಮೂಲಕ ಭಾರತದ ವಿರುದ್ಧ ದ್ವೇಷ ಭಾವನೆ ವ್ಯಕ್ತಪಡಿಸಲಾಗಿದೆ ಎಂದು ಹನುಮನಗೌಡ ಸಕ್ರಗೌಡ ನಾಯಕ್ ಎಂಬುವರು ಕನಕಗಿರಿ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.