ಬರ ಪರಿಹಾರ ವಿತರಣೆಯಲ್ಲಿ ಕೇಂದ್ರದಿಂದ ಅನ್ಯಾಯ
Team Udayavani, Jan 31, 2019, 12:30 AM IST
ಬೆಂಗಳೂರು: ಉದ್ಯೋಗ ಖಾತರಿ ಯೋಜನೆಯಡಿ ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ 1,800 ಕೋಟಿ ರೂ.ಬಾಕಿ ಬರಬೇಕಿದ್ದು, ರೈತರು ಸಂಕಷ್ಟದಲ್ಲಿದ್ದರೂ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ. ಹಾಗೆಯೇ ಬರ ಪರಿಹಾರ ವಿತರಣೆಯಲ್ಲೂ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಕೃಷ್ಣ ಬೈರೇಗೌಡ ಬೇಸರ ವ್ಯಕ್ತಪಡಿಸಿದ್ದಾರೆ.
ಬುಧವಾರ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉದ್ಯೋಗ ಖಾತರಿ ಯೋಜನೆಯಡಿ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಬಾಕಿ ಹಾಗೂ ಬರ ಪರಿಹಾರ ವಿತರಣೆಯಲ್ಲಿ ರಾಜ್ಯಕ್ಕೆ ಕೇಂದ್ರದ ತಾರತಮ್ಯ ಧೋರಣೆ ಬಗ್ಗೆಯೂ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಯಿತು. ಉದ್ಯೋಗ ಖಾತರಿ ಯೋಜನೆಯಡಿ ಈ ವರ್ಷ ಕೂಲಿ ಖಾತೆ ಹಾಗೂ ಪೂರಕ ಸಲಕರಣೆ ಖಾತೆಗೆ ಒಟ್ಟು 850 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ಈವರೆಗೆ ಪಾವತಿಸಿಲ್ಲ. ಕಾಲಮಿತಿಯಲ್ಲಿ ಪಾವತಿಸಬೇಕೆಂಬ ಕಾನೂನಿದ್ದರೂ ಪಾಲನೆಯಾಗುತ್ತಿಲ್ಲ. ಹಾಗಿದ್ದರೂ ವಿನಾಕಾರಣ ರಾಜ್ಯ ಸರ್ಕಾರ ಹಣ ಪಾವತಿಸದೆ ತಡೆ ಹಿಡಿಯುತ್ತಿದೆ ಎಂದು ಆರೋಪಿಸುವುದು ಸರಿಯಲ್ಲ ಎಂದು ದೂರಿದರು. ಕೇಂದ್ರ ಸರ್ಕಾರವು ಬರ ಪರಿಹಾರ ವಿತರಣೆಯಲ್ಲೂ ತಾರತಮ್ಯ ತೋರಿದೆ. ಕೇಂದ್ರವು ಮಹಾರಾಷ್ಟ್ರಕ್ಕೆ ಸುಮಾರು 4,200 ಕೋಟಿ ರೂ.ಪರಿಹಾರ ಘೋಷಿಸಿದ್ದರೆ ತೀವ್ರ ಬರದಿಂದ ತತ್ತರಿಸಿರುವ ಕರ್ನಾಟಕಕ್ಕೆ 949 ಕೋಟಿ ರೂ.ಪರಿಹಾರ ಘೋಷಿಸಿದೆ. ಬಿಜೆಪಿ ನಾಯಕರು ರಾಜ್ಯಕ್ಕೆ ನ್ಯಾಯ ಕೊಡಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್
Illegal Property Case: ಸಚಿವ ಜಮೀರ್ ಅಹ್ಮದ್ಖಾನ್ಗೆ ಲೋಕಾಯುಕ್ತದಿಂದ ನೋಟಿಸ್
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!
MUST WATCH
ಹೊಸ ಸೇರ್ಪಡೆ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.