ವಿದ್ಯುತ್‌ ವಾಹನಗಳ ಉತ್ಪಾದನೆ ಹೆಚ್ಚಾಗಲಿ

Team Udayavani, Jan 31, 2019, 5:49 AM IST

blore-3.jpg

ಬೆಂಗಳೂರು: ವಿದ್ಯುತ್‌ ಚಾಲಿತ ವಾಹನಗಳ ಉತ್ಪಾದನೆಯಲ್ಲಿ ಕರ್ನಾಟಕವು ದೇಶದ ರಾಜಧಾನಿಯಾಗಿ ಹೊರಹೊಮ್ಮಬೇಕು ಎಂದು ಬೃಹತ್‌ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್‌ ತಿಳಿಸಿದರು.

ಇಂಡಿಯನ್‌ ಚೇಂಬರ್‌ ಆಫ್ ಕಾಮರ್ಸ್‌ ನಗರದ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ ‘ವಿದ್ಯುತ್‌ ವಾಹನಗಳ ಶೃಂಗಸಭೆ’ಯಲ್ಲಿ ಮಾತನಾಡಿದ ಅವರು, ಪರಿಸರ ಹಾನಿ, ವಾಯುಮಾಲಿನ್ಯವನ್ನು ತಪ್ಪಿಸುವ ನಿಟ್ಟಿನಲ್ಲಿ ಉತ್ಕೃಷ್ಟ ವಿದ್ಯುತ್‌ ಚಾಲಿತ ವಾಹನಗಳ ಉತ್ಪಾದನೆ ಹಾಗೂ ಬಳಕೆ ಹೆಚ್ಚಾಗಬೇಕು. ಈ ನಿಟ್ಟಿನಲ್ಲಿ ದೇಶಾದ್ಯಂತ 2 ಲಕ್ಷ ಕೋಟಿ ರೂ.ಗಳ ಹೂಡಿಕೆಯಾಗಿದೆ. ರಾಜ್ಯದಲ್ಲಿಯೂ 31 ಸಾವಿರ ಕೋಟಿ ರೂ. ಬಂಡವಾಳ ಹೂಡಿಕೆಯಾಗುತ್ತಿದ್ದು, ವಿದ್ಯುತ್‌ ವಾಹನಗಳ ಉತ್ಪಾದನೆಯಲ್ಲಿ ಇಡೀ ದೇಶದಲ್ಲೇ ಕರ್ನಾಟಕ ರಾಜ್ಯವನ್ನು ಮುಂಚೂಣಿಗೆ ತರಲು ಎಲ್ಲ ರೀತಿಯ ನೆರವನ್ನು ಸರ್ಕಾರ ಒದಗಿಸಲಿ ಎಂದು ಹೇಳಿದರು.

ರೇವಾ ಕಂಪನಿ ವಿದ್ಯತ್‌ ವಾಹನಗಳನ್ನು ಮಾರುಕಟ್ಟೆಗೆ ಪರಿಚಯಿಸುವ ಮೂಲಕ ವಿದ್ಯುತ್‌ ವಾಹನಗಳ ಕ್ಷೇತ್ರದಲ್ಲಿ ಮುಂದಾಳತ್ವ ವಹಿಸಿದೆ. ಪ್ರಸ್ತುತ ಮಹೀಂದ್ರ ಕಂಪನಿ ಎಲೆಕ್ಟ್ರಿಕ್‌ ವಾಹನಗಳ ಉತ್ಪಾದನೆ ಮೂಲಕ ಮತ್ತೂಂದು ಹೆಜ್ಜೆ ಮುಂದಿಟ್ಟಿದೆ. ಇದರಿಂದ ರಾಜ್ಯದಲ್ಲಿ 31 ಸಾವಿರ ಕೋಟಿ ರೂ ಬಂಡವಾಳ ಹೂಡಿಕೆಯಾಗುತ್ತಿದ್ದು, 55 ಸಾವಿರ ಉದ್ಯೋಗಗಳು ಸೃಷ್ಟಿಯಾಗಲಿವೆ. ಪ್ರಸ್ತುತ ಎಲೆಕ್ಟ್ರಿಕ್‌ ವಾಹನಗಳ ಬೆಲೆ ಹೆಚ್ಚಿದ್ದು, ಬೇಡಿಕೆಯು ಕಡಿಮೆಯಿದ್ದು, ಬಳಕೆ ಹೆಚ್ಚಾದಂತೆ ಉತ್ಪಾದನೆಯು ಹೆಚ್ಚಾಗುತ್ತದೆ. ಬೆಲೆಯಲ್ಲಿಯೂ ಇಳಿಕೆಯಾಗುತ್ತದೆ. ಉತ್ಪಾದನೆ, ವಹಿವಾಟು ವೃದ್ಧಿಸಲು ತೈವಾನ್‌ ಕಂಪನಿ ಈ ಶೃಂಗ ಸಭೆಯಲ್ಲಿ 350 ಕೋಟಿ ಹೂಡಿಕೆ ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ತಿಳಿಸಿದರು.

ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್‌ ಗುಪ್ತ ಮಾತನಾಡಿ, ಮುಂದಿನ ಕೆಲವೇ ದಿನಗಳಲ್ಲಿ ವಿದ್ಯುತ್‌ ವಾಹನಗಳ ಯುಗವೇ ಆರಂಭವಾಗಲಿದೆ. ಪರಿಸರ ರಕ್ಷಣೆ, ಆರ್ಥಿಕ ಮಿತವ್ಯಯದಿಂದಾಗಿ ವಿದ್ಯುತ್‌ ಚಾಲಿತ ವಾಹನಗಳು ಹೆಚ್ಚು ಸೂಕ್ತ. ರಾಜ್ಯ ಸರ್ಕಾರ ವಿದ್ಯುತ್‌ ವಾಹನ ನಿಲುಗಡೆಗೆ ಒಂದು ವ್ಯವಸ್ಥೆ ಮಾಡಿ, ಆ ಸ್ಥಳದಲ್ಲಿಯೇ ಚಾರ್ಜಿಂಗ್‌ ಪಾಯಿಂಟ್ ತೆರೆಯಲು ನಿರ್ಧರಿಸಿದೆ. ಮುಂದಿನ ದಿನಗಳಲ್ಲಿ ನಗರಾದ್ಯಂತ 108 ಕಡೆ ವಿದ್ಯುತ್‌ ವಾಹನಗಳ ಚಾರ್ಜಿಂಗ್‌ ಪಾಯಿಂಟ್‌ಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು.

ಕೈಗಾರಿಕೆ ಮತ್ತು ವಾಣಿಜ್ಯ ಅಭಿವೃದ್ಧಿ ಇಲಾಖೆ ಆಯುಕ್ತ ದರ್ಪನ್‌ ಜೈನ್‌, ಟೆಕೊ ಎಲೆಕ್ಟ್ರಿಕ್‌ ಕಂಪನಿ ಅಧ್ಯಕ್ಷ ಜಾರ್ಜ್‌ ಲಿಯನ್‌, ಡಬ್ಲ್ಯೂಇವಿಐಒ ಸಂಸ್ಥೆ ಅಧ್ಯಕ್ಷ ಕಾಲ್ವಿನ್‌ ಯಿ, ದಕ್ಷಿಣ ಕೋರಿಯಾದ ಭಾರತದ ರಾಯಭಾರಿ ಶೈನ್‌ ಬೋಂಗ್‌ ಕಿಲ್‌, ಐಸಿಸಿ ಪ್ರಧಾನ ನಿರ್ದೇಶಕ ಡಾ.ರಾಜೀವ್‌ ಸಿಂಗ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Temperature: ಕರಾವಳಿಯಲ್ಲಿ ಹೆಚ್ಚಿದ ಚಳಿಯ ತೀವ್ರತೆ: ಗ್ರಾಮೀಣ ಭಾಗದಲ್ಲಿ ಹೆಚ್ಚು ಕಚಗುಳಿ

Temperature: ಕರಾವಳಿಯಲ್ಲಿ ಹೆಚ್ಚಿದ ಚಳಿಯ ತೀವ್ರತೆ: ಗ್ರಾಮೀಣ ಭಾಗದಲ್ಲಿ ಹೆಚ್ಚು ಕಚಗುಳಿ

US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್‌: ವಿವಾದ

US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್‌: ವಿವಾದ

Hemmadyಸೇವಂತಿಗೆ ತಳಿ ಸಂರಕ್ಷಣೆ: ತೋಟಗಾರಿಕೆ ಅಧಿಕಾರಿಗಳು,ಕೃಷಿ ವಿಜ್ಞಾನಿಗಳಿಂದ ಸ್ಥಳ ಭೇಟಿ

Hemmadyಸೇವಂತಿಗೆ ತಳಿ ಸಂರಕ್ಷಣೆ: ತೋಟಗಾರಿಕೆ ಅಧಿಕಾರಿಗಳು,ಕೃಷಿ ವಿಜ್ಞಾನಿಗಳಿಂದ ಸ್ಥಳ ಭೇಟಿ

Cong-sabhe

Congress Session: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಜ.21ಕ್ಕೆ ಮರುನಿಗದಿ

sunil-karkala

ಎಎನ್‌ಎಫ್‌ಗೆ ಸಿಗದ ನಕ್ಸಲರು ಸಿಎಂಗೆ ಸಿಕ್ಕಿದ್ದು ಹೇಗೆ?: ಶಾಸಕ ಸುನೀಲ್‌ ಕುಮಾರ್‌

Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ

Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ

Minister-CR-patil

Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Naxals-Meet-Cm

Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

3

Atul Subhash Case: ಮೊಮ್ಮಗನನ್ನು ಟೆಕಿ ಅತುಲ್‌ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Temperature: ಕರಾವಳಿಯಲ್ಲಿ ಹೆಚ್ಚಿದ ಚಳಿಯ ತೀವ್ರತೆ: ಗ್ರಾಮೀಣ ಭಾಗದಲ್ಲಿ ಹೆಚ್ಚು ಕಚಗುಳಿ

Temperature: ಕರಾವಳಿಯಲ್ಲಿ ಹೆಚ್ಚಿದ ಚಳಿಯ ತೀವ್ರತೆ: ಗ್ರಾಮೀಣ ಭಾಗದಲ್ಲಿ ಹೆಚ್ಚು ಕಚಗುಳಿ

15

Siddapura: ಟ್ರಾಯ್‌ನಿಂದ ಕರೆ ಮಾಡುವುದಾಗಿ 10.39 ಲಕ್ಷ ರೂ. ವಂಚನೆ

Suilla

Padubidri: ಸಾಲಬಾಧೆ; ನೇಣು ಬಿಗಿದುಕೊಂಡು ವ್ಯಕ್ತಿ ಸಾವು

US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್‌: ವಿವಾದ

US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್‌: ವಿವಾದ

Hemmadyಸೇವಂತಿಗೆ ತಳಿ ಸಂರಕ್ಷಣೆ: ತೋಟಗಾರಿಕೆ ಅಧಿಕಾರಿಗಳು,ಕೃಷಿ ವಿಜ್ಞಾನಿಗಳಿಂದ ಸ್ಥಳ ಭೇಟಿ

Hemmadyಸೇವಂತಿಗೆ ತಳಿ ಸಂರಕ್ಷಣೆ: ತೋಟಗಾರಿಕೆ ಅಧಿಕಾರಿಗಳು,ಕೃಷಿ ವಿಜ್ಞಾನಿಗಳಿಂದ ಸ್ಥಳ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.